ಇಂದಿನಿಂದ 35ನೇ ವಾರ್ಷಿಕ ರಾಜ್ಯಮಟ್ಟದ ವೈದ್ಯಕೀಯ ಸಮ್ಮೇಳನ
Team Udayavani, May 19, 2017, 12:19 PM IST
ಮೈಸೂರು: ಮೈಸೂರು ಅಸೋಸಿಯೇಷನ್ ಆಫ್ ಫಿಸಿಷಿಯನ್ ವಿಭಾಗದ ವತಿಯಿಂದ ಜೆಎಸ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಮೈಸೂರು ವೈದ್ಯಕೀಯ ವಿದ್ಯಾಲಯಗಳ ಸಹಭಾಗಿತ್ವದಲ್ಲಿ 35ನೇ ವಾರ್ಷಿಕ ರಾಜ್ಯಮಟ್ಟದ ವೈದ್ಯಕೀಯ ಸಮ್ಮೇಳನವನ್ನು (ಕೆಪಿಕಾನ್-2017) ಮೇ 19ರಿಂದ 21ರವರೆಗೆ ನಗರದಲ್ಲಿ ಆಯೋಜಿಸಲಾಗಿದೆ.
ಶಿವರಾತ್ರೀಶ್ವರ ನಗರದಲ್ಲಿರುವ ಜೆಎಸ್‌ಎಸ್ ವೈದ್ಯಕೀಯ ವಿದ್ಯಾಲಯದಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ದೇಶದ ವಿವಿಧ ಭಾಗಗಳಿಂದ 1500 ಕ್ಕಿಂತಲೂ ಹೆಚ್ಚು ವೈದ್ಯರು ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಗ್ರಾಮೀಣ ಭಾಗದಲ್ಲಿ ರೋಗಿಗಳ ಉತ್ತಮ ಆರೈಕೆ ಎಂಬ ಮುಖ್ಯ ಧ್ಯೇಯದೊಂದಿಗೆ ಹಮ್ಮಿಕೊಳ್ಳಲಾಗಿರುವ ಈ ಸಮ್ಮೇಳನದಲ್ಲಿ ಸುಮಾರು 50ಕ್ಕೂ ಹೆಚ್ಚು ದೇಶ, ವಿದೇಶಗಳ ತಜ್ಞ ವೈದ್ಯರು ವಿವಿಧ ವಿಷಯಗಳ ವಿಚಾರ ಸಂಕಿರಣಗಳಲ್ಲಿ ಪಾಲ್ಗೊಂಡು, ವೈದ್ಯಕೀಯ ರಂಗದಲ್ಲಿ ತೀವ್ರಗತಿಯಲ್ಲಿ ಆಗುತ್ತಿರುವ ಬದಲಾವಣೆಗಳನ್ನು ತಿಳಿಸಲಿದ್ದಾರೆ.
ಇದು ರೋಗಿಗಳ ಆರೋಗ್ಯವನ್ನು ಪರಿಣಾಮಕಾರಿಯಾಗಿ ಸುಧಾರಿಸಲು ಮತ್ತು ವಿದ್ಯಾರ್ಥಿಗಳ ಜಾnನವನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಕೆಪಿಕಾನ್-2017ರ ಕಾರ್ಯಕಾರಿ ಅಧ್ಯಕ್ಷ ಡಾ.ಎಚ್.ಬಸವನಗೌಡಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮ್ಮೇಳನದ ಅಂಗವಾಗಿ ಏರ್ಪಡಿಸಲಾಗಿರುವ ಮುಂದುವರಿದ ಶೈಕ್ಷಣಿಕ ಕಾರ್ಯಕ್ರಮವನ್ನು (ಸಿಎಂಇ) ಮೇ 19 ರಂದು ಬೆಳಗ್ಗೆ 10 ಗಂಟೆಗೆ ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನ ಶ್ರೀ ರಾಜೇಂದ್ರ ಸಭಾಂಗಣದಲ್ಲಿ ಅಮೆರಿಕನ್ ಕಾಲೇಜು ಆಫ್ ಫಿಸಿಷಿಯನ್ ಇಂಡಿಯಾ ಚಾಪ್ಟರ್ ಗವರ್ನರ್ ಡಾ.ಅರುಮುಗಂ ಮುರುಗನಾಥನ್ ಉದ್ಘಾಟಿಸಲಿದ್ದಾರೆ.
ಕೆಪಿಕಾನ್ 2017ರ ವಿಜಾnನ ಸಮಿತಿ ಅಧ್ಯಕ್ಷ ಡಾ.ಬಿ.ಎಸ್.ನಾಗರಾಜು ಅಧ್ಯಕ್ಷತೆ ವಹಿಸಲಿದ್ದು, ಎಪಿಐ ಕರ್ನಾಟಕ ವಿಭಾಗದ ಅಧ್ಯಕ್ಷ ಡಾ.ಕೆ.ಆರ್.ರವೀಂದ್ರ, ಕಾರ್ಯದರ್ಶಿ ಡಾ.ಎಂ.ರವಿ ಕೀರ್ತಿ, ಸಲಹೆಗಾರ ಡಾ.ಎಂ.ಪ್ರೇಮನಾಥ್, ಸಂಚಾಲಕ ಡಾ.ಎಚ್.ಎಸ್.ಪ್ರಸನ್ನ ವಿಶೇಷ ಆಹ್ವಾನಿತರಾಗಿರುವರು.
ಇದೇ ಸಂದರ್ಭದಲ್ಲಿ ಹೊಸ ಔಷಧಗಳನ್ನು ಪರಿಚಯಿಸುವ ಸಲುವಾಗಿ ವಿವಿಧ ಔಷಧ ಕಂಪೆನಿಗಳ ಉತ್ಪನ್ನಗಳ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಮುಡಾ ಆಯುಕ್ತ ಡಾ.ಮಹೇಶ್ ಬೆಳಗ್ಗೆ 11 ಗಂಟೆಗೆ ಔಷಧ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ.
ಅದೇ ದಿನ ಸಂಜೆ 6 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕೆಪಿಕಾನ್ 2017 ವೈದ್ಯಕೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಎಪಿಐ ಕರ್ನಾಟಕ ವಿಭಾಗದ ಅಧ್ಯಕ್ಷ ಡಾ.ಕೆ.ಆರ್. ರವೀಂದ್ರ ಅಧ್ಯಕ್ಷತೆ ವಹಿಸುವರು. ರಾಜವಂಶಸ್ಥರಾದ ಡಾ.ಪ್ರಮೋದಾದೇವಿ ಒಡೆಯರ್, ಡಾ.ಅರುಮುಗಂ ಮುರುಗನಾಥನ್, ಡಾ.ವೈ.ಜೆ. ವಿಶ್ವೇಶ್ವರರೆಡ್ಡಿ, ಡಾ.ಬಿ.ಎಸ್.ನಾಗರಾಜ, ಡಾ.ಎಂ.ರವಿಕೀರ್ತಿ ಮತ್ತು ಡಾ.ಜೆ.ಶರಣಪ್ಪ ವಿಶೇಷ ಆಹ್ವಾನಿತರಾಗಿರುವರು.
ಕೆಪಿಕಾನ್ ವೈದ್ಯಕೀಯ ಸಮ್ಮೇಳನ 2017ರ ಸಮಾರೋಪ ಮೇ 21 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದ್ದು, ನಗರ ಪೊಲೀಸ್ ಆಯುಕ್ತ ಡಾ.ಸುಬ್ರಮಣ್ಯೇಶ್ವರರಾವ್ ಮುಖ್ಯ ಅತಿಥಿಗಳಾಗಿರುವರು. ಜೆಎಸ್‌ಎಸ್ ವಿವಿ ಕುಲಪತಿ ಡಾ.ಬಿ.ಸುರೇಶ್ ಗೌರವ ಅತಿಥಿಗಳಾಗಿ ಭಾಗವಹಿಸಿ ವಿವಿಧ ಶೈಕ್ಷಣಿಕ ಸ್ಪ$ರ್ಧೆಗಳಲ್ಲಿ ಗೆದ್ದವರಿಗೆ ಬಹುಮಾನಗಳನ್ನು ವಿತರಿಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.