ಗ್ರಾಮೀಣ ಭಾಗದ ಟೆಸ್ಟ್‌ ಪೈಕಿ ಶೇ.30 ಪಾಸಿಟಿವ್‌

ಗ್ರಾಮಾಂತರ ಪ್ರದೇಶದಲ್ಲಿ ನಿತ್ಯ 1700ಕ್ಕೂ ಹೆಚ್ಚು ಕೋವಿಡ್‌ ಪರೀಕ್ಷೆ

Team Udayavani, Oct 14, 2020, 2:40 PM IST

mysuru-tdy-1

ಮೈಸೂರು: ಕೋವಿಡ್ ಸೋಂಕು ಇತ್ತೀಚೆಗೆ ಗ್ರಾಮೀಣ ಪ್ರದೇಶದಲ್ಲೂ ಹೆಚ್ಚಾಗಿ ಹರಡುತ್ತಿರುವುದರಿಂದ ಪ್ರತಿದಿನ 1700ಕ್ಕೂ ಹೆಚ್ಚು ಟೆಸ್ಟ್‌ ಮಾಡಲಾಗುತ್ತಿದ್ದು, ಶೇ.30ರಷ್ಟು ಪಾಸಿಟಿವ್‌ ಕೇಸ್‌ ಗಳು ಪತ್ತೆಯಾಗುತ್ತಿವೆ ಎಂದು ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಡಿ.ಭಾರತಿ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲೂ ಕೋವಿಡ್ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದ್ದು, 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್‌ ಟೆಸ್ಟ್‌ ಮಾಡುತ್ತಿದ್ದೇವೆ. ಆಯಾ ಪಂಚಾಯಿತಿ ಮಟ್ಟದಲ್ಲಿ ಕೋವಿಡ್‌ ಪರೀಕ್ಷೆ ಮಾಡಲಾಗುತ್ತಿದೆ. ಎಲ್ಲಾ ತಾ. ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಬೆಡ್‌ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಆಸ್ಪತ್ರೆಯಲ್ಲಿ 50 ಆಕ್ಸಿಜನ್‌ ಬೆಡ್‌ಗಳನ್ನು ಕೋವಿಡ್‌ ಚಿಕಿತ್ಸೆಗೆ ಮೀಸಲಿಡಲಾಗಿದೆ. ಜೊತೆಗೆ ತಾಲೂಕು ಆಸ್ಪತ್ರೆಗಳಲ್ಲಿ ಹೆಚ್ಚುವರಿ ಸಿಬ್ಬಂದಿ ಗಳ ನೇಮಕ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಹಾಗೆಯೇ ಗ್ರಾಮೀಣ ಭಾಗದ ಪಾಸಿಟಿವ್‌ ಪ್ರಕರಣಗಳಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಸೋಂಕಿತರಿಗೆ ಹೋಂ ಐಸೊಲೇಷನ್‌ ವ್ಯವಸ್ಥೆ ಇರುವುದಿಲ್ಲ. ನಂಜನ ಗೂಡು ಹಾಗೂ ತಿ. ನರಸೀಪುರ ಹೊರತುಪಡಿಸಿ ಉಳಿದ ತಾಲೂಕುಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆ ಇದೆ. ಸೋಂಕಿನ ಲಕ್ಷಣಗಳಿರುವ ಎಲ್ಲರೂ ಸ್ಥಳೀಯ ಆಸ್ಪತ್ರೆಗೆ ತೆರಳಿ ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಎಲ್ಲರೂ ಮನೆ ಮನೆಗಳಲ್ಲಿಯೇ ಇದ್ದು ಟೀವಿಗಳಲ್ಲಿ ದಸರಾ ನೋಡಿ. ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗುತ್ತದೆ. ಗ್ರಾಮೀಣ ಭಾಗದ ಜನರು ನಗರಕ್ಕೆ ಬಂದು ಕೋವಿಡ್ ಹಬ್ಬಲು ಅವಕಾಶ ಮಾಡಿಕೊಡಬೇಡಿ. 60 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ ಮಕ್ಕಳು ಅನಾವಶ್ಯಕವಾಗಿ ಓಡಾಡುವುದನ್ನು ನಿಲ್ಲಿಸಿ ಎಂದು ಅವರು ಮನವಿ ಮಾಡಿದ್ದಾರೆ.

ದಯವಿಟ್ಟು ದಸರಾಗೆ ಬರಬೇಡಿ: ಭಾರತಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂಂದ‌ಗ್ರಾಮೀಣ ಭಾಗದ ಜನತೆ ದಯವಿಟ್ಟು ದಸರಾಗೆ ಬರಬೇಡಿ. ಈ ಬಾರಿ ಸರಳ ದಸರಾವಾದ್ದರಿಂದ ‌ ಜಂಬೂಸವಾರಿ ಮೆರವಣಿಗೆ ಇರುವುದಿಲ್ಲ. ತಾಂತ್ರಿಕ ತಂಡದ ವರದಿಯಂತೆ ಅರಮನೆಯಲ್ಲಿ ಮಾತ್ರ ಜಂಬೂಸವಾರಿ ನಡೆಯಲಿದೆ. ಅರಮನೆ ಒಳಗೆ 300 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಸಾರ್ವಜನಿಕರಿಗೆ ನೇರವಾಗಿ ಜಂಬೂಸವಾರಿ ನೋಡುವ ಅವಕಾಶ ಇರುವುದಿಲ್ಲ. ಹಾಗಾಗಿ ಅನಾವಶ್ಯಕವಾಗಿ ಗ್ರಾಮೀಣ ಪ್ರದೇಶದ ‌ ಜನರು ನಗರಕ್ಕೆ ಬರಬೇಡಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಿ. ಭಾರತಿ ಮನವಿ ಮಾಡಿದರು.

ಟಾಪ್ ನ್ಯೂಸ್

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

1-atul-subhash

Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಯುವತಿ ನಾಪತ್ತೆ

Belthangady: ಯುವತಿ ನಾಪತ್ತೆ

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

ರೈಲಿನಲ್ಲಿ ಹೃದಯಾಘಾತ ಕೇರಳ ಮೂಲದ ವ್ಯಕ್ತಿ ಸಾವು

ರೈಲಿನಲ್ಲಿ ಹೃದಯಾಘಾತ ಕೇರಳ ಮೂಲದ ವ್ಯಕ್ತಿ ಸಾವು

SA vs Pak, 2nd Test: ರಿಕಲ್ಟನ್‌ ದ್ವಿಶತಕ, ದಕ್ಷಿಣ ಆಫ್ರಿಕಾ ಬೃಹತ್‌ ಮೊತ್ತ

SA vs Pak, 2nd Test: ರಿಕಲ್ಟನ್‌ ದ್ವಿಶತಕ, ದಕ್ಷಿಣ ಆಫ್ರಿಕಾ ಬೃಹತ್‌ ಮೊತ್ತ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.