ಮೈಸೂರು ಜಿಲ್ಲೆಯಲ್ಲಿ 361 ಮಂದಿಗೆ ಸೋಂಕು
Team Udayavani, Aug 7, 2020, 10:25 AM IST
ಮೈಸೂರು: ಜಿಲ್ಲೆಯಲ್ಲಿ ಗುರುವಾರ 361 ಮಂದಿಗೆ ಸೋಂಕು ದೃಢಪಟ್ಟಿದ್ದರೆ, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.
ಆದರೆ, ಇತರ ದಿನಗಳಿಗೆ ಹೋಲಿಸಿದರೆ ಸಾವಿನ ಸಂಖ್ಯೆ ಗುರುವಾರ ಕಡಿಮೆಯಾಗಿದೆ. ಸೋಂಕಿನಿಂದ ಬಳಲುತ್ತಿದ್ದ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 198ಕ್ಕೆ ಏರಿಕೆಯಾಗಿದೆ. 78 ಹಾಗೂ 46 ವರ್ಷದ ಇಬ್ಬರು ಮಹಿಳೆಯರು, 38 ಹಾಗೂ 40 ವರ್ಷದ ಇಬ್ಬರು ಪುರುಷರು ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ.
361 ಮಂದಿಗೆ ಸೋಂಕು: ಮೈಸೂರಿನಲ್ಲಿ ಗುರುವಾರ 361 ಮಂದಿಗೆ ಸೋಂಕು ತಗುಲಿದೆ. ಇದರಿಂದ ಸೋಂಕಿತರ ಸಂಖ್ಯೆ 6476ಕ್ಕೆ ಏರಿಕೆಯಾಗಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 216 ಮಂದಿಗೆ ಪಾಸಿಟಿವ್ ಆದರೆ, ವಿಷಮಶೀತ ಜ್ವರದಿಂದ (ಐಎಲ್‌ಐ) 62, ಹಾಗೂ ಪ್ರವಾಸದ ಹಿನ್ನೆಲೆ ಹೊಂದಿರುವ 83 ಮಂದಿಗೆ ಸೋಂಕು ತಗುಲಿದೆ. 152 ಮಂದಿ ಗುಣಮುಖ: ಜಿಲ್ಲೆಯಲ್ಲಿ ಗುಣಮುಖ ರಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದ್ದು, ಗುರುವಾರ 152 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಗುಣಮುಖವಾದವರ ಸಂಖ್ಯೆ 2494ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 3784 ಮಂದಿ ಸಕ್ರೀಯ ಸೋಂಕಿತರಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆತಲ್ಲಿ 240, ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 840, ಖಾಸಗಿ ಆಸ್ಪತ್ರೆಗಳಲ್ಲಿ 229, ಹೋಂ ಐಸೋಲೇಷನ್‌ನಲ್ಲಿ 2416, ಖಾಸಗಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 59 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ 77 ಪ್ರದೇಶಗಳನ್ನು ಕಂಟೈನ್ಮೆಂಟ್ ಪ್ರದೇಶಗಳೆಂದು ಗುರುತಿಸಿದ್ದು, ಸೀಲ್‌ಡೌನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!
Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್ ಧನ್‌ಕರ್
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.