Operation kaveri ಸೂಡಾನ್ ನಿಂದ 16 ಮಂದಿ ಹುಣಸೂರಿಗೆ ವಾಪಸ್
ಸಂಕಷ್ಟಕ್ಕೆ ಸಿಲುಕಿದ್ದ ಹಕ್ಕಿಪಿಕ್ಕಿ ಸಮುದಾಯದ 56 ಮಂದಿ
Team Udayavani, Apr 29, 2023, 10:35 PM IST
ಹುಣಸೂರು: ಆಂತರಿಕ ಯುದ್ದ ಪೀಡಿತ ಸೂಡಾನ್ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಹುಣಸೂರು ತಾಲೂಕಿನ ಪಕ್ಷಿರಾಜಪುರದ ಹಕ್ಕಿಪಿಕ್ಕಿ ಸಮುದಾಯದ 16 ಮಂದಿ ಪ್ರಥಮ ಹಂತದಲ್ಲಿ ಶುಕ್ರವಾರ ಮಧ್ಯರಾತ್ರಿ ಸುರಕ್ಷಿತವಾಗಿ ಮನೆ ಸೇರಿಕೊಂಡಿದ್ದಾರೆ.
ಕೇಂದ್ರ ಸರಕಾರ ಆಪರೇಷನ್ ಕಾವೇರಿ ಮೂಲಕ ಸೂಡಾನ್ ನಿಂದ ವಿಶೇಷ ವಿಮಾನದಲ್ಲಿ ಶನಿವಾರ ಬೆಂಗಳೂರಿಗೆ ಬಂದು ಅಲ್ಲಿದ ಸ್ವಗ್ರಾಮಕ್ಕೆ ಕರೆತರಲಾಗಿದೆ. ಉಳಿದವರು ಎರಡನೇ ಹಂತದಲ್ಲಿ ಬರಲಿದ್ದಾರೆ.
ಕೃತಜ್ಞತೆ:
ಯುದ್ದ ಪೀಡಿತ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ನಮ್ಮ ಮನವಿಗೆ ಸ್ಪಂದಿಸಿರುವ ಕೇಂದ್ರ ಮತ್ತು ರಾಜ್ಯ ಸರಕಾರ ನಮ್ಮನ್ನು ಸುರಕ್ಷಿತವಾಗಿ ಕರೆತಂದಿರುವುದಕ್ಕೆ ಎಲ್ಲರ ಪರವಾಗಿ ಸಂತಸ ವ್ಯಕ್ತಪಡಿಸಿರುವ ಕಾಂತುಕುಮಾರ್, ಶ್ಯಾಂಡಿರವರು ಮಾತನಾಡಿ 10 ದಿನಗಳ ಕಾಲ ಊಟ, ನಿದ್ರೆ ಬಿಟ್ಟು ಜೀವ ಭಯದಿಂದ ಕಾಲಕಳೆದೆವು. ಅಲ್ಲಿನ ಸರಕಾರದ ಅಧಿಕಾರಿಗಳು, ರಾಯಬಾರಿ ಕಚೇರಿ ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಿದರು, ಸುಮಾರು ಆರು ಕಿ.ಮೀ.ದೂರ ಕಾಲ್ನಡಿಗೆಯಲ್ಲಿ ಬೇರೆ ಕಡೆಗೆ ತೆರಳಿ, ಸುರಕ್ಷಿತ ಸ್ಥಳ ತಲುಪಿದ್ದೆವು. ಅಲ್ಲಿಂದ ನಮ್ಮನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತಂದು ವಿಶೇಷ ಬಸ್ ಮೂಲಕ ಗ್ರಾಮಕ್ಕೆ ಕಳುಹಿಸಿಕೊಟ್ಟರೆಂದು ಸಂತಸ ವ್ಯಕ್ತಪಡಿಸಿ ಉಳಿದವರು ಶೀಘ್ರವಾಪಸ್ ಬರುವ ನಿರೀಕ್ಷೆಯಲ್ಲಿದ್ದೇವೆ. ನಮ್ಮ ಕಷ್ಟಗಳಿಗೆ ಸ್ಪಂದಿಸಿದ ಪತ್ರಿಕೆ ಮತ್ತು ಆನ್ ಲೈನ್ ನಲ್ಲಿ ಪ್ರಕಟಿಸಿ ಸರಕಾರದ ಗಮನ ಸೆಳೆದಿದ್ದಕ್ಕಾಗಿ ಉದಯವಾಣಿಗೆ ಧನ್ಯವಾದ ತಿಳಿಸಿದರು. ಈ ವೇಳೆ ಸಂಕಷ್ಟಕ್ಕೆ ಸಿಲುಕಿದ್ದವರ ಕುಟುಂಬದವರು, ಗ್ರಾಮದ ಮುಖಂಡರು ಇದ್ದರು.
ಅಲೆಮಾರಿ ಹಕ್ಕಿಪಿಕ್ಕಿ ಸಮುದಾಯದ 56 ಮಂದಿ ಸುಡಾನ್‌ಗೆ ಆಯುರ್ವೇದ ಕೇಶತೈಲ, ಮಸಾಜ್ ಮಾಡಿ ಸಂಪಾದನೆ ಮಾಡಲು ದೇಶಕ್ಕೆ ತೆರಳಿದ್ದರು. ಅಲ್ಲಿ ಆರಂಭವಾದ ಅಂತರಿಕ ಯುದ್ದದಲ್ಲಿ ಸಿಲುಕಿ ನೆರವಿಗಾಗಿ ಮೊರೆ ಇಟ್ಟಿದ್ದ ಹಿನ್ನೆಲೆಯಲ್ಲಿ ಸರಕಾರ ಆಪರೇಷನ್ ಕಾವೇರಿ ಮೂಲಕ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Mysore: ಮೊಬೈಲ್ ಜೂಜಾಟ; ನಾಲ್ವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.