ಹನುಮಂತೋತ್ಸವದಲ್ಲಿ ಮಿಂದೆದ್ದ ಭಕ್ತ ಸಮೂಹ


Team Udayavani, Dec 10, 2019, 3:00 AM IST

hanumantotsava

ಮೈಸೂರು: ಹನುಮ ಜಯಂತಿ ಅಂಗವಾಗಿ ನಗರದಾದ್ಯಂತ ಹನುಮ ದೇಗುಲಗಳಲ್ಲಿ ವಿಶೇಷ ಪೂಜೆ, ಅಲಂಕಾರ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ನಗರದ ಹಲವೆಡೆ ಇರುವ ಆಂಜನೇಯ ಮೂರ್ತಿಗೆ ವಿಶೇಷ ರುದ್ರಾಭಿಷೇಕ, ಅಲಂಕಾರ ಪೂಜೆ, ಮಹಾಮಂಗಳಾರತಿ ನಡೆದರೆ, ಇನ್ನೂ ಕೆಲವೆಡೆ ಬೆಳಗ್ಗೆಯಿಂದಲೇ ಹೋಮ, ಅಭಿಷೇಕ ನಡೆದವು. ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ನೂರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.

ಬೆಣ್ಣೆ ಅಲಂಕಾರ: ಕುವೆಂಪುನಗರದಲ್ಲಿರುವ ಶ್ರೀವೀರ ಪ್ರಸನ್ನ ಸ್ವಾಮಿ ದೇಗುಲದಲ್ಲಿ ಬೆಳಗ್ಗೆ ಸುಪ್ರಭಾತ ಸೇವೆ, ಸತ್ಯಾರಾಧನೆ, ಪಂಚಾಮೃತಾಭಿಷೇಕ, ಬೆಣ್ಣೆ ಅಲಂಕಾರ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ನೆರವೇರಿದವು.

ನಗರದ ಅಗ್ರಹಾರದಲ್ಲಿರುವ ಚಿಕ್ಕಾಂಜನೇಯ ಸ್ವಾಮಿ ದೇಗುಲದಲ್ಲಿ ಹನುಮ ಜಯಂತಿ ಅಂಗವಾಗಿ ದೇಗುಲವನ್ನು ತಳಿರು ತೋರಣದಿಂದ ಸಿಂಗರಿಸಲಾಗಿತ್ತು. ಜೊತೆಗೆ ಶ್ರೀರಾಮ ಭಜನೆ, ನೈವೇದ್ಯ ಮಹಾಮಂಗಳಾರತಿ ಸೇರದಂತೆ ವಿಶೇಷ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಬೆಳಗ್ಗೆಯಿಂದ ಸಂಜೆವರೆಗೆ ದೇಗುಲಕ್ಕೆ ಬಂದು ಪೂಜೆ ಸಲ್ಲಿಸಿದರು.

ಆಶೀರ್ವಚನ: ತ್ರಿಪುರ ಭರವಿ ಮಠದ ವತಿಯಿಂದ ಶಿವರಾಂಪೇಟೆಯ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಠದ ಶ್ರೀ ಕೃಷ್ಣಮೋಹನಾನಂದಗಿರಿ ಸ್ವಾಮೀಜಿ ನೇತೃತ್ವದಲ್ಲಿ ವಿಶೇಷ ಪೂಜೆ, ಹೋಮ, ಅಭಿಷೇಕ, ನಡೆಯಿತು. ಬಳಿಕ ಶ್ರೀ ಅಖೀಲೇಶ್ವರಾನಂದಗಿರಿ ಮಹಾರಾಜ್‌ ಹಾಗೂ ಸಾಧು ಸಂತರಿಂದ ಆಶೀರ್ವಚನ ಕಾರ್ಯಕ್ರಮ ನಡೆಯಿತು. ಬಳಿಕ ಸಂಜೆ 6ಕ್ಕೆ ಮೆರವಣಿಗೆ ನಡೆಸಲಾಯಿತು.

ಅಭಿಷೇಕ, ಭಜನೆ: ಹೆಬ್ಬಾಳದ ವಿದ್ಯಾಗಣಪತಿ ದೇವಸ್ಥಾನದಲ್ಲಿ ಹನುಮ ಜಯಂತಿ ಅಂಗವಾಗಿ ಆಂಜನೇಯ ಸ್ವಾಮಿಗೆ ಸಂಕಲ್ಪ ಪೂಜೆ, 108ಲೀ ಹಾಲು, ಎಳನೀರು, ಮೊಸರು ಪಂಚಾಮೃತ, ತುಪ್ಪ, ಜೇನುತುಪ್ಪ, ಸಕ್ಕರೆ, ಅರಿಶಿನ-ಕುಂಕುಮ, ಭಸ್ಮ, ಶ್ರೀಗಂಧ, ಸಿಂಧೂರ ಮುಂತಾದ ದ್ರವ್ಯಗಳಿಂದ ಅಭಿಷೇಕ ನಡೆಸಲಾಯಿತು. ನಂತರ ವಸ್ತ್ರಾಲಂಕಾರ, ಹೂವಿನ ಅಲಂಕಾರಗಳು ನಡೆದವು. ಇದೇ ವೇಳೆ ಮಹಿಳಾ ಮಂಡಳಿಯಿಂದ ಶ್ರೀರಾಮ ಭಜನಾ ಕಾರ್ಯಕ್ರಮ ನಡೆಯಿತು.

ಬೃಹತ್‌ ಮೆರವಣಿಗೆ: ಆಂಜನೇಯಸ್ವಾಮಿ ದೇವಸ್ಥಾನ ಟ್ರಸ್ಟ್‌ ವತಿಯಿಂದ ಹನುಮ ಜಯಂತಿ ಅಂಗವಾಗಿ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಮಾರುತಿ ಮೂರ್ತಿಯ ಬೃಹತ್‌ ಮೆರವಣಿಗೆಗೆ ಶಾಸಕ ಎಸ್‌.ಎ. ರಾಮದಾಸ್‌ ಹಾಗೂ ನಗರ ಪೊಲೀಸ್‌ ಆಯುಕ್ತ ಕೆ.ಟಿ. ಬಾಲಕೃಷ್ಣ ಚಾಲನೆ ನೀಡಿದರು.

ಅಲಂಕೃತ ರಥದಲ್ಲಿ ಮಾರುತಿಯ ಉತ್ಸವ ಮೂರ್ತಿಯನ್ನಿರಿಸಿ ಕಲಾ ತಂಡಗಳೊಂದಿಗೆ ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಮೆರವಣಿಗೆ ನಡೆಸಲಾಯಿತು. ಇದಕ್ಕೂ ಮುಂಚೆ ಶಾಸಕ ಎಸ್‌.ಎ. ರಾಮದಾಸ್‌, ಪೊಲೀಸ್‌ ಆಯುಕ್ತ ಕೆ.ಟಿ. ಬಾಲಕೃಷ್ಣ ಹಾಗೂ ಎಚ್‌.ಎಚ್‌. ನಂದೀಶ್‌ ಪ್ರೀತಮ್‌ ಅವರು ನಂದಿ ಕಂಬಕ್ಕೆ ಹಾಗೂ ಆಂಜನೇಯ ಮೂರ್ತಿಗೆ ಪೂಜೆ ಸಲ್ಲಿಸಿದರು.

ಆಕರ್ಷಕ ಕಲಾತಂಡಗಳ ಮೆರವಣಿಗೆ: ಆಂಜನೇಯಸ್ವಾಮಿ ದೇವಸ್ಥಾನ ಟ್ರಸ್ಟ್‌ ವತಿಯಿಂದ ನಡೆದ ಮೆರವಣಿಗೆಯಲ್ಲಿ ನಂದಿ ಕಂಬ, ಬೀಸು ಕಂಸಾಳೆ, ವೀರಗಾಸೆ, ಡೊಳ್ಳುಕುಣಿತ, ಕೀಲು ಕುದುರೆ ತಂಡ, ಮರಗಾಲು ಕುಣಿತ, ಪೂಜಾ ಕುಣಿತ, ಗಾರುಡಿ ಗೊಂಬೆಯ ಮೇಳ, ಸುತ್ತೂರು ಕಹಳೆ ತಂಡ, ತಮಟೆ, ನಗಾರಿ, ಜಡೆ ಕೋಲಾಟ, ಕರಗದ ನೃತ್ಯ, ಕರಗದ ಕೋಲಾಟ ಸೇರಿದಂತೆ 20ಕ್ಕೂ ಹೆಚ್ಚು ಕಲಾ ತಂಡಗಳು ಭಾಗವಹಿಸಿದ್ದವು.

ಮೆರವಣಿಗೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಿಂದ ಅಶೋಕ ರಸ್ತೆ, ಇರ್ವೀನ್‌ ರಸ್ತೆ, ನ್ಯೂ ಸಯ್ನಾಜಿರಾವ್‌ ರಸ್ತೆ, ಡಿ. ದೇವರಾಜು ಅರಸು ರಸ್ತೆ, ನಾರಾಯಣ ಶಾಸ್ತ್ರಿ ರಸ್ತೆ, ಚಾಮರಾಜ ಜೋಡಿ ರಸ್ತೆ, ಜಿಲ್ಲಾ ಪಂಚಾಯಿತಿ ಕಚೇರಿ ಎದುರಿನಿಂದ ಕೆ.ಜಿ.ಕೊಪ್ಪಲು ಮಾರ್ಗವಾಗಿ ಸರಸ್ವತಿಪುರಂ ದೇವಾಲಯಕ್ಕೆ ತೆರಳಿತು.

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.