3 ಕಾರ್ಯಕರ್ತರಿಗೆ ಗಡಿಪಾರು ನೋಟಿಸ್
Team Udayavani, Jul 16, 2017, 11:44 AM IST
ಮೈಸೂರು: ಹುಣಸೂರಿನ ನಮ್ಮ ಮೂವರು ಕಾರ್ಯಕರ್ತರಿಗೆ ಜಿಲ್ಲಾಧಿಕಾರಿ ಮೂಲಕ ಗಡಿಪಾರು ನೋಟಿಸ್ ಜಾರಿ ಮಾಡುವ ಮೂಲಕ ಸಂಘಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ, ಕೊಲೆಗಡುಕರನ್ನು ಪೋ›ಕೆಲಸ ಮಾಡಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ದೂರಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಟ್ವಾಳದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಅವರನ್ನು ಹತ್ಯೆ ಮಾಡಿದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರೀತಿ ಪ್ರಾತ್ರರೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದರು. ತನ್ನನ್ನೂ ಸೇರಿದಂತೆ ರಾಜ್ಯದ ಆರೂವರೆ ಕೋಟಿ ಜನರಿಗೆ ನೀವೇ ಮುಖ್ಯಮಂತ್ರಿ, ಶರತ್ ನಮ್ಮ ಕಾರ್ಯಕರ್ತ, ಆತನನ್ನು ನಿಮ್ಮ ಪ್ರೀತಿಪಾತ್ರರೇ ಹತ್ಯೆ ಮಾಡಿದ್ದಾರೆ ಎಂಬುದು ನಿಮಗೆ ತಿಳಿದಿಲ್ಲವೆ ಎಂದು ಪ್ರಶ್ನಿಸಿದರು.
ಮಂಗಳೂರು ಗಲಭೆ ವಿಚಾರದಲ್ಲಿ ಹಿಂದೂ ಸಂಘಟನೆಗಳಿಗೆ ಎಚ್ಚರಿಕೆ ಕೊಡುವ ಮುಖ್ಯಮಂತ್ರಿಗೆ ಮುಸ್ಲಿಂ ಸಂಘಟನೆಗಳ ಹೆಸರೇಳಲೂ ಭಯ, ಕರಾವಳಿ ಭಾಗದಲ್ಲಿ ಶಾಂತಿ ಕದಡುತ್ತಿರುವುದು ಯಾಸಿನ್ ಭಟ್ಕಳ್, ರಿಯಾಜ್ ಭಟ್ಕಳ್ ಎಂಬುದು ಜಗತ್ತಿಗೆ ಗೊತ್ತಿದ್ದರೂ ಮುಖ್ಯಮಂತ್ರಿಗೆ ತಮ್ಮ ಮತಬ್ಯಾಂಕ್ ಕೈತಪ್ಪಿ ಹೋಗುತ್ತದೆ ಎಂಬ ಕಾರಣಕ್ಕೆ ಅವರ ಹೆಸರೇಳಲು ಭಯವೇ? ಅಥವಾ ಕೊಲೆಗಡುಕರ ಮೇಲೇ ಪ್ರೀತಿಯೇ ಎಂದು ಪ್ರಶ್ನಿಸಿದರು.
ಈಗಾಗಲೇ ನಾಲ್ಕು ವರ್ಷ ಎರಡು ತಿಂಗಳು ಕಳೆದಿದ್ದೀರಿ, ಉಳಿದಿರುವ 10 ತಿಂಗಳಾದರೂ ರಾಜ್ಯದ ಮುಖ್ಯಮಂತ್ರಿಯಂತೆ ನಡೆದುಕೊಳ್ಳಿ, ಕಾನೂನು ಸುವ್ಯವಸ್ಥೆ ಕಾಪಾಡಿ, ಉತ್ತಮ ಆಡಳಿತ ಕೊಡಿ ಎಂದು ಹೇಳಿದರು. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ರಾಜ್ಯದಲ್ಲಿ ಬಂಡವಾಳ ಹೂಡಲು ಉದ್ಯಮಿಗಳು ಮುಂದೆ ಬರುತ್ತಿಲ್ಲ. ಇದರಿಂದ ರಾಜ್ಯದ ಆರ್ಥಿಕತೆಗೆ ಹೊಡೆತ ಬೀಳಲಿದೆ ಈ ಬಗ್ಗೆ ಎಚ್ಚರವಹಿಸಿ ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.