ವಿವಿಯಿಂದ 6 ಗ್ರಾಮ ದತ್ತು: ಕುಲಪತಿ

ಹನೂರು ತಾಲೂಕಿನ 6 ಗ್ರಾಪಂಗಳ ಆರು ಹಳ್ಳಿ ಅಭಿವೃದ್ಧಿಗೆ ಯೋಜನೆ, 3 ಜಿಲ್ಲೆಗಳ 10 ಶಾಲೆ ದತ್ತು ಸ್ವೀಕಾರ

Team Udayavani, Jan 5, 2021, 4:08 PM IST

ವಿವಿಯಿಂದ 6 ಗ್ರಾಮ ದತ್ತು: ಕುಲಪತಿ

ಮೈಸೂರು: ಉನ್ನತ ಭಾರತ ಅಭಿಯಾನ ಯೋಜನೆಯಡಿ ಗ್ರಾಮಗಳ ಅಭಿವೃದ್ಧಿ ಉದ್ದೇಶದಿಂದ ಹನೂರು ತಾಲೂಕಿನ 6 ಗ್ರಾಮಗಳನ್ನು ದತ್ತು ಪಡೆಯಲಾಗಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌ ಹೇಳಿದರು.

ನಗರದ ವಿವಿ ಕ್ರಾಫ‌ರ್ಡ್‌ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯೋಜನೆಯಡಿ ಹನೂರು ತಾಲೂಕಿನ 6 ಗ್ರಾಮ ಪಂಚಾಯಿತಿಗಳಿಂದ 6ಗ್ರಾಮಗಳನ್ನು ದತ್ತು ಪಡೆದುಕೊಳ್ಳಲಾಗಿದೆ. ಲೊಕ್ಕನ ಹಳ್ಳಿ ಗ್ರಾಪಂ ವ್ಯಾಪ್ತಿಯ ಸೇಬಿನ ಕೋಟೆ, ಪಿ.ಜಿ.ಪಾಳ್ಯ ಗ್ರಾಪಂ ವ್ಯಾಪ್ತಿಯ ಹುಯಿಲ್ನತ್ತ, ಎಂ.ಎಂ .ಹಿಲ್ಸ್ ಗ್ರಾಪಂ ವ್ಯಾಪ್ತಿಯ ಒಡಕೆಹಳ್ಳ, ಪೊನ್ನಾಚಿ ಗ್ರಾಪಂ ರಾಮೇಗೌಡನಹಳ್ಳಿ, ಮಿಣ್ಯಂ ಗ್ರಾಪಂ ವ್ಯಾಪ್ತಿಯ ಸೂಳೆಕೋಬೆ, ಹುತ್ತೂರು ಗ್ರಾಪಂ ವ್ಯಾಪ್ತಿಯ ಗುಳ್ಳದ ಬಯಲು ಗ್ರಾಮಗಳನ್ನು ದತ್ತು ಸ್ವೀಕರಿಸಲಾಗಿದೆ ಎಂದರು.

10 ಶಾಲೆ ದತ್ತು: ಮೈಸೂರು ವಿಶ್ವವಿದ್ಯಾಲಯವು ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಮೈಸೂರು, ಮಂಡ್ಯ, ಹಾಸನ, ಚಾಮರಾಜ ನಗರ ಜಿಲ್ಲೆಗಳಿಂದ 10 ಶಾಲೆಗಳನ್ನು ದತ್ತು ಸ್ವೀಕರಿಸಿದೆ.

ಚಾ.ನಗರ ಜಿಲ್ಲೆ: ದತ್ತು ಪಡೆದಿರುವ ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿಯ ಸರ್ಕಾರಿ ಹಿರಿಯ ಪ್ರಾಥ ಮಿಕ ಶಾಲೆ (ಶತಮಾನ ಕಂಡ ಶಾಲೆ), ಯಳಂದೂರು ತಾಲೂಕಿನ ಕೊಮಾರನಪುರದ ಸರ್ಕಾರಿ ಹಿರಿಯಪ್ರಾಥಮಿಕ ಶಾಲೆ (ಶತಮಾನ ಕಂಡ ಶಾಲೆ), ಹನೂರು ತಾಲೂಕಿನ ಸರ್ಕಾರಿ ಉನ್ನತೀಕರಿಸಿದ ಹಿರಿಯಪ್ರಾಥಮಿಕ ಶಾಲೆಯನ್ನು ಚಾಮರಾಜನಗರ ಜಿಲ್ಲೆಯ ಡಾ.ಬಿ.ಆರ್‌.ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರ ನೋಡಿಕೊಳ್ಳಲಿದೆ ಎಂದು ಹೇಳಿದರು.

ಮಂಡ್ಯ, ಹಾಸನ ಜಿಲ್ಲೆ: ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,ಮಂಡ್ಯ ತಾಲೂಕಿನ ಎಲೆಚಾಕನಹಳ್ಳಿ ಸರ್ಕಾರಿ ಹಿರಿಯಪ್ರಾಥಮಿಕ ಶಾಲೆಗಳನ್ನು ಮಂಡ್ಯ ಜಿಲ್ಲೆಯ ತೂಬಿನ ಕೆರೆ ಸರ್‌.ಎಂ.ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರ ನೋಡಿಕೊಳ್ಳಲಿದೆ. ಹೊಳೆನರಸೀಪುರ ತಾಲೂಕಿನ ಯಲ್ಲೇಶಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಹಾಸನ ಜಿಲ್ಲೆಯ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ನೋಡಿಕೊಳ್ಳಲಿದೆ.

ಮೈಸೂರು: ಮೈಸೂರು ತಾಲೂಕಿನ ಮಾರ್ಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುಂಗ್ರಾಲ್‌ ಛತ್ರದ ಸರ್ಕಾರಿ ಪ್ರೌಢಶಾಲೆ, ಕೆ.ಆರ್‌.ಮಿಲ್‌ ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಎಚ್‌.ಡಿ.ಕೋಟೆ ತಾಲೂಕಿನಕ್ಯಾತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನುಮೈಸೂರು ವಿಶ್ವವಿದ್ಯಾಲಯ ನೋಡಿ ಕೊಳ್ಳ ಲಿದೆ ಎಂದು ಮಾಹಿತಿ ನೀಡಿದರು.

ಸಮತಿ ರಚನೆ: ವಿಶ್ವವಿದ್ಯಾಲಯ ದತ್ತು ಪಡೆದಿರುವ ಶಾಲೆಗಳನ್ನು ಅಭಿವೃದ್ಧಿಪಡಿಸುವ ಹಾಗೂ ಅವುಗಳ ಜೀರ್ಣೋದ್ಧಾರಕ್ಕಾಗಿ ಒಂದು ಸಮಿತಿಯನ್ನು ರಚಿ ಸಿದ್ದು, ಅದರಂತೆ ಸಮಿತಿಯು ಅಧ್ಯಕ್ಷರನ್ನೊಳ ಗೊಂಡ ಎಲ್ಲ ಸದ ಸ್ಯರು ಶಾಲೆಗಳಿಗೆ ಖುದ್ದು ಭೇಟಿ ನೀಡಿ, ಶಾಲೆಗಳಲ್ಲಿರುವಂತಹ ನೂನ್ಯತೆಗಳನ್ನು ಗುರುತಿಸಿದ್ದಾರೆ ಎಂದರು.

ಈ ಸಂಬಂಧ ಮುಖ್ಯಮಂತ್ರಿಗಳ ಶಿಕ್ಷಣ ಸುಧಾ ರಣಾ ಸಲಹಗಾರರಾದ ಡಾ.ಎಂ.ಆರ್‌.ದೊರೆಸ್ವಾಮಿ ಇವರ ಜೊತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ನಡೆದ ಸಭೆಯಲ್ಲಿ ದತ್ತು ಪಡೆದಿರುವ ಶಾಲೆಗಳ ಬಗ್ಗೆ ಚರ್ಚಿ ಸಲಾಯಿತು ಎಂದು ಅವರು ತಿಳಿಸಿದರು.

ಮೈಸೂರು ವಿವಿಯು ಶತಮಾನೋತ್ಸವ ಆಚರಿಸಿಕೊಂಡಿದ್ದು, ವಿವಿ ವ್ಯಾಪ್ತಿಯಲ್ಲಿ ನೂರು ವರ್ಷಗಳ ಇತಿಹಾಸ ಹೊಂದಿರುವ, ಹಲವು ಸಾಧನೆಗಳನ್ನು ಮಾಡಿರುವಂತಹ ಶಾಲೆಗಳನ್ನು ಗುರುತಿಸಿ ಮತ್ತಷ್ಟು ಬಲವರ್ಧನೆಗೊಳಿಸುವ ಹಾಗೂ ಗುಣಮಟ್ಟದ ಶಿಕ್ಷಣ ಹೆಚ್ಚಿಸುವ ಮೂಲಕ ಮಾದರಿ ಶಾಲೆಗಳನ್ನಾಗಿಸುವ ಉದ್ದೇಶದಿಂದ ಶಾಲೆಗಳನ್ನು ದತ್ತು ಸ್ವೀಕರಿಸಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಪ್ರೊ.ಆರ್‌.ಶಿವಪ್ಪ, ಪ್ರಸಾರಾಂಗ ನಿರ್ದೇಶಕ ಪ್ರೊ.ಎನ್‌.ಎಂ.ತಳವಾರ,ಪ್ರಾಚ್ಯವಿದ್ಯಾ ಸಂಶೋಧನಾಲಯ ನಿರ್ದೇಶಕ ಪ್ರೊ. ಎಸ್‌.ಶಿವರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು

ಸರ್ಕಾರಿ ಶಾಲೆಗಳ ಪುನರುಜ್ಜೀವನ :

ಸರ್ಕಾರಿ ಶಾಲೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಲವರ್ಧನೆಗೊಳಿಸಿ, ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಹಾಗೂ ಉತ್ತಮ ಶೈಕ್ಷಣಿಕ ವಾತಾವರಣ ಸೃಷ್ಟಿಸುವ ಹಿನ್ನೆಲೆಯಲ್ಲಿ ಸಮಗ್ರ ಅಭಿವೃದ್ಧಿ ಕ್ರಿಯಾ ಯೋಜನೆಯಡಿ 10 ಶಾಲೆಗಳನ್ನು ದತ್ತು ಪಡೆದು ಕೊಳ್ಳಲಾಗಿದೆ ಎಂದು ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌ ತಿಳಿಸಿದರು. ವಿದ್ಯಾರ್ಥಿಗಳಿಗೆ ಶೌಚ ಗೃಹ ನಿರ್ಮಿಸಿ ಕೊಡುವುದು ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು, ಶಾಲೆಗಳ ಪುನರುಜ್ಜೀವನ ಮಾಡುವುದು, ಶತಮಾನ ಕಂಡ ಶಾಲೆಗಳನ್ನು ಗುರುತಿಸಿ ಗೌರವಿಸುವುದು, ಸಮಗ್ರ ಇತಿಹಾಸದ ದಾಖಲೀಕರಣ ಮಾಡುವುದು, ಮಾದರಿ ಶಾಲೆಯಾಗಿ ರೂಪಿಸುವ ಉದ್ದೇಶವಿದೆ. ಹಳೆಯ ವಿದ್ಯಾರ್ಥಿಗಳ ಸಂಘ ರಚಿಸಿ ಶೈಕ್ಷಣಿಕ ಅಭಿವೃದ್ಧಿಗೆ ಪೂರಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು, ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಹೆಚ್ಚಿಸುವುದು ವಿವಿಯ ಆಶಯವಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.