9ನೇ ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ತೆರೆ


Team Udayavani, Feb 10, 2017, 12:16 PM IST

mys7.jpg

ಮೈಸೂರು: ಸಂಸ್ಕಾರ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸಿನಿಮಾ ಪೂರಕ ಮಾಧ್ಯಮ ಎಂದು ರಾಜ್ಯಪಾಲ ವಜುಬಾಯ್‌ ವಾಲಾ ಹೇಳಿದರು. ಮೈಸೂರಿನ ಅರಮನೆ ಮುಂಭಾಗ ಗುರುವಾರ ಸಂಜೆ ನಡೆದ 9ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಿನಿಮಾ ನೋಡಿ ಬಂದವರು ಎರಡು ದಿನ ಕಳೆದರೂ ಅದರ ಹಾಡು, ಸಂಭಾಷಣೆಯನ್ನು ಗುನುಗುತ್ತಿರುತ್ತಾರೆ. ಸಿನಿಮಾ ವ್ಯಕ್ತಿಯ ಚಾರಿತ್ರ ನಿರ್ಮಾಣಕ್ಕೆ ಅನುಕೂಲವಾದ ಮಾಧ್ಯಮ. ಹೀಗಾಗಿ ಉತ್ತಮ ಚಿತ್ರಗಳನ್ನು ಸಮಾಜಕ್ಕೆ ನೀಡುವುದು ನಿರ್ದೇಶಕನ ಜವಾಬ್ದಾರಿ. ಮನರಂಜನೆಯ ಜತೆಗೆ ವಿಚಾರಪೂರ್ಣ ಚಿತ್ರಗಳೂ ನಿರ್ಮಾಣವಾಗಬೇಕಿದೆ ಎಂದ ಅವರು, ಲಗಾನ್‌ ಚಿತ್ರವನ್ನು ಉದಾಹರಿಸಿದರು. ಪಾತ್ರಗಳಿಗೆ ಜೀವತುಂಬುವ ಕಲೆ ಎಲ್ಲರಿಗೂ ಬರುವುದಿಲ್ಲ. ಹೀಗಾಗಿ ಸಿನಿಮಾ ನೋಡುವ ಮೂಲಕ ಕಲಾವಿದರನ್ನು ಪೋ›ತ್ಸಾಹಿಸೋಣ ಎಂದರು.

ಚಿತ್ರೋದ್ಯಮಕ್ಕೆ ರಾಜ್ಯಸರ್ಕಾರ ಸಾಕಷ್ಟು ಉತ್ತೇಜನ ನೀಡುತ್ತಾ ಬಂದಿದೆ. ಕನ್ನಡ ಚಿತ್ರ ನಿರ್ಮಾಣಕ್ಕೆ ಸರ್ಕಾರ 10 ಲಕ್ಷ ರೂ. ಪೋ›ತ್ಸಾಹ ಧನ ನೀಡುತ್ತಾ ಬಂದಿದ್ದು, ಕಳೆದ ವರ್ಷ ನಿರ್ಮಾಣವಾದ 125 ಸಿನಿಮಾಗಳಿಗೆ ಸರ್ಕಾರ ಪೋ›ತ್ಸಾಹ ನೀಡಿದೆ. ಇದರ ಜತೆಗೆ ಮೂರು ಅತ್ಯುತ್ತಮ ಚಿತ್ರಗಳಿಗೆ ತಲಾ 50 ಲಕ್ಷ ರೂ. ನೀಡಿ ಪೋ›ತ್ಸಾಹಿಸಿ, ಜತೆಗೆ ಸಿನಿಮಾಗಳಿಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಮೈಸೂರು ಮಹಾ ನಗರಪಾಲಿಕೆ ಮೇಯರ್‌ ಎಂ.ಜೆ.ರವಿಕುಮಾರ್‌, ಶಾಸಕ ಎಂ.ಕೆ.ಸೋಮಶೇಖರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ. ಲಕ್ಷ್ಮೀನಾರಾಯಣ, ಇಲಾಖೆ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್‌.ವಿ.ರಾಜೇಂದ್ರಸಿಂಗ್‌ ಬಾಬು, ಜಿಲ್ಲಾಧಿಕಾರಿ ಡಿ.ರಂದೀಪ್‌ ವೇದಿಕೆಯಲ್ಲಿದ್ದರು.

ಅರಮನೆಯ ಜಗಮಗಿಸುವ ವಿದ್ಯುತ್‌ ದೀಪಾಲಂಕಾರದ ಹಿನ್ನೆಲೆಯಲ್ಲಿ ಹಂಪಿಯ ವಿಜಯ ವಿಠಲ ದೇವಸ್ಥಾನ ಮಾದರಿಯ ಭವ್ಯ ವೇದಿಕೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ವಿವಿಧ ಕಲಾತಂಡಗಳು ನೃತ್ಯ ಕಾರ್ಯಕ್ರಮ ನಡೆಸಿಕೊಟ್ಟವು.

ಪ್ರಶಸ್ತಿ: ಏಷ್ಯನ್‌ ಸಿನಿಮಾ ವಿಭಾಗದ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು “ಎ ಪಾದರ್ ಮಿಲ್‌’ ತನ್ನದಾಗಿಸಿಕೊಂಡಿತು. ಪ್ರಶಸ್ತಿಯು 10,000 ಡಾಲರ್‌ ನಗದು ಬಹುಮಾನ ಒಳಗೊಂಡಿದೆ. ಕನ್ನಡ ಸಿನಿಮಾ ವಿಭಾಗದಲ್ಲಿ ಅಂತಾರಾಷ್ಟ್ರೀಯ ಜ್ಯೂರಿ ಬಹುಮಾನವನ್ನು ಬಿ.ಸುರೇಶ್‌ ನಿರ್ದೇಶನದ “ಉಪ್ಪಿನ ಕಾಗದ’ ಸಿನಿಮಾ ತನ್ನದಾಗಿಸಿಕೊಂಡಿತು. ಪ್ರಶಸ್ತಿಯು 1 ಲಕ್ಷ ರೂ. ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿತ್ತು. ಭಾರತೀಯ ಸಿನಿಮಾ ವಿಭಾಗದಲ್ಲಿ ಅನನ್ಯ ಕಾಸರವಳ್ಳಿ ನಿರ್ದೇಶನದ “ಹರಿಕಥಾ ಪ್ರಸಂಗ’ ಅತ್ಯುತ್ತಮ ಭಾರತೀಯ ಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪ್ರಶಸ್ತಿಯು 3 ಲಕ್ಷ ರೂ. ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.  

ಭಾರತೀಯ ಸಿನಿಮಾ ವಿಭಾಗದ ವಿಶೇಷ ಜ್ಯೂರಿ ಪ್ರಶಸ್ತಿ ಮಂಗೇಶ್‌ ಜೋಶಿ ನಿರ್ದೇಶನದ ಲಾಥೆ ಜೋಶಿ ತನ್ನದಾಗಿಸಿಕೊಂಡಿತು. ಪ್ರಶಸ್ತಿಯು 2 ಲಕ್ಷ ರೂ. ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಭಾರತೀಯ ಸಿನಿಮಾ ವಿಭಾಗದಲ್ಲಿ ಡಾ.ಬಿಜು ಕುಮಾರ್‌ ದಾಮೋದರನ್‌ ನಿರ್ದೇಶನದ ಮಲಯಾಳಿ ಚಿತ್ರ “ಕಾಡು ಪೂಕುನ್ನ ನೇರಮ್‌’ ತನ್ನದಾಗಿಸಿಕೊಂಡಿತು. ಪಿ.ಕೆ.ನಾಯರ್‌ ಸ್ಮಾರಕ ಕ್ರಿಟಿಕ್ಸ್‌ ಜ್ಯೂರಿ ಪ್ರಶಸ್ತಿ “ಲೇಡಿ ಆಫ್ ದಿ ಲೇಕ್‌’ ಚಿತ್ರಕ್ಕೆ ಸಂದಿತು.

ಕನ್ನಡ ಸಿನಿಮಾಗಳ ಪ್ರಶಸ್ತಿ ವಿಭಾಗ…
ಕನ್ನಡ ಸಿನಿಮಾ ವಿಭಾಗದ ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರಶಸ್ತಿಯು ರಾಮಾ ರಾಮಾ ರೇ (ಪ್ರಥಮ), 3 ಲಕ್ಷ ರೂ. ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿತ್ತು. ಪಲ್ಲಟ (ದ್ವಿತೀಯ) 2 ಲಕ್ಷ ರೂ. ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ಹಾಗೂ ಗೋಧಿ ಬಣ್ಣ ಸಾಧಾರಣ ಮೈಕಟ್ಟು (ತೃತೀಯ) 1 ಲಕ್ಷ ರೂ. ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿತ್ತು. 

ಜನಪ್ರಿಯ ಮನರಂಜನೆಯ ಕನ್ನಡ ಸಿನಿಮಾ ವಿಭಾಗ: ಕೋಟಿಗೊಬ್ಬ-2 (ಪ್ರಥಮ) 4 ಲಕ್ಷ ರೂ. ನಗದು, ಸ್ಮರಣಿಕೆ ಮತ್ತು ಪ್ರಶಸ್ತಿಪತ್ರ. ಜಗ್ಗುದಾದ (ದ್ವಿತೀಯ) 3 ಲಕ್ಷ ರೂ. ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ. ದೊಡ್ಮನೆ ಹುಡುಗ (ತೃತೀಯ) 2 ಲಕ್ಷ ರೂ. ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ.

ಮೈಸೂರಿಗೆ ತನ್ನದೇ ಆದ ಇತಿಹಾಸ ಇದೆ. ಇಲ್ಲಿನ ಒಂದೇ ರಸ್ತೆಯಲ್ಲಿ 14ಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳಿವೆ. ಶಿಥಿಲಗೊಂಡಿದೆ ಎಂಬ ಕಾರಣಕ್ಕೆ ಲ್ಯಾನ್ಸ್‌ಡೌನ್‌ ಕಟ್ಟಡ ಹಾಗೂ ದೇವರಾಜ ಮಾರುಕಟ್ಟೆ ಕಟ್ಟಡಗಳನ್ನು ನೆಲಸಮಗೊಳಿಸದೆ ದುರಸ್ತಿಗೊಳಿಸಿ ಕಾಪಾಡಿಕೊಳ್ಳಿ.
-ಎಂ.ಎಸ್‌.ಸತ್ಯು, ಹಿರಿಯ ಚಿತ್ರ ನಿರ್ದೇಶಕ

ಟಾಪ್ ನ್ಯೂಸ್

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.