ಮುಕ್ತ ವಿವಿ ಜುಲೈ ಆವೃತ್ತಿಗೆ ಪ್ರವೇಶ ಪ್ರಕ್ರಿಯೆ


Team Udayavani, May 4, 2019, 3:00 AM IST

mukta

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2019ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ವಿವಿಧ ಕೋರ್ಸ್‌ಗಳಿಗೆ ಪ್ರವೇಶಾತಿ ಸಂಬಂಧ ಮುಂದಿನ ಒಂದು ವಾರದೊಳಗೆ ಪ್ರಕಟಣೆ ಹೊರಡಿಸಲಾಗುವುದು.

ಸ್ನಾತಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಜೊತೆಗೆ ಈ ವರ್ಷದಿಂದ ಒಂದು ವರ್ಷ ಅವಧಿಯ ಪಿ.ಜಿ.ಡಿಪ್ಲೊಮಾ, ಡಿಪ್ಲೊಮಾ ಹಾಗೂ ಆರು ತಿಂಗಳ ಅವಧಿಯ ಸರ್ಟಿಫಿಕೇಟ್‌ ಕೋರ್ಸ್‌ಗಳನ್ನು ಆರಂಭಿಸುತ್ತಿರುವುದಾಗಿ ವಿವಿ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ನಾತಕ ಪದವಿಗಳಾದ ಬಿ.ಎ, ಬಿಕಾಂ ಮತ್ತು ಬಿ.ಲಿಬ್‌ ಐಎಸ್ಸಿ. ಸ್ನಾತಕೋತ್ತರ ಪದವಿ ಕೋರ್ಸ್‌ಗಳಾದ ಎಂ.ಎ-ಕನ್ನಡ, ಇಂಗ್ಲಿಷ್‌, ಹಿಂದಿ, ಉರ್ದು, ಸಂಸ್ಕೃತ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಸಮಾಜಶಾಸ್ತ್ರ,

ಪ್ರಾಚೀನ ಇತಿಹಾಸ ಮತ್ತು ಪುರಾತತ್ವ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ. ಎಂಕಾಂ, ಎಂಬಿಎ, ಎಂಎಸ್ಸಿಯಲ್ಲಿ ಜೀವ ರಸಾಯನ ಶಾಸ್ತ್ರ, ಜೈವಿಕ ತಂತ್ರಜ್ಞಾನ, ರಸಾಯನ ಶಾಸ್ತ್ರ, ಕ್ಲಿನಿಕಲ್‌ ನ್ಯೂಟ್ರಿಷನ್‌ ಆ್ಯಂಡ್‌ ಡಯಟಿಟಿಕ್ಸ್‌, ಪರಿಸರ ವಿಜ್ಞಾನ, ಕಂಪ್ಯೂಟರ್‌ ವಿಜ್ಞಾನ, ಭೂಗೋಳ ಶಾಸ್ತ್ರ, ಮಾಹಿತಿ ವಿಜ್ಞಾನ, ಗಣಿತ ಶಾಸ್ತ್ರ, ಸೂಕ್ಷ್ಮಜೀವಶಾಸ್ತ್ರ, ಭೌತಶಾಸ್ತ್ರ, ಮನೋವಿಜ್ಞಾನ, ಎಂಲಿಬ್‌ ಐಎಸ್ಸಿ.

ಪಿ.ಜಿ. ಡಿಪ್ಲೊಮಾ ಕೋರ್ಸ್‌ಗಳು: ಇಂಗ್ಲಿಷ್‌, ಕಮ್ಯೂನಿಕೇಟಿವ್‌ ಇಂಗ್ಲಿಷ್‌, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಕುವೆಂಪು ಸಾಹಿತ್ಯ, ವ್ಯವಹಾರಿಕ ಕಾನೂನು, ಮಾನವ ಸಂಪನ್ಮೂಲ ನಿರ್ವಹಣೆ, ಫೈನಾನ್ಷಿಯಲ್‌ ಮ್ಯಾನೇಜ್‌ಮೆಂಟ್‌, ವ್ಯವಹಾರಿಕ ನಿರ್ವಹಣೆ, ಮಾರುಕಟ್ಟೆ ನಿರ್ವಹಣಾ ಶಾಸ್ತ್ರ, ಅಂಬೇಡ್ಕರ್‌ ಅಧ್ಯಯನ, ನ್ಯೂಟ್ರಿಷಿಯನ್‌ ಆ್ಯಂಡ್‌ ಡಯಬಿಟಿಕ್ಸ್‌, ಇನಾಮೇಷನ್‌ ಸೈನ್ಸ್‌, ಕಂಪ್ಯೂಟರ್‌ ಅಪ್ಲೀಕೇಷನ್‌.

ಡಿಪ್ಲೊಮಾ ಕೋರ್ಸ್‌ಗಳು: ಕನ್ನಡ, ಪತ್ರಿಕೋದ್ಯಮ, ನ್ಯೂಟ್ರಿಷನ್‌ ಆ್ಯಂಡ್‌ ಹೆಲ್ತ್‌ ಎಜುಕೇಷನ್‌,ಇನಾಮೇಷನ್‌ ಸೈನ್ಸ್‌, ಕಂಪ್ಯೂಟರ್‌ ಅಪ್ಲೀಕೇಷನ್‌.

ಸರ್ಟಿಫಿಕೇಟ್‌ ಕೋರ್ಸ್‌ಗಳು: ಕನ್ನಡ, ಪಂಚಾಯತ್‌ ರಾಜ್‌ ವ್ಯವಸ್ಥೆ, ಆಹಾರ ಮತ್ತು ಪೌಷ್ಠಿಕತೆ.

ಆನ್‌ಲೈನ್‌ ಅರ್ಜಿ: ಈ ವರ್ಷ ಎಲ್ಲಾ ಕೋರ್ಸ್‌ಗಳಿಗೆ ಆನ್‌ಲೈನ್‌ ಮೂಲಕ ಪ್ರವೇಶ ಕಲ್ಪಿಸಲಾಗಿದ್ದು, ಪ್ರವೇಶಾತಿ ಪಡೆಯಲು ಆಗಸ್ಟ್‌ 31 ಕೊನೆಯ ದಿನಾಂಕವಾಗಿದೆ. ವಿದ್ಯಾರ್ಥಿಗಳು ಪ್ರವೇಶಾತಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್‌ www.ksoumysore.karnatake.gov.in ನಿಂದ ಪಡೆಯಬಹುದಾಗಿದೆ. ಪ್ರೊಸೆಸಿಂಗ್‌ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಿಬೇಕು.

ಅರ್ಜಿಯನ್ನು ಆನ್‌ಲೈನ್‌ ಮೂಲಕ ಭರ್ತಿ ಮಾಡಿದ ನಂತರ ಅದರ ಒಂದು ಪ್ರತಿಯನ್ನು ಪ್ರಿಂಟ್‌ ಮಾಡಿಕೊಂಡು ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಯಾವುದಾದರೊಂದು ಪ್ರಾದೇಶಿಕ ಕೇಂದ್ರ ಅಥವಾ ಮುಕ್ತ ವಿವಿ ವಿಭಾಗಗಳ ಮುಖ್ಯಸ್ಥರಿಗೆ ಎರಡು ಸೆಟ್‌ ಪ್ರಿಂಟ್‌ ಅರ್ಜಿ ಜೊತೆಗೆ ಎರಡು ಸ್ಟಾಂಪ್‌ ಹಾಗೂ ಎರಡು ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರಗಳು,

ಮೂಲ ಅಂಕಪಟ್ಟಿಗಳು ಮತ್ತು ಅವುಗಳ ಎರಡು ಸೆಟ್‌ ಜೆರಾಕ್ಸ್‌ ಪ್ರತಿಗಳನ್ನು ಸಲ್ಲಿಸಿ, ಪರಿಶೀಲನೆಯ ನಂತರ ಪ್ರಾದೇಶಿಕ ಕೇಂದ್ರದ ಅಧಿಕಾರಿಗಳು ಸಂಬಂಧಪಟ್ಟ ವಿಭಾಗದ ಮುಖ್ಯಸ್ಥರು, ಮುಕ್ತ ವಿವಿ ಪ್ರವೇಶಾತಿ ವಿಭಾಗದ ನಿರ್ದೇಶಕರು ನೀಡುವ ಬ್ಯಾಂಕ್‌ ಚಲನ್‌ ಮೂಲಕ ಶುಲ್ಕವನ್ನು ಪಾವತಿಸಿ ಅದರ ಒಂದು ಪ್ರತಿಯನ್ನು ಅದೇ ಪ್ರಾದೇಶಿಕ ಕಚೇರಿಯಲ್ಲಿ ಅಥವಾ ಮುಕ್ತ ವಿವಿ ಪ್ರವೇಶಾತಿ ವಿಭಾಗದಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದು.

ವಿವಿ ಕುಲಸಚಿವ ಪ್ರೊ.ರಮೇಶ್‌, ಡೀನ್‌ ಪ್ರೊ.ಜಗದೀಶ್‌ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಪ್ರಾದೇಶಿಕ ಕಚೇರಿಯಲ್ಲೇ ಸಿದ್ಧಪಾಠ ಲಭ್ಯ: ಪ್ರವೇಶಾತಿ ಪಡೆದ ದಿನವೇ ಗುರುತಿನ ಪತ್ರ ಮತ್ತು ಸಿದ್ಧಪಾಠಗಳನ್ನು ಮುಕ್ತ ವಿವಿಯ ಸಿದ್ಧಪಾಠ ವಿಭಾಗದ ಅಧಿಕಾರಿಗಳು ಅಥವಾ ಪ್ರಾದೇಶಿಕ ಕಚೇರಿಯ ಅಧಿಕಾರಿಗಳಿಂದ ಪಡೆಯಬಹುದಾಗಿದ್ದು, ಪ್ರವೇಶಾತಿ ಪಡೆಯುವ ಸಲುವಾಗಿ ವಿದ್ಯಾರ್ಥಿಗಳು ಮೈಸೂರಿಗೆ ಬರುವ ಅಗತ್ಯವಿಲ್ಲ ಎಂದು ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ತಿಳಿಸಿದರು.

2014-15ನೇ ಸಾಲಿನಲ್ಲಿ ನಿಗದಿಪಡಿಸಿದ್ದ ಶುಲ್ಕವನ್ನೇ ಈಗಲೂ ಮುಂದುವರಿಸಿದ್ದು, ಎಸ್ಸಿ, ಎಸ್ಟಿ ಮತ್ತು ಬಡತನ ರೇಖೆಗಿಂತ ಕೆಳಗಿರುವ ಮಹಿಳಾ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುವುದು. ಮುಂಬರುವ ದಿನಗಳಲ್ಲಿ ಕೌಶಲ್ಯಾಭಿವೃದ್ಧಿ ಕುರಿತ ಡಿಪ್ಲೋಮ ಆರಂಭಿಸಲಾಗುವುದು. ಬಿಎಸ್‌ಡಬ್ಲೂ, ಎಂಎಸ್‌ಡಬ್ಲೂ, ಬಿಬಿಎ ಕೋರ್ಸ್‌ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮತಿ ಸಿಕ್ಕ ನಂತರ ಈ ಕೋರ್ಸ್‌ಗಳನ್ನು ಆರಂಭಿಸುವುದಾಗಿ ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.