ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 80ನೇ ಜನ್ಮದಿನೋತ್ಸವ

ವಿವಿಧ ಕ್ಷೇತ್ರಗಳಲ್ಲಿನ ಗಣ್ಯರಿಗೆ ಸನ್ಮಾನ ಮಾಡಿ ಗೌರವ

Team Udayavani, May 27, 2022, 7:25 PM IST

1-ffsfsfd-dsff

ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 80ನೇ ಜನ್ಮದಿನೋತ್ಸವ ಪ್ರಯುಕ್ತ ಶುಕ್ರವಾರ ಬೆಳಗ್ಗೆ  ಶ್ರೀಚಕ್ರ ಪೂಜೆ, ದತ್ತಾತ್ರೆಯ ಹೋಮ ನೆರವೇರಿಸಲಾಯಿತು.

ನಂತರ ಸ್ವಾಮೀಜಿಯವರನ್ನು ಜಾನಪದ ಕಲಾಮೇಳದೊಂದಿಗೆ ಮೆರವಣಿಗೆಯಲ್ಲಿ ನಾದಮಂಟಪಕ್ಕೆ ಕರೆತಂದುದು ವಿಶೇಷವಾಗಿತ್ತು.
ಇದಾದನಂತರ ಚೈತನ್ಯಾರ್ಚನೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಗಣ್ಯರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.

ನಾದನಿಧಿ  ಪ್ರಶಸ್ತಿಯನ್ನು ಖ್ಯಾತ  ಪಿಯಾನೋ ವಾದಕ  ನವದೆಹಲಿಯ ವಿದ್ವಾನ್‌‌ ಬ್ರಿಯಾನ್ ಸೈಲಸ್, ಕೊಳಲು ವಾದಕ ಚನ್ನೈನ ವಿದ್ವಾನ್ ಬಿ.ವಿ.ಬಾಲಸಾಯಿ ಹಾಗೂ ಸಸ್ಯ ಬಂಧು ಪ್ರಶಸ್ತಿಯನ್ನು ಬೋನ್ಸಾಯ್ ನಲ್ಲಿ ಪ್ರಾವೀಣ್ಯತೆ ಪಡೆದಿರುವ   ಕಾಕಿನಾಡದ  ಡಾ. ಚಂದ್ರು ವೀರರಾಜು ಚೌದರಿ, ಮುಂಬೈನವರಾದ ರಾಜೀವ್ ವೈದ್ಯ ಹಾಗೂ ಸುಧೀರ್ ಜಾದವ್,  ತೋಟಗಾರಿಕೆಯಲ್ಲಿ ನುರಿತವರಾದ ಮೈಸೂರಿನ ಕೊಂಡೂರು ಕೃಷ್ಣರಾಜು ಮತ್ತು ವಿಶಾಖಪಟ್ಟಣದ ಮಂತೆನ ಆಂಜನೇಯ‌ ರಾಜು‌ ಅವರುಗಳಿಗೆ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಎಡನೀರು ರಾಮಕೃಷ್ಣ ಮಠಾಧೀಶರಾದ ಪೂಜ್ಯ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಮಾತನಾಡಿ, ನಮ್ಮ ಧಾರ್ಮಿಕ ಪರಂಪರೆಯನ್ನು ಮುನ್ನಡೆಸಿಕೊಂಡು ಹೋಗುವ ಮೂಲಕ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ಕೊಂಡಾಡಿದರು.ಗಣಪತಿ ಶ್ರೀಗಳು ಸಂಗೀತದ ಮೂಲಕ ಜನರ ಮನಕ್ಲೇಷ ಹಾಗೂ ಅನಾರೋಗ್ಯ ಗುಣಪಡಿಸುವ ವಿಶೇಷತೆಯನ್ನು ಅಳವಡಿಸಿ ಕೊಂಡಿರುವುದು ವಿಶೇಷ ಎಂದು ಬಣ್ಣಿಸಿದರು.

ಒಂದು ವೇಳೆ ಗಣಪತಿ ಶ್ರೀಗಳು ಹಿಮಾಲಯಕ್ಕೆ ಹೋಗಿಬಿಟ್ಟಿದ್ದರೆ ಸಮಾಜಕ್ಕೆ ಬಹಳ ನಷ್ಟವಾಗಿಬಿಡುತ್ತಿತ್ತು,ಅವರು ಇಲ್ಲೇ ನೆಲೆಸಿ ಸಮಾಜದ ಉದ್ದಾರಕ್ಕೆ ಶ್ರಮಿಸುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಸಚ್ಚಿದಾನಂದ ಭಾರತಿ ಸ್ವಾಮೀಜಿ ನುಡಿದರು. ಗಣಪತಿ ಶ್ರೀಗಳಿಗೆ 80ನೆ ವರ್ಷದ ಜನ್ಮದಿನದ ‌ಶುಭಕಾಮನೆಗಳನ್ನು ಅವರು ಸಲ್ಲಿಸಿದರು.

ಪೂಜ್ಯ ಶ್ರೀ ಗಣಪತಿ‌ ಸಚ್ಚಿದಾನಂದ ಸ್ವಾಮೀಜಿಯವರು ಜಗತ್ತಿನೆಲ್ಲೆಡೆ ಭಾರತೀಯ ಸಂಸ್ಕೃತಿ ಗಟ್ಟಿಯಾಗಿ ನೆಲೆಗೊಳ್ಳುವಂತೆ ಮಾಡಿದ್ದಾರೆ ಎಂದು ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನುಡಿದರು.

ಶ್ರೀಗಳು ಇಂದಿನ ದಿನಮಾನದ ಶ್ರೇಷ್ಠ ಪರಂಪರೆಯಾದ ಆಧ್ಯಾತ್ಮಿಕ ರಾಯಭಾರಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಬಣ್ಣಿಸಿದರು.ಶ್ರೀಗಳು ‌ವಿಶ್ವದೆಲ್ಲೆಡೆ ಆಧ್ಯಾತ್ಮಿಕ ಎಂಬ ಅಮೃತವನ್ನು ಸಿಂಚನ ಮಾಡುತ್ತಿದ್ದಾರೆ ಎಂದರು.

ವೇದ,ಕಲೆ,ಸಂಸ್ಕೃತಿ, ಸಂಗೀತ, ಆಧ್ಯಾತ್ಮ ಒಟ್ಟೊಟ್ಟಿಗೆ ಮೇಳೈಸಿದ ಪುಣ್ಯ ಕ್ಷೇತ್ರ ಗಣಪತಿ ಸಚ್ಚಿದಾನಂದ ಆಶ್ರಮ ಎಂದು ಸುತ್ತೂರು ಶ್ರೀ ಗಳು ವರ್ಣಿಸಿದರು. ಜಗತ್ತನ ತುಂಬಾ ಆಶ್ರಮಗಳನ್ನು ಶ್ರೀ ಗಳು ಸ್ಥಾಪಿಸಿದ್ದಾರೆ,ಈ ಮೂಲಕ‌ ಆಧ್ಯಾತ್ಮಿಕ ನಮ್ಮ ಸಂಸ್ಕೃತಿಯನ್ನು ಪಸರಿಸಿದ್ದಾರೆ ,ಶ್ರೀಗಳು ಭಕ್ತರಲ್ಲಿ ಅಂತಃಶಕ್ತಿ ಸದಾ ಜಾಗೃತವಾಗಿರುವಂತೆ ಮಾಡಿದ್ದಾರೆ,ವರ್ಷದ 365 ದಿನಗಳ ಕಾಲವೂ ಸೂರ್ಯ-ಚಂದ್ರನ ಬೆಳಕು ಈ ಆಶ್ರಮದ ಮೇಲೆ ಬೀಳುತ್ತಿರುತ್ತದೆ ಎಂದು ತಿಳಿಸಿದರು.

ಬಾಲಸ್ವಾಮಿಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರು ಹಿರಿಯ ಶ್ರೀಗಳ‌ಹಾದಯಲ್ಲಿ ಸಾಗುತ್ತಿದ್ದಾರೆ ಗಣಪತಿ ಶ್ರೀಗಳ ಜನ್ಮದಿನದ ಪ್ರಯುಕ್ತ ವಶ್ವಶಾಂತಿಗಾಗಿ ಪ್ರಾರ್ಥಿಸಿ ಮೇಕೆದಾಟಿನಿಂದ ಪಾದಯಾತ್ರೆ ಮಾಡುವ ಮೂಲಕ ವಿಶೇಷ ಕೊಡುಗೆ ನೀಡಿದ್ದಾರೆ ಎಂದರು.

ರಾಮಕೃಷ್ಣ ಮಠದ ಪೂಜ್ಯ ಶ್ರೀ ಮುಕ್ತಿದಾನಂದ ತೀರ್ಥ ಸ್ವಾಮೀಜಿ ಮಾತನಾಡಿ,ಭಾರತ ದೇಶ ಸಂತರ ನಾಡು.ಯತಿವರೇಣ್ಯರಾದ ಗಣಪತಿ ಶ್ರೀಗಳು ಆಧ್ಯಾತ್ಮಿಕತೆಯನ್ನು ಎಲ್ಲೆಡೆ ಪಸರಿಸುತ್ತಾ ಸನಾತನ ಧರ್ಮದ ಶ್ರೇಯಸ್ಸಿಗೆ ಶ್ರಮಿಸುತ್ತಿದ್ದಾರೆ ಎಂದು ನುಡಿದರು.

ಹರಿಹರ ಪಂಚಮಸಾಲಿ ಮಠದ ಶ್ವಾಸಗುರು ಖ್ಯಾತಿಯ ಪೂಜ್ಯ ಶ್ರೀ ವಚನಾನಂದ ಸ್ವಾಮೀಜಿಯವರು ಈ ವೇಳೆ ಸಭಿಕರಿಗೆ ದ್ಯಾನವನ್ನು ಮಾಡಿಸಿದುದು ವಿಶೇಷವಾಗಿತ್ತು. ಈ ವೇಳೆ ಮಾತನಾಡಿದ ಅವರು ಗಣಪತಿ ಶ್ರೀಗಳು ಶ್ರೀ ದತ್ತನ ಸ್ವರೂಪ ಎಂದು ಬಣ್ಣಿಸಿದರು.
ಶ್ರೀಗಳು ‌ಟ್ರಿನಿಡಿ ದೇಶಕ್ಕೆ ಭೇಟಿ ನೀಡಿದಾಗ ಅಲ್ಲಿಯೂ ಹಿಮಾಲಯದಿಂದ ಗಂಗೆ‌ ಹರಿಯುತ್ತಿದ್ದಾಳೆ ಎಂಬುದನ್ನು ತೋರಿಸಿಕೊಟ್ಟ ಮಹಾತ್ಮರು ಎಂದು ‌ಶ್ವಾಸಗುರು ನುಡಿದರು.

ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರು ‌ಮೂವರು ಶ್ರೀಗಳಿಗೆ ವಂದನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಗಣಪತಿ ಸ್ವಾಮೀಜಿಯವರು ಭಾಗವತದ ಆಡಿಯೋ ಆಲ್ಬಂ, ಬೋನ್ಸಾಯ್ ಆಲ್ಬಂ ಬಿಡುಗಡೆ ಮಾಡಿದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.