ಬಲಿಷ್ಠ ರಾಷ್ಟ್ರ ನಿರ್ಮಿಸಲು ಒಟ್ಟಾಗಿ ಶ್ರಮಿಸೋಣ: ತಹಶೀಲ್ದಾರ್ ಕೆ.ಚಂದ್ರಮೌಳಿ
Team Udayavani, Jan 26, 2022, 6:46 PM IST
ಪಿರಿಯಾಪಟ್ಟಣ: ಮಹಾತ್ಮ ಗಾಂಧಿ, ಡಾ.ಅಂಬೇಡ್ಕರ್ರವರ ತ್ಯಾಗ ಬಲಿದಾನದ ಸ್ವಾತಂತ್ರ್ಯವನ್ನು ಎಲ್ಲರೂ ಜವಾಬ್ದಾರಿಯಿಂದ ಕಾಪಾಡಿಕೊಂಡು ಮುನ್ನಡೆಯಬೇಕಿದೆ ಎಂದು ತಹಶೀಲ್ದಾರ್ ಕೆ.ಚಂದ್ರಮೌಳಿ ತಿಳಿಸಿದರು.
ಪಟ್ಟಣದ ಗೋಣಿಕೊಪ್ಪ ರಸ್ತೆಯ ಜೂನೀಯರ್ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದ ಪ್ರಜೆಗಳಾದ ನಾವೆಲ್ಲರೂ ಜಾತಿ, ಧರ್ಮ, ಭಾಷೆ, ಪಂಗಡ, ಗಳೆಂಬ ಸಂಕುಚಿತ ಭಾವನೆಯಿಂದ ಹೊರಬರಬೇಕು ಆ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡಬೇಕಿದೆ. ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಭವ್ಯ ಪರಂಪರೆ ಮತ್ತು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಿದೆ, 2020 ರಿಂದ ಹಿಂದೆಂದೂ ಕಂಡರಿಯದ ಕೊರೋನಾ ವೈರಸ್ ಎಂಬ ಮಹಾಮಾರಿ ಜಗತ್ತನ್ನೆ ನುಂಗುತ್ತಿರುವ ಸಮಯದಲ್ಲಿ ಕೊರೋನಾಕ್ಕೆ ಲಸಿಕೆಯನ್ನು ಕಂಡು ಹಿಡಿದು ಭಾರತ ಜಗತ್ತಿಗೆ ಮಾದರಿಯಾಗಿದೆ. ತಾಲ್ಲೂಕು ಆಡಳಿತವು ಕೂಡ ಜನತೆಗೆ ಅಗತ್ಯವಾದ ಸಲಹೆ ಸಹಕಾರ ನೀಡಿ ಕೊರೋನಾ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದೆ. ದೇಶದ ಪ್ರಗತಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಇವುಗಳನ್ನು ಸದ್ಬಳಕೆ ಮಾಡಿಕೊಂಡು ಪ್ರಗತಿಯತ್ತ ಸಾಗಬೇಕಿದೆ ಎಂದರು.
ಕಾರ್ಯಕ್ರಮದ ಮುಖ್ಯ ಭಾಷಣಕಾರ ಸಿಡಿಪಿಒ ಕುಮಾರ್ ಮಾತನಾಡಿ ಡಾ. ಅಂಬೇಡ್ಕರ್ ರವರು ದೇಶಕ್ಕೆ ಬಲಿಷ್ಠ ಸಂವಿಧಾನವನ್ನು ನೀಡುವ ಮೂಲಕ ಇಡೀ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದ್ದಾರೆ. ದೇಶದಲ್ಲಿ ಸಮಗ್ರ ಏಕತೆಯನ್ನು ಸಾರುವ ಉದ್ದೇಶದಿಂದ ಎಲ್ಲಾ ಜಾತಿ, ಧರ್ಮ ಒಳಗೊಂಡಂತೆ ಎಲ್ಲರೂ ಒಗ್ಗಟ್ಟಿನಿಂದ ಸಮಾನತೆಯಿಂದ ಸಂವಿಧಾನದ ಅಡಿಯಲ್ಲಿ ಕಾನೂನು ಹಾಗೂ ಜನಪ್ರತಿನಿಧಿಗಳು ಆಡಳಿತ ನಡೆಸುವಂತೆ ಮಾಡಿದ್ದಾರೆ ಎಂದರು.
ಶಾಸಕ ಕೆ.ಮಹದೇವ್ ಮಾತನಾಡಿ ಭಾರತ ಸಂಪತ್ಬರಿತ ರಾಷ್ಟ್ರ ಆದರೆ ಅದನ್ನು ಸದ್ಬಳಕೆ ಮಾಡಿಕೊಳ್ಳುವ ಮಟ್ಟಕ್ಕೆ ನಾವು ಬೆಳೆದಿಲ್ಲ, ದೇಶ ಆಡಳಿತದಲ್ಲಿ ಹಿನ್ನಡೆ ಅನುಭವಿಸುತ್ತಿದೆ ಇದಕ್ಕೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಸಮನ್ವಯದ ಕೊರತೆಯೇ ಕಾರಣ, ಎಲ್ಲರೂ ನೆಮ್ಮದಿಯಿಂದ ಬದುಕಲಿ ಎಂಬ ಕಾರಣಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನವನ್ನು ನಮಗೆ ಕೊಟ್ಟು, ವ್ಯಕ್ತಿಯ ಬೆಳವಣಿಗೆಗೆ ಬೇಕಾದ ಶಿಕ್ಷಣ, ಸಮಾನತೆ, ಸ್ವತಂತ್ರ, ಧರ್ಮ, ಸಂಸ್ಕೃತಿ, ಹಕ್ಕು ಮತ್ತು ಕರ್ತವ್ಯಗಳು ಹಾಗೂ ಸಮಾನ ಅವಕಾಶಗಳನ್ನು ನೀಡಿದ್ದಾರೆ ಆದರೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ನಾವು ವಿಫಲರಾಗಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ಪ್ರಸನ್ನ, ಅಧ್ಯಕ್ಷ ಮಂಜುನಾಥ ಸಿಂಗ್, ಟಿಎಪಿಸಿಎಂಎಸ್ ಅಧ್ಯಕ್ಷ ತಿಮ್ಮೇಗೌಡ, ಎಪಿಎಂಸಿ ಅಧ್ಯಕ್ಷ ಶಂಕರಪ್ಪ, ವೃತ್ತ ನಿರೀಕ್ಷಕರಾದ ಜಗದೀಶ್, ಪ್ರಕಾಶ್, ಪಿಎಸ್ಐ ಪುಟ್ಟರಾಜು ಎಇಇ ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಪ್ರಸಾದ್ ವಿವಿಧ ಇಲಾಖೆಗಳ ಅಧಿಕಾರಿಗಳಾದ ಭಾರತಿ, ಚಿಕ್ಕಣ್ಣ, ಪ್ರಕಾಶ್, ಕರುಣಾಕರ್, ರಾಕೇಶ್, ಶೇಖರ್ ಡಾ.ಸೋಮಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ಕುಮಾರ್, ಸೇರಿದಂತೆ ಮತ್ತಿತರರು ಹಾಜರಿದದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.