Mysore: ಮಗು ಮೇಲೆ 58 ವರ್ಷದ ವ್ಯಕ್ತಿ ಲೈಂಗಿಕ ದೌರ್ಜನ್ಯ


Team Udayavani, Dec 13, 2023, 3:22 PM IST

Mysore: ಮಗು ಮೇಲೆ 58 ವರ್ಷದ ವ್ಯಕ್ತಿ ಲೈಂಗಿಕ ದೌರ್ಜನ್ಯ

ಮೈಸೂರು: ಶ್ರೀರಂಗಪಟ್ಟಣ ತಾಲೂಕು ಕೃಷ್ಣರಾಜ ಸಾಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 58 ವರ್ಷದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 3 ವರ್ಷದ ಬಾಲಕಿ ಹಾಗೂ ಆಕೆಯ ಕುಟುಂಬ ಸದಸ್ಯರನ್ನು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ.ನಾಗಣ್ಣೇಗೌಡ ಭೇಟಿ ನೀಡಿ ಸಾಂತ್ವನ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಾಗಣ್ಣೇಗೌಡ, ದೌರ್ಜನ್ಯಕ್ಕೆ ಒಳಗಾದ ಬಾಲಕಿ ಹಾಗೂ ಅವರ ಕುಟುಂಬ ದವರಿಗೆ ಸಾಂತ್ವನ ಹೇಳಿದ್ದೇನೆ. ಬಾಲಕಿಯನ್ನು ಕಾನೂನು, ವೈದ್ಯಕೀಯ, ಸಮಾಲೋಚನೆ, ಆಹಾರ, ತಂಗಲು ವ್ಯವಸ್ಥೆ ಸೇರಿ ಒಂದು ಸೂರಿನಲ್ಲಿ ತಕ್ಷಣಕ್ಕೆ ಸ್ಪಂದಿಸುವ ಎಲ್ಲಾ ರೀತಿಯ ವ್ಯವಸ್ಥೆ ಇರುವ ಸಖೀ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಮಾಹಿತಿ ಮೇಲೆ ಕಾನೂನು ಕ್ರಮ: ತಾಯಿ ಮತ್ತು ಮಗುವಿನಿಂದ ಹೇಳಿಕೆ ಪಡೆಯಲಾಗಿದೆ. ಅವರು ನೀಡಿರುವ ಮಾಹಿತಿ ಪಡೆದು ಆರೋಪಿಯನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಮರಣದಂಡನೆ ಶಿಕ್ಷೆ ಕಾಯ್ದೆ ಜಾರಿಗೆ ಚಿಂತನೆ: ಪೋಕ್ಸೋ ಕಾಯ್ದೆ ಅಡಿ ಪ್ರಸ್ತುತ 20 ವರ್ಷ ಜೈಲು ಶಿಕ್ಷೆ ಇದ್ದು, ಸರ್ಕಾರದ ಜೊತೆ ಚರ್ಚಿಸಿ ಈ ಕಾಯ್ದೆಯಡಿ ದಾಖಲಾದ ಪ್ರಕರಣಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಕಾಯ್ದೆ ತರುವ ಆಲೋಚನೆ ಇದೆ. ಮುಂದಿನ ದಿನಗಳಲ್ಲಿ ಸರ್ಕಾರದ ಜೊತೆ ಚರ್ಚಿಸ ಲಾಗುವುದು ಎಂದು ತಿಳಿಸಿದರು.

18 ವರ್ಷದೊಳಗೆ ಮದುವೆ ಬೇಡ: ರಾಜ್ಯದಲ್ಲಿ ಬಾಲ್ಯವಿವಾಹಗಳಿಂದ ಬಾಲ ತಾಯಂದಿರ ಸಂಖ್ಯೆ ಹೆಚ್ಚಿದ್ದು, ಸಾರ್ವಜನಿಕರಲ್ಲಿ ಈ ಕುರಿತು ಅರಿವು ಮೂಡಿಸಬೇಕು. ಈ ರೀತಿಯ ಪ್ರಕರಣಗಳಿಂದ ಮದುವೆಯಾದ ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವವರೆಗೆ ಇಲಾಖೆಯಿಂದ ಆಶ್ರಯ ನೀಡ ಲಾಗುವುದು. ಪುರುಷರಿಗೆ ಜೈಲು ಶಿಕ್ಷೆಯನ್ನು ನೀಡಲಾಗುತ್ತಿದೆ. ಒತ್ತಾಯ ಪೂರಕವಾಗಿ ಮಕ್ಕಳಿಗೆ ಮದುವೆ ಮಾಡಿಸಿ, ಜೈಲು ಶಿಕ್ಷೆ ಅನುಭವಿಸುವಂತೆ ಮಾಡಬೇಡಿ ಎಂದು ತಿಳಿಸಿದರು.

ಚೆಲುವಾಂಬ ಆಸ್ಪತ್ರೆ ಸ್ಥಾನಿಕ ವೈದ್ಯಾಧಿಕಾರಿ ರಾಜೇಂದ್ರಕುಮಾರ್‌, ಸಖೀ ಒಎಸ್‌ ಸೆಂಟರ್‌ ಆಡ ಳಿತಾಧಿಕಾರಿ ಸುಚಿತ್ರಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರ ಕುಮಾರ್‌, ಸಾಮಾಜ ಕಾರ್ಯಕರ್ತ ಬಿ.ಭಾಸ್ಕರ್‌, ಕೆಆರ್‌ ಎಸ್‌ ಠಾಣಾಧಿಕಾರಿ, ಇತರರು ಇದ್ದರು.

ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ:

ಮೈಸೂರು: ಕೆಆರ್‌ಎಸ್‌ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಸೋಮವಾರ ಮಧ್ಯಾಹ್ನ 59 ವರ್ಷದ ವ್ಯಕ್ತಿಯೊಬ್ಬ ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ. ಕುಟುಂಬದವರು ನೀಡಿದ ಮಾಹಿತಿ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸದ್ದಾರೆ.

ಆರೋಪಿಯು ತನ್ನ ಮನೆಯ ಪಕ್ಕದಲ್ಲಿದ್ದ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಮನೆಯಲ್ಲಿ ಬಾಲಕಿ ಕಾಣದಿರುವುದನ್ನು ಕಂಡು ತಾಯಿ ಹುಡುಕಾಡಿದಾಗ ಆರೋಪಿ ಮನೆಯಲ್ಲಿ ಬಾಲಕಿ ಚೀರಿಕೊಂಡ ಶಬ್ದ ಕೇಳಿಬಂದಿದೆ.

ಕೂಡಲೇ ಸ್ಥಳೀಯರ ನೆರವಿನಿಂದ ಬಾಗಿಲು ಒಡೆದು ಒಳಹೋಗಿ ನೋಡಿದಾಗ ಬಾಲಕಿ ಬಿಟ್ಟು ಆರೋಪಿ ಪರಾರಿಯಾಗಿದ್ದ. ಕೂಡಲೇ ಪಾಲಕರು ಪೊಲೀಸರಿಗೆ ದೂರು ನೀಡಿದ್ದರು.

ಮೈಸೂರು ಜಿಲ್ಲೆಯಲ್ಲಿ 10 ದಿನಗಳಲ್ಲಿ 10 ಪ್ರಕರಣ: ಮೈಸೂರು ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಲ್ಲಿ 10 ಪೋಕೊÕà ಪ್ರಕರಣ ದಾಖಲಾಗಿವೆ. ಇದು ಆತಂಕಕಾರಿ ಬೆಳವಣಿಗೆ.

ಚೆಲುವಾಂಬ ಆಸ್ಪತ್ರೆ ಆವರಣದಲ್ಲಿರುವ ಸಖೀ ವಿಭಾಗದಲ್ಲಿ 10 ಪ್ರಕರಣ ವರದಿಯಾಗಿದೆ. ಸಂತ್ರಸ್ತೆಯರಿಗೆ ಚಿಕಿತ್ಸೆ ಮತ್ತು ಆರೈಕೆ ಮಾಡಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ.ನಾಗಣ್ಣೇಗೌಡ ಹೇಳಿದರು.

ಈ ಹಿಂದೆ ಪೋಕೊÕà ಪ್ರಕರಣಗಳು ಬೆಳಕಿಗೆ ಬರುತ್ತಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಮಾಧ್ಯಮದ ಮೂಲಕ ಮತ್ತು ಸಾಮಾಜಿಕ ಜಾಲತಾಣದ ಮೂಲಕ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅಂತಹ ಆರೋಪಿಗಳ ವಿರುದ್ಧ ಪೊಲೀಸ್‌ ಇಲಾಖೆಯಿಂದ ಕೇಸ್‌ ದಾಖಲಿಸಿ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ. ಜತೆಗೆ ಸಂತ್ರಸ್ತ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೆರವು ನೀಡ ಲಾಗುತ್ತಿದೆ ಎಂದು ತಿಳಿಸಿದರು.

 

ಟಾಪ್ ನ್ಯೂಸ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

Areca

Arecanut Growers: ಎರಡು ವರ್ಷಕ್ಕೊಮ್ಮೆ ಅಡಿಕೆ ಫ‌ಸಲು ಏರಿಳಿತ

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

Pashu-Sanjevani

Mangaluru: ಕರಾವಳಿ ಹೈನುಗಾರರ ಮನ ಗೆದ್ದ ಮನೆ ಬಾಗಿಲಿಗೆ ಪಶು ಸಂಜೀವಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Hun-Deid

Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.