ವಿಟಿಯು ಫಲಿತಾಂಶಕ್ಕಾಗಿ ಎಬಿವಿಪಿ ಪ್ರತಿಭಟನೆ
Team Udayavani, Apr 21, 2017, 12:33 PM IST
ಮೈಸೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯ (ವಿಟಿಯು)ದ ನಿಧಾನಗತಿಯ ಫಲಿತಾಂಶ ಪ್ರಕ್ರಿಯೆಯನ್ನು ಖಂಡಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮೌಲ್ಯಮಾಪನ, ಮರು ಮೌಲ್ಯಮಾಪನ ಮತ್ತು ಹಣಕಾಸಿನ ವಿಷಯದಲ್ಲಿ ಅವೈಜಾnನಿಕ ಆಡಳಿತ ನಡೆಸುತ್ತಿದ್ದು. ಇದರಿಂದ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ ಎಂದು ಆರೋಪಿಸಿದ ಕಾರ್ಯಕರ್ತರು ರಾಮಸ್ವಾಮಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯವಾಗಿರುವ ಈ ಸಂಸ್ಥೆಯಲ್ಲಿ ಪದೇ ಪದೇ ನಾನಾ ಸಮಸ್ಯೆ ಉಂಟಾಗುತ್ತಿದ್ದು. ವಿಷಯ ತಿಳಿದಿದ್ದರೂ ವಿವಿಯ ಆಡಳಿತ ಮಂಡಳಿ ತಟಸ್ಥವಾಗಿದೆ ಎಂದು ಅಕ್ರೋಶ ವ್ಯಕ್ತ ಪಡಿದರು.
ಕಳೆದ ಡಿಸೆಂಬರ್ ಮತ್ತು ಜನವರಿಯಲ್ಲಿ ನಡೆದ ಪರೀಕ್ಷೆಯ ಫಲಿತಾಂಶವನ್ನು ಮೂರು ತಿಂಗಳು ಕಳೆದರೂ ಪ್ರಕಟಿಸಿಲ್ಲ. ಈ ಕಾರಣದಿಂದ ರಾಜ್ಯದ ಲಕ್ಷಾಂತರ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ವಿವಿಯ ಕಾರ್ಯವೈಖರಿ ಹದಗೆಟ್ಟದ್ದು. ನಿಧಾನಗತಿಯ ಫಲಿತಾಂಶ ದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ.
ಮುಂದಿನ ದಿನಗಳಲ್ಲಿ ಫಲಿತಾಂಶ ನಂತರ ಮರು ಮೌಲ್ಯಮಾಪನ ಕುರಿತಂತೆ ಮತ್ತೆ ಗೊಂದಲಗಳು ಮರುಕಳಿಸದಂತೆ ಎಚ್ಚರವಹಿಸಿ. ತಕ್ಷಣವೇ ಫಲಿತಾಂಶ ಪ್ರಕಟಿಸಬೇಕು, ಎದುರಾಗಿರುವ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಒತ್ತಾ ಯಿಸಿದರು. ಪ್ರತಿಭಟನೆಯಲ್ಲಿ ಎಬಿವಿಪಿಯ ಶರತ್, ನವೀನ್, ಪ್ರಶಾಂತ್, ಸೂರ್ಯರಾಮ, ನಿಖೀಲ್, ಹರೀಶ್, ಭರತ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.