500 ವರ್ಷ ಹಿಂದೆಯೇ ಜಾತಿ ವಿರುದ್ಧ ಕೀರ್ತನೆ


Team Udayavani, Nov 16, 2019, 3:00 AM IST

500-varsha-hin

ಮೈಸೂರು: ಕನಕದಾಸರು ನಾಡು-ನುಡಿಗೆ ಹಾಗೂ ಸಮಾಜಕ್ಕೆ ತಮ್ಮ ಕೀರ್ತನೆಗಳ ಮೂಲಕ ಅಪಾರವಾದ ಕೊಡುಗೆ ನೀಡಿದ್ದಾರೆ. ನಾವೆಲ್ಲರೂ ಕನಕದಾಸರ ಒಂದಷ್ಟು ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಸಿದ್ಧಾರ್ಥನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪುರುಷೋತ್ತಮ ಹೇಳಿದರು.

ನಗರದ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಜಯಲಕ್ಷ್ಮಮ್ಮಣ್ಣಿ ಸಭಾಂಗಣದಲ್ಲಿ ನಡೆದ ಕನಕ ಜಯಂತಿಯಲ್ಲಿ ಮಾತನಾಡಿದ ಅವರು, ಸುಮಾರು 500 ವರ್ಷಗಳ ಹಿಂದೆಯೇ ಸಮಾಜದಲ್ಲಿ ಸಾಹಿತ್ಯದ ಮೂಲಕ ಎಲ್ಲಾ ಜನರ ಭಾವನೆಗಳನ್ನು ಒಗ್ಗೂಡಿಸುವ ಕಾರ್ಯ ಮಾಡಿದ್ದಾರೆ. ಆದರೆ, ಇಂದು ಸಮಾಜವು ಅಂತಹ ವ್ಯಕ್ತಿಗಳನ್ನು ಒಂದು ಜಾತಿಗೆ ಸೀಮಿತವಾಗಿ ನೋಡುತ್ತಿರುವುದು ವಿಷಾದಕರ ಎಂದರು.

ಕನಕದಾಸರು ಸಮರ್ಪಣಾಭಾವ ಹೊಂದಿ, ದಾಸನಾಗಿ ಕೀರ್ತನೆಗಳನ್ನು ಸಮಾಜಕ್ಕೆ ಸಾರುತ್ತಾ ಜಾತಿ-ಧರ್ಮವನ್ನು ಕಿತ್ತೂಗೆಯುವ ಭಾವನೆ ಬಿತ್ತುತ್ತಿದ್ದರು. ಅಂದಿನ ಕಾಲದಲ್ಲೇ ಅಕ್ಕಿ ಮತ್ತು ರಾಗಿಯಲ್ಲಿ ಯಾವುದು ಶ್ರೇಷ್ಠ ಹಾಗೂ ಮಾನವನಿಗೆ ಯಾವುದು ಆರೋಗ್ಯಕರ ಆಹಾರ ಎಂದು ಹೋರಾಟ ಮಾಡಿ ತಿಳಿಸಿದ್ದರು. ಇಂತಹ ವ್ಯಕ್ತಿಯನ್ನು ನಾವು ದ್ವಂದ್ವ ಮನೋಭಾವದಲ್ಲಿ ನೋಡಬಾರದು. ಅವರು ಸ್ಮರಣೆಯ ಸಂಕೇತವಾಗಿ ಎಲ್ಲರಲ್ಲೂ ಉಳಿದಿದ್ದಾರೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಬಸವಣ್ಣ, ಕನಕದಾಸರು ಹಾಗೂ ಕುವೆಂಪು ಅವರು ತಮ್ಮ ಸಾಮಾಜಿಕ ಕಳಕಳಿಯ ಬರಹಗಳಿಂದ ಜನಸಾಮಾನ್ಯರನ್ನು ತಲುಪುತ್ತಿದ್ದರು. ಇವರು ಇಡೀ ಸಮಾಜದ ಆಸ್ತಿ ಎಂದರೆ ತಪ್ಪಾಗಲಾರದು, ಇಂತಹ ವ್ಯಕ್ತಿಗಳನ್ನು ಕೇವಲ ಒಂದು ದಿನ ಮಾತ್ರ ಸ್ಮರಿಸದೇ ಸದಾ ಸ್ಮರಿಸುತ್ತಾ ಗೌರವ ಸಮರ್ಪಣೆ ಮಾಡಬೇಕು ಎಂದು ತಿಳಿಸಿದರು.

ಮಹಾರಾಣಿ ಮಹಿಳಾ ಕಲಾ ಕಾಲೇಜು ಪ್ರಾಂಶುಪಾಲ ಡಾ.ಬಿ.ಟಿ.ವಿಜಯ್‌ ಮಾತನಾಡಿ, ಕುಲ ಕುಲವೆಂದು ಹೊಡೆದಾಡದಿರಿ ನಿನ್ನ ಕುಲದ ನೆಲೆ ಯಾವುದೆಂದು ತಿಳಿದಿದಿಯಾ ಎಂಬಾ ಕನಕದಾಸರ ಕೀರ್ತನೆ ಇಂದಿಗೂ ಪ್ರಸ್ತುತವಾಗಿದೆ. ಇಂದು ಜಾತಿ-ಧರ್ಮಗಳ ಮೇಲೆ ವ್ಯಕ್ತಿಗಳ ಆರಾಧನೆ ಮಾಡುತ್ತಿರುವುದು ಮಾನವನ ಮನಸ್ಥಿತಿ ಏನೆಂಬುದನ್ನು ತಿಳಿಸುತ್ತದೆ ಇದು ಕೊನೆಯಾಗಬೇಕು ಎಂದು ಹೇಳಿದರು.

ನಾವೆಲ್ಲರೂ ಒಂದು ಎಂದು ಸಾರಿದ ವಿಶ್ವ ಮಾನವರು ಅನೇಕರಿದ್ದಾರೆ ಅಂತಹವರಲ್ಲಿ ಕನಕದಾಸರು ಒಬ್ಬರಾಗಿದ್ದಾರೆ. ಅವರ ವಿಚಾರಧಾರೆಗಳನ್ನು ನಾವು ಅಳವಡಿಸಿಕೊಳ್ಳಬೇಕು. ಜಾತಿಯ ಮನೋಭಾವನೆಯನ್ನು ಕಿತ್ತೂಗೆಯಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಸಾಂಸ್ಕೃತಿಕ ವೇದಿಕೆಯ ಕಾರ್ಯದರ್ಶಿ ಪ್ರೊ.ಮಹದೇವಯ್ಯ, ಖಜಾಂಚಿ ಪ್ರೊ.ಮನೋನ್ಮಣಿ ಎಂ.ಎಸ್‌, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಪಲ್ಲವಿ ಕೆ.ಬಿ., ಕಾರ್ಯದರ್ಶಿ ಸಿ.ಪದ್ಮಾ ಇತರರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.