ಎಡೆಬಿಡದೆ ಸುರಿದ ಮಳೆಗೆ ತಾತ್ಕಾಲಿಕ ಸೇತುವೆ ಕುಸಿತ

ಟೊಮೆಟೋ, ತರಕಾರಿ, ಭತ್ತದ ಬೆಳೆ ಮಳೆಯ ಆರ್ಭಟಕ್ಕೆ ನಲುಗಿದೆ.

Team Udayavani, May 20, 2022, 5:38 PM IST

ಎಡೆಬಿಡದೆ ಸುರಿದ ಮಳೆಗೆ ತಾತ್ಕಾಲಿಕ ಸೇತುವೆ ಕುಸಿತ

ಕೆ.ಆರ್‌.ನಗರ: ಸಾಲಿಗ್ರಾಮ ಮತ್ತು ಕೆ.ಆರ್‌ .ನಗರ ತಾಲೂಕಾದ್ಯಂತ ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆರೆ ಕಟ್ಟೆ, ಜಮೀನಿನಲ್ಲಿ ನೀರು ತುಂಬಿ ಹರಿಯುತ್ತಿದ್ದು, ಎತ್ತ ನೋಡಿದರೂ ಜಲ ದರ್ಶನವಾಗುತ್ತಿದೆ.

ಬಿಡುವಿಲ್ಲದೆ ಸುರಿಯುತ್ತಿರುವ ತುಂತುರು ಸಹಿತ ಜಡಿ ಮಳೆಗೆ ಮನೆಗಳ ಗೋಡೆ ಕುಸಿದು, ಸಾವಿರಾರು ಮರಗಳು ನೆಲಕ್ಕೆ ಉರುಳಿವೆ. ಇದರಿಂದ ಗ್ರಾಮಾಂತರ ಪ್ರದೇಶದಲ್ಲಿ ಕರೆಂಟ್‌ ಕೈಕೊಟ್ಟು ಜನತೆ ಕತ್ತಲೆಯಲ್ಲಿ ದಿನ ಕಳೆಯುವಂತಾಗಿದೆ. ಹೊಲದಲ್ಲಿ ನೀರು ನಿಂತು ಬೆಳೆ ನಷ್ಟವಾಗಿದೆ.

ಪಟ್ಟಣ ಹೊರತುಪಡಿಸಿ, ಗ್ರಾಮೀಣ ರಸ್ತೆಗಳ ಸ್ಥಿತಿ ಹೇಳತೀರದಾಗಿದೆ. ರಸ್ತೆಗಳಲ್ಲಿರುವ ಮೊಣಕಾಲುದ್ದ ಗುಂಡಿಯಲ್ಲಿ ನೀರು ನಿಂತು ವಾಹನ ಸವಾರರಿಗೆ ರಸ್ತೆ ಯಾವುದು, ಗುಂಡಿ ಯಾವುದು ತಿಳಿಯದೇ ಪರದಾಡುವಂತಾಗಿದೆ. ಕಾವೇರಿ ನದಿ ತೀರದಲ್ಲಿರುವ ಹೊಲ ಗದ್ದೆಗಳು ಜಲಾವೃತವಾಗಿವೆ.

ತಾತ್ಕಾಲಿಕ ಸೇತುವೆ ಕುಸಿತ: ತಂಬಾಕು, ಟೊಮೆಟೋ, ತರಕಾರಿ, ಭತ್ತದ ಬೆಳೆ ಮಳೆಯ ಆರ್ಭಟಕ್ಕೆ ನಲುಗಿದೆ. ರೈತರು ಸಾಕಷ್ಟು ನಷ್ಟ ಅನುಭಸುವಂತಾಗಿದೆ. ಹಾಸನ – ಮೈಸೂರು ರಸ್ತೆಯ ಅರಕೆರೆ ಗ್ರಾಮದ ಬಳಿ ಮುಖ್ಯರಸ್ತೆಯ ಸೇತುವೆ ಮುರಿದುಬಿದ್ದಿದ್ದರಿಂದ ರಸ್ತೆ ಪಕ್ಕದಲ್ಲೇ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಕುಸಿದು ಸಂಚಾರಕ್ಕೆ ಅಡಚಣೆ ಆಗಿದೆ.

ಜೆಸಿಬಿ ಯಂತ್ರ ನೀರಿನಲ್ಲಿ ಮುಳುಗಿದೆ: ಭಾರೀ ಮಳೆಗೆ ರಾತ್ರೋರಾತ್ರಿ ಕಾಲುವೆಯಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ನುಗ್ಗಿದ ಪರಿಣಾಮ ಕಾಮಗಾರಿ ನಡೆಸುತ್ತಿದ್ದ ಜೆಸಿಬಿ ಯಂತ್ರ ನೀರಿನಲ್ಲಿ ಮುಳುಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಗುತ್ತಿಗೆದಾರ ಚಂದ್ರೇಗೌಡ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ನೀರಾವರಿ ಇಲಾಖೆ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಈರಣ್ಣ, ಎಇಇ ಗುರುರಾಜ್‌, ರಾಷ್ಟ್ರೀಯ ಹೆದ್ದಾರಿ ಇಲಾಖೆ
ಅಧಿಕಾರಿಗಳು ರಸ್ತೆಗೆ ಅಡ್ಡಲಾಗಿ ಮಣ್ಣು ಸುರಿಸಿ, ವಾಹನಗಳು ಬೇರೆ ಮಾರ್ಗದಲ್ಲಿ ಸಂಚರಿಸಲು ಅನುಕೂಲ ಮಾಡಿದರು.

ಸಂಚಾರಕ್ಕೆ ಬದಲಿ ಮಾರ್ಗ: ಮೈಸೂರಿನಿಂದ ಹಾಸನಕ್ಕೆ ತೆರಳುವ ವಾಹನಗಳು ಪಟ್ಟಣದಿಂದ ಡೋರ್ನಹಳ್ಳಿ, ದೊಡ್ಡೇಕೊಪ್ಪಲು ಮಾರ್ಗವಾಗಿ ಹಾಗೂ ಕೆ.ಆರ್‌.ನಗರದಿಂದ ಮೈಸೂರಿಗೆ ತೆರಳುವ ವಾಹನಗಳು ಮುಳ್ಳೂರು, ದೊಡ್ಡೇಕೊಪ್ಪಲು ಮಾರ್ಗವಾಗಿ ಸಂಚಾರ ಮಾಡಲು ಸೂಚಿಸಲಾಗಿದೆ.

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.