ಹುಣಸೂರು: ಅಕ್ರಮವಾಗಿ ವ್ಯಾಪಾರ ಮಾಡುತ್ತಿದ್ದ 75 ನಗರಸಭೆ ಮಳಿಗೆಗಳಿಗೆ ಬೀಗ
ಹರಾಜು ಆಗಿ 9 ತಿಂಗಳಾದರೂ ಜಾಗ ಖಾಲಿ ಮಾಡದ ಬಾಡಿಗೆದಾರರ ವಿರುದ್ದ ಕ್ರಮ
Team Udayavani, Dec 4, 2022, 12:34 PM IST
ಹುಣಸೂರು: ಹುಣಸೂರು ನಗರದ ವಿವಿಧೆಡೆ ನಿರ್ಮಿಸಿರುವ ನಗರಸಭೆಯ ವಾಣಿಜ್ಯ ಮಳಿಗೆಗಳು ಹರಾಜು ಆಗಿ 9 ತಿಂಗಳು ಕಳೆದಿದ್ದರೂ ಬಾಡಿಗೆದಾರರು ಖಾಲಿ ಮಾಡದ ಪರಿಣಾಮ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ನಗರಸಭೆ ಪೌರಾಯುಕ್ತೆ ಎಂ.ಮಾನಸರ ನೇತೃತ್ವದಲ್ಲಿ ಹಲವರ ವಿರೋಧದ ನಡುವೆಯೂ ಕಾರ್ಯಾಚರಣೆ ನಡೆಸಿ 75 ಮಳಿಗೆಗಳನ್ನು ತೆರವುಗೊಳಿಸಿ ಬೀಗ ಜಡಿದು ವಶಕ್ಕೆ ಪಡೆದರು.
ಶನಿವಾರ ಮುಂಜಾನೆ 6 ಗಂಟೆಯಿಂದ ಸಂಜೆವರೆಗೂ ಕಾರ್ಯಾಚರಣೆಗಿಳಿದ ಪೌರಾಯುಕ್ತೆ ಎಂ.ಮಾನಸ, ಪರಿಸರ ಇಂಜಿನಿಯರ್ ರೂಪಾ, ಕಂದಾಯಾಧಿಕಾರಿ ಪಂಪಾ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಸಿಬ್ಬಂದಿಗಳು ನಗರದ ಸಂತೆ ಮಾಳದಲ್ಲಿದ್ದ 71, ಅಕ್ಷಯ ಬಂಡಾರ್ ವೃತ್ತದಲ್ಲಿ 2 ಹಾಗೂ ಎಚ್.ಡಿ.ಕೋಟೆ ವೃತ್ತದಲ್ಲಿ 2 ಸೇರಿದಂತೆ ಒಟ್ಟು 75 ಮಳಿಗೆಗಳಲ್ಲಿ ಅಕ್ರಮವಾಗಿ ಮಳಿಗೆಗಳಲ್ಲಿ ವ್ಯಾಪಾರ ನಡೆಸುತ್ತಿದ್ದವರಿಗೆ ತೆರವುಗೊಳಿಸುವಂತೆ ಸೂಚಿಸಿದರು.
ಕೆಲವರು ಒಪ್ಪಿ ತಾವೇ ತೊರವುಗೊಳಿಸಿದರೆ, ಇನ್ನೂ ಹಲವರು ವಿರೋಧ ವ್ಯಕ್ತಪಡಿಸಿ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿಗಿಳಿದು ಖಾಲಿ ಮಾಡಲು ಮತ್ತಷ್ಟು ಸಮಯಾವಕಾಶ ನೀಡಿ, ಕೋರ್ಟಿಗೆ ಹೋಗಿ ತಡೆಯಾಜ್ಞೆ ತರುತ್ತೇವೆಂಬ ಮನವಿಗೆ ಅಧಿಕಾರಿಗಳು ಒಪ್ಪದಿದ್ದಾಗ ವ್ಯಾಪಾರಸ್ಥರು ಪ್ರತಿಭಟನೆಗೆ ಮುಂದಾದರೂ ಅಧಿಕಾರಿಗಳು, ಪೊಲೀಸರು ಅವಕಾಶ ನೀಡಲಿಲ್ಲ.
ನಂತರ ತೆರವುಗೊಳಿಸಲು ಹಿಂದೇಟು ಹಾಕಿದ ಮಳಿಗೆಗಳಲ್ಲಿದ್ದ ವಸ್ತುಗಳನ್ನು ವಿಡಿಯೋ ಚಿತ್ರಿಕರಣಗೊಳಿಸಿ, ತೆರವುಗೊಳಿಸಿ ಬೀಗ ಹಾಕಿ ಸೀಲ್ ಹಾಕಿ ನಗರಸಭೆ ಸುಪರ್ದಿಗೆ ಪಡೆದರು.
ಕಾರ್ಯಾಚರಣೆಯಲ್ಲಿ ಮೈಸೂರಿನ ಯೋಜನಾ ಪ್ರಾಧಿಕಾರ ಕಚೇರಿಯ ಅಧಿಕಾರಿ ಸೋಮನಾಥ್, ಸಾಯಿಶಂಕರ್, ಕಂದಾಯಾಧಿಕಾರಿಗಳಾದ ಸಿದ್ದರಾಜು, ಸುರೇಂದ್ರ, ಹಿರಿಯ ಆರೋಗ್ಯಾಧಿಕಾರಿ ಸತೀಶ್, ಚಂದ್ರು, ನಗರಸಭೆ ವಕೀಲ ನಂದನ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಅಕ್ರಮವಾಗಿ ಕುಳಿತಿದ್ದ ಮಳಿಗೆಯವರಿಗೆ ಹಲವು ಬಾರಿ ನೋಟಿಸ್ ನೀಡಲಾಗಿತ್ತಾದರೂ ತೆರವುಗೊಳಿಸಿರಲಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಲಾಗಿದೆ. ನಗರಸಭೆಯ 103 ಮಳಿಗೆಗಳ ಪೈಕಿ ಮೂರು ಮಳಿಗೆ ಹರಾಜಾಗಿಲ್ಲ. 12 ಮಳಿಗೆಯವರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ತೆರವುಗೊಳಿಸಿಲ್ಲ. 13 ಮಂದಿ ಹರಾಜಾಗಿರುವ ಮಳಿಗೆಗಳಲ್ಲೇ ಮುಂದುವರೆದಿರುವುದರಿಂದ ಉಳಿದ 75 ಮಳಿಗೆಗಳನ್ನು ತೆರವುಗೊಳಿಸಲಾಗಿದೆ.
ಈ ಸಂಬಂಧ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಿ, ನಿರ್ಣಯಿಸಿ ಹರಾಜಿನಲ್ಲಿ ಮಳಿಗೆ ಪಡೆದಿರುವವರಿಗೆ ನಿಯಮಾನುಸಾರ ಮಳಿಗೆಗಳನ್ನು ಹಸ್ತಾಂತರಿಸಲಾಗುವುದೆಂದು ಪೌರಾಯುಕ್ತೆ ಉದಯವಾಣಿಗೆ ಎಂ.ಮಾನಸ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.