ಅಪಮಾನ, ಅಪಹಾಸ್ಯವನ್ನು ಸವಾಲಾಗಿ ಸ್ವೀಕರಿಸಿ

Team Udayavani, Mar 11, 2020, 3:00 AM IST

apamana-apa

ಮೈಸೂರು: ಪುರುಷರು ಮಹಿಳೆಯರಿಗೆ ಸಮಾನ ಅವಕಾಶ ದೊರಕಿಸಿಕೊಡಲು ಧ್ವನಿ ಎತ್ತಬೇಕು ಎಂದು ಜಿಪಂ ಯೋಜನಾ ನಿರ್ದೇಶಕಿ ಕೆ.ಸುಶೀಲಾ ಹೇಳಿದರು. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ಮುಕ್ತ ವಿವಿಯ ಅಕ್ಕಮಹಾದೇವಿ ಪೀಠದ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.

ಬಡ ಕುಟುಂಬಗಳಿಗಿಂತ ಶ್ರೀಮಂತ ಹಾಗೂ ಸುಶಿಕ್ಷಿತರ ಕುಟುಂಬದಲ್ಲೇ ಮಹಿಳೆಯರ ಮೇಲೆ ಹೆಚ್ಚಾಗಿ ದೌರ್ಜನ್ಯ ನಡೆಯುತ್ತಿವೆ. ನಾವು ಮಹಿಳಾ ಸಮಾನತೆಯ ಬಗ್ಗೆ ಮಾತನಾಡುತ್ತೇವೆ. ಜನಸಂಖ್ಯೆಯಲ್ಲಿ ಪುರುಷರಷ್ಟೇ ಸರಿಸಮಾನವಾಗಿ ಮಹಿಳೆಯರು ಇದ್ದಾರೆ. ಇದರಿಂದ ಈಗಾಗಲೇ ಮಹಿಳೆಯರಿಗೆ ಸಮಾನತೆ ಸಿಕ್ಕಂತಾಗಿದೆ. ಆದರೆ ಸರಿಸಮಾನವಾದ ಅವಕಾಶ ಸಿಕ್ಕಿಲ್ಲ ಎಂದರು.

ಈ ಹಿಂದೆ ಮಹಿಳಾ ಆಯೋಗದ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತದ್ದ ವೇಳೆ ದಿನಕ್ಕೆ ದಾಖಲಾಗುತ್ತಿದ್ದ ನೂರಾರು ಪ್ರಕರಣಗಳನ್ನು ನೋಡಿದ್ದೇನೆ. ಅವುಗಳಲ್ಲಿ ಬಡ ಕುಟುಂಬದ ದೌರ್ಜನ್ಯ ಪ್ರಕರಣ ಹಾಗೂ ಶ್ರೀಮಂತ ಕುಟುಂಬದ ಹಾಗೂ ಸುಶಿಕ್ಷಿತರ ಕುಟುಂಬ ಪ್ರಕರಣಗಳನ್ನೂ ಗಮನಿಸಿದ್ದೇನೆ. ಅದರಲ್ಲೂ ವಿಚಾರಣೆ ವೇಳೆ ಕಾಲಿಗೆ ಬಿದ್ದು, ಅತಿ ವಿನಯವಾಗಿ ಮಾತನಾಡುವ ನಾಟಕವಾಡಿ ನಾನೇನು ತಪ್ಪು ಮಾಡಿಲ್ಲ.

ಎಲ್ಲಾ ಹೆಂಡತಿಯದ್ದೇ ತಪ್ಪೆಂದು ಹೇಳಿರುವ ಶ್ರೀಮಂತರನ್ನು ಕಂಡಿದ್ದೇನೆ. ತನ್ನಷ್ಟೇ ಸರಿಸಮಾನವಾಗಿ ದುಡಿದರೂ ಮನೆಯಲ್ಲಿ ನಿರಂತರ ಕಿರುಕುಳ ನೀಡಿ, ತಾನು ಮುಗ್ಧ ಎಂದು ನಂಬಿಸಲು ಪ್ರಯತ್ನಿಸಿದ್ದವರನ್ನು ನೋಡಿದ್ದೇನೆ. ಸಿಗರೇಟಿನಿಂದ ಸುಟ್ಟಿರುವ ಪ್ರಕರಣವನ್ನೂ ಕಂಡಿದ್ದೇನೆ. ಸಮಾಜದಲ್ಲಿ ಎಷ್ಟೇ ಬದಲಾವಣೆಗಳಾªರೂ ಉತ್ತಮ ಶಿಕ್ಷಣ ಪಡೆದವರ ಕುಟುಂಬಗಳಲ್ಲೇ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ತಲೆ ತಗ್ಗಿಸುವ ಸಂಗತಿ ಎಂದರು.

ಶಿಕ್ಷಣವೊಂದೆ ಮಹಿಳೆಯರ ಬದುಕನ್ನು ಹಸನು ಮಾಡುತ್ತದೆ ಎಂಬುದನ್ನು ಅರಿತಿದ್ದ ಸಾವಿತ್ರಿಬಾಪುಲೆ ಮಹಿಳೆಯರಿಗೆ ಶಿಕ್ಷಣ ನೀಡಲು ಶಾಲೆಯೊಂದನ್ನು ಆರಂಭಿಸಿದರು. ಇದರಿಂದ ಸಮಾಜದ ಕೆಂಗಣ್ಣಿಗೆ, ಅಪಮಾನಕ್ಕೆ ಗುರಿಯಾಗಿದ್ದರು. ಸಗಣಿ ನೀರನ್ನು ಎರಚಿ ಅಪಮಾನಿಸಿದ್ದರು. ಆದರೂ ಛಲ ಬಿಡದೆ ಮಹಿಳೆಯರಿಗೂ ಶಿಕ್ಷಣ ಪಡೆಯಬೇಕು ಎಂಬ ಯಶಸ್ವಿ ಹೋರಾಟ ಮಾಡಿ ಗಮನ ಸೆಳೆದರು.

ಸಾವಿತ್ರಿ ಬಾಪುಲೆ ಅವರಂತೆ ಮಹಿಳೆಯರು ತಮಗಾದ ಅಪಮಾನ, ಅಪಹಾಸ್ಯವನ್ನೇ ಸವಾಲಾಗಿ ಸ್ವೀಕರಿಸಿ ಸಾಧನೆ ಮಾಡುವತ್ತ ಗಮನ ಕೇಂದ್ರೀಕರಿಸಬೇಕು ಎಂದು ಸಲಹೆ ನೀಡಿದರು. ಮಹಿಳೆಯರ ರಕ್ಷಣೆಗಾಗಿ ಹಲವಾರು ಕಾನೂನುಗಳಿವೆ. ಅವುಗಳನ್ನು ಸಮರ್ಥವಾಗಿ ಜಾರಿಗೆ ತಂದರೆ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಬಹುದು. ಹೊಸ ಕಾನೂನುಗಳ ಅವಶ್ಯಕತೆ ಇರುವುದೇ ಇಲ್ಲ ಎಂದರು.

ಮುಕ್ತ ವಿವಿ ಪರೀಕ್ಷಾಂಗ ಕುಲಸಚಿವೆ ಡಾ.ಕವಿತಾ ರೈ ಅವರ “ವಚನ-ನಿರ್ವಚನ ವಚನಗಳ ವಿಮರ್ಶೆಗಳ ಆಯ್ದ ಸಂಕಲನ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮುಕ್ತ ವಿವಿ ಕುಲಪತಿ ಪ್ರೊ.ಎಸ್‌.ವಿದ್ಯಾಶಂಕರ್‌, ಸಾಹಿತಿ ಪ್ರೊ. ಮೊರಬದ ಮಲ್ಲಿಕಾರ್ಜುನ, ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ, ಡೀನ್‌ ಡಾ.ತೇಜಸ್ವಿ ನವಿಲೂರು, ಅಕ್ಕಮಹಾದೇವಿ ಪೀಠದ ಸಂಚಾಲಕಿ ಡಾ.ಎಚ್‌.ರಾಜೇಶ್ವರಿ ಇತರರಿದ್ದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.