ಮೃಗಾಲಯಗಳಿಂದ 75.72 ಕೋಟಿ ರೂ. ಆದಾಯ


Team Udayavani, Jan 16, 2023, 1:14 PM IST

tdy-12

ಮೈಸೂರು: ಕರ್ನಾಟಕ ರಾಜ್ಯ ಮೃಗಾಲಯ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಮೃಗಾಲಯಗಳಿಂದ ಕಳೆದ ಒಂಬತ್ತು ತಿಂಗಳಿನಲ್ಲಿ 75.72 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ. ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್‌ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಕೋವಿಡ್‌ ನಂತರ ಮೃಗಾಲಯಗಳಿಗೆ ಪ್ರವಾಸಿಗರ ಭೇಟಿ ಹೆಚ್ಚಾಗಿದೆ. ಇದರಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ. ಕಳೆದ 2022ರ ಏ.1ರಿಂದ ಡಿ.31ರವರೆಗೆ 9 ತಿಂಗಳಲ್ಲಿ ರಾಜ್ಯದ ಮೃಗಾಲಯಗಳಿಗೆ 52,77,013 ಮಂದಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಮೈಸೂರು ಮೃಗಾಲಯಕ್ಕೆ ಡಿಸೆಂಬರ್‌ನಲ್ಲಿ 5.24 ಲಕ್ಷ ಮಂದಿ ಭೇಟಿ ನೀಡಿರುವುದು ದಾಖಲೆಯಾಗಿದೆ ಎಂದರು.

ಪ್ರಾಧಿಕಾರದ ಮೇಲೆ ಇದು ಆರ್ಥಿಕವಾಗಿ ಹೊರೆ: ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ 25.05 ಲಕ್ಷ ಮಂದಿ ಭೇಟಿ ನೀಡಿದ್ದು 24.76 ಕೋಟಿ ರೂ.ಆದಾಯ ಗಳಿಸಿದೆ. ಬನ್ನೇರುಘಟ್ಟಕ್ಕೆ 16.12 ಲಕ್ಷ ಮಂದಿ ಭೇಟಿ ನೀಡಿದ್ದು, 42.68 ಕೋಟಿ ರೂ. ಆದಾಯ ಬಂದಿದೆ. ಸಂದರ್ಶಕರ ಭೇಟಿ ವಿಷಯದಲ್ಲಿ ಪ್ರಥಮ ಸ್ಥಾನ ಮೈಸೂರಿನ ಚಾಮರಾಜೇಂದ್ರ ಮೃಗಾಲಯದು. ಬನ್ನೇರುಘಟ್ಟ ಆದಾಯದಲ್ಲಿ ಮೊದಲ ಸ್ಥಾನದಲ್ಲಿದೆ. ಮಾನವ-ವನ್ಯಜೀವಿ ಸಂಘರ್ಷ ಪ್ರದೇಶದಿಂದ ಅಧಿಕ ಸಂಖ್ಯೆಯಲ್ಲಿ ಪ್ರಾಣಿಗಳನ್ನು ಪ್ರಾಧಿಕಾರದ ಮೃಗಾಲಯಗಳಿಗೆ ಕಳುಹಿಸಲಾಗುತ್ತಿದೆ. ಪ್ರಾಧಿಕಾರದ ಮೇಲೆ ಇದು ಆರ್ಥಿಕವಾಗಿ ಹೊರೆಯಾಗಿದೆ ಎಂದರು.

ಪ್ರತ್ಯೇಕವಾಗಿ ಅನುದಾನ ಬಿಡುಗಡೆ ಮಾಡಲು ಪ್ರಸ್ತಾವನೆ: ರಕ್ಷಿಸಲಾದ ಪ್ರಾಣಿಗಳ ನಿರ್ವಹಣೆ, ಪೋಷಣೆ, ಆಹಾರಮೇವು, ಪಶು ವೈದ್ಯಕೀಯ ವೆಚ್ಚ, ಪ್ರಾಣಿ ಪಾಲಕ ವೇತನಕ್ಕಾಗಿ ಪ್ರತಿ ವರ್ಷ 7 ರಿಂದ 8 ಕೋಟಿ ರೂ. ವೆಚ್ಚ ವಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕವಾಗಿ ಅನುದಾನ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೈಸೂರು ಮೃಗಾಲಯಕ್ಕೆ ಬರುವ ವಾಹನಗಳ ನಿಲ್ದಾಣಕ್ಕೆ ರೇಸ್‌ ಕೋರ್ಸ್‌ ಆವರಣದಲ್ಲಿ ಸ್ಥಳಾವಕಾಶ ನೀಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಹೆಚ್ಚುವರಿ ಅನುದಾನ ನೀಡುವಂತೆ ಸರಕಾರಕ್ಕೆ ಮನವಿ: ಮುಂಗಡಪತ್ರ 2022-23ನೇ ಸಾಲಿನಲ್ಲಿ 115.31 ಕೋಟಿ ರೂಪಾಯಿಗೆ ಒಪ್ಪಿಗೆ ನೀಡಲಾಗಿದೆ. ಮೃಗಾಲಯಗಳ ನಿರ್ವಹಣೆಗೆ ಈ ವರ್ಷದ ಮಾರ್ಚ್‌ ವರೆಗೆ 30 ಕೋಟಿ ರೂ. ಅಗತ್ಯವಿದೆ. ಹೆಚ್ಚುವರಿ ಅನುದಾನ ನೀಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ದೇಣಿಗೆ ಹಾಗೂ ದತ್ತು ಯೋಜನೆಯಡಿ 2022ರ ಏಪ್ರಿಲ್‌ನಿಂದ ಡಿಸೆಂಬರ್‌ ವರೆಗೆ 5,557 ಪ್ರಾಣಿ, ಪಕ್ಷಿಗಳನ್ನು ಸಾರ್ವಜನಿಕರು ದತ್ತು ಪಡೆದಿದ್ದಾರೆ. ಇದರಿಂದ 1.61 ಕೋಟಿ ರೂ. ಸಂಗ್ರಹವಾಗಿದೆ. ಬೆಳಗಾವಿ ಸೇರಿದಂತೆ ಎಲ್ಲ ಮೃಗಾಲಯಗಳಲ್ಲೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಅವರು ವಿವರಿಸಿದರು.

ವಿಜಯನಗರ ಜಿಲ್ಲೆಯ ಕಮಲಾಪುರದ ಅಟಲ್‌ ಬಿಹಾರಿ ವಾಜಪೇಯಿ ಮೃಗಾಲಯದಲ್ಲಿ ನೂತನವಾಗಿ ಎಂಟ್ರೆನ್ಸ್‌ ಪ್ಲಾಜಾವನ್ನು 9.34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಮೊದಲ ಹಂತದ ಕಾಮಗಾರಿ ಈ ತಿಂಗಳ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದರು.

ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ಮಾತನಾಡಿ, ಮೈಸೂರು ಮೃಗಾಲಯದ ಮಾಸ್ಟರ್‌ ಪ್ಲಾನ್‌ನಂತೆ ಮಾಹಿತಿ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಆಡಳಿತಾತ್ಮಕ ದೃಷ್ಟಿಯಿಂದ ಮೈಸೂರಿನ ಜಿಂಕೆಗಳನ್ನು ಅರಣ್ಯ ಇಲಾಖೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ನಿಯಮಾನುಸಾರ ಸ್ಥಳಾಂತರಿಸಲಾಗುತ್ತಿದೆ ಎಂದು ಹೇಳಿದರು. ಪ್ರಾಧಿಕಾರದ ಸದಸ್ಯರಾದ ಜ್ಯೋತಿ ರೇಚಣ್ಣ, ಗೋಕುಲ್, ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್‌ ಕುಲಕರ್ಣಿ ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.