ಅರಣ್ಯ ಇಲಾಖೆ ಎಸಿಎಫ್ ಮನೆಗೆ ಎಸಿಬಿ ದಾಳಿ: ಏಕಕಾಲದಲ್ಲಿ ಐದು ಕಡೆ ಶೋಧ
Team Udayavani, Dec 18, 2020, 12:25 PM IST
ಮೈಸೂರು: ಇಲ್ಲಿನ ಅರಣ್ಯ ಇಲಾಖೆಯ ಎಸಿಎಫ್ ಶಿವಶಂಕರ್ ಮನೆಗೆ ಇಂದು ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳ ತಂಡದ ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿರುವ ಆರೋಪದಡಿಯಲ್ಲಿ ಶಿವಶಂಕರ್ ಮನೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಎಫ್ ಶಿವಶಂಕರ್ ಮನೆ ಸೇರಿದಂತೆ ಐದು ಕಡೆಗಳಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ.
ಮೈಸೂರಿನ ನಜರ್‌ಬಾದ್, ಸರಸ್ವತಿಪುರಂ, ಜೆ ಸಿ ಬಡಾವಣೆ ಹಾಗೂ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ರೈತರ ಪ್ರತಿಭಟನೆ: 11 ದಿನ ಒಂದು ಸಾವಿರ ಕಿಲೋ ಮೀಟರ್ ಸೈಕಲ್ ಪ್ರಯಾಣ-ಬಿಹಾರ ಟು ದೆಹಲಿ
ಮೈಸೂರಿನ ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಶಂಕರ್ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿದ್ದಾರೆ.
ಎಸಿಬಿ ಎಸ್ ಪಿ ಡಾ ಸುಮನ್ ಡಿ ಪನೆಕರ್ ಮಾರ್ಗದರ್ಶನದಲ್ಲಿ, ಎಸಿಬಿ ಡಿ ಎಸ್ ಪಿ., ಎಚ್ ಪರಶುರಾಮಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.