ನಟ ಶಿವರಾಜ್‌ಕುಮಾರ್‌ ದಂಪತಿ ಮೃಗಾಲಯಕ್ಕೆ ಭೇಟಿ

ದತ್ತು ಪಡೆದ ಪಾರ್ವತಿ ಆನೆಗೆ ಆಹಾರ ತಿನ್ನಿಸಿಖುಷಿಪಟ್ಟ ನಟ

Team Udayavani, Oct 2, 2020, 1:11 PM IST

mysuru-tdy-2

ಮೈಸೂರು: ಚಿತ್ರನಟ ಶಿವರಾಜ್‌ ಕುಮಾರ್‌ಗುರುವಾರ ತಮ್ಮ ಕುಟುಂಬ ಸಮೇತ ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿ ಇಡೀ ದಿನ ಮೃಗಾಲಯದಲ್ಲಿ ಸಮಯ ಕಳೆದರು.

ತಮ್ಮ ಪತ್ನಿ, ಇಬ್ಬರು ಮಕ್ಕಳು ಹಾಗೂ ಅಳಿಯನ ಜತೆ ಮೃಗಾಲಯಕ್ಕೆ ಭೇಟಿ ನೀಡಿದ ಶಿವಣ್ಣ, ಇತ್ತೀಚೆಗೆ ತಾವು ದತ್ತು ಪಡೆದ ಪಾರ್ವತಿ ಆನೆಗೆ ಆಹಾರ ತಿನ್ನಿಸಿಖುಷಿ ಪಟ್ಟರು. ಬಳಿಕ ಮಾತನಾಡಿದ ಅವರು, ಮೃಗಾಲಯ ಎಂದರೆ ನನಗೆ ತುಂಬಾ ಇಷ್ಟ. ಈ ವಯಸ್ಸಲ್ಲಿ ಇವನಿಗೇನು ಶೋಕಿ ಎಂದರೂ ಪರವಾಗಿಲ್ಲ. ಪ್ರಾಣಿಗಳನ್ನು ನೋಡೋದು ತುಂಬಾ ಇಷ್ಟ. ನಾನು ತುಂಬಾ ವರ್ಷಗಳ ನಂತರ ಮೃಗಾಲಯಕ್ಕೆ ಭೇಟಿ ಕೊಟ್ಟಿದ್ದೇನೆ. ಒಳ ಆವರಣದಲ್ಲಿ ಪ್ರಾಣಿಗಳನ್ನು ನೋಡುತ್ತೇವೆ ಎಂದು ಭಾಸವಾಗುವುದು ಬಿಟ್ಟರೆ ಕಾಡಿಗೆ ಬಂದ ಹಾಗೇ ಅನ್ನಿಸುತ್ತದೆ ಎಂದರು.

ಸಿನಿಮಾ ಸಹ ಒಂದು ಉದ್ಯಮ. ಎಲ್ಲಾ ಉದ್ಯಮದಂತೆ ಇದು ಸಹ ನಿಧಾನವಾಗಿ ಮೇಲೇಳಬೇಕು. ಯಾವ ಸಿನಿಮಾ ಬರಬೇಕು ಅಂತಾನು ನಾನು ಹೇಳ್ಳೋಲ್ಲ. ಎಲ್ಲಾ ಸಿನಿಮಾಗಳು ಒಂದೇ.ಯಾವ ಸಿನಿಮಾ ಬೇಕಾದರೂ ಗೆಲ್ಲಬಹುದು.ಆದರೆಜನಸುರಕ್ಷತೆನೋಡಿಕೊಂಡು ಥಿಯೇಟರ್‌ಗೆ ಬರಲಿ. ಥಿಯೇಟರ್‌ನಲ್ಲಿ ಏನೇ ಸಮಸ್ಯೆ ಇದ್ದರೂ ನೇರವಾಗಿ ಹೇಳಲಿ. ಪ್ರೇಕ್ಷಕರ ಸುರಕ್ಷತೆ ನಮಗೆ ಬಹಳ ಮುಖ್ಯವೆಂದರು.

ಚಿತ್ರರಂಗಕ್ಕೆ ಸರ್ಕಾರ ನೆರವಾಗುವ ನಿರೀಕ್ಷೆ ಇದೆ: ಲಾಕ್‌ಡೌನ್‌ನಿಂದ ಚಿತ್ರರಂಗಕ್ಕೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆ ಸಿಎಂ ಬಿಎಸ್‌ವೈ ಚಿತ್ರರಂಗಕ್ಕೆ ನೆರವಾಗುವ ಭರವಸೆ ನೀಡಿದ್ದಾರೆ. ಅವರ ಭರವಸೆ ಈಡೇರಿಕೆ ನಿರೀಕ್ಷೆಯಲ್ಲೇ ಇದ್ದೇವೆ. ನಮಗೆ ಅವರಿಂದ ಉತ್ತಮ ಸ್ಪಂದನೆ ಸಿಗುವ ಸಾಧ್ಯತೆ ಇದೆ. ಸರ್ಕಾರಕ್ಕೆ ನಾವು ಒತ್ತಾಯ ಮಾಡುವುದಿಲ್ಲ. ಏಕೆಂದರೆ ಸರ್ಕಾರವೂ ಆರ್ಥಿಕ ಮುಗ್ಗಟ್ಟಿನ ಪರಿಸ್ಥಿತಿ ಎದುರಿಸುತ್ತಿದೆ. ಹೀಗಾಗಿ ಅವರಿಗೂ ಸಮಯ ಬೇಕಾಗುತ್ತೆ. ಸಿಎಂ ಮಾತಿನ ಮೇಲೆ ಭರವಸೆ ಇದೆ. ಚಿತ್ರರಂಗಕ್ಕೆ ಸರ್ಕಾರ ನೆರವಾಗುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರಮಂದಿರಗಳ ಪುನಾರಂಭ ಖುಷಿ ವಿಚಾರ : ಸಿನಿಮಾ ಮಂದಿರಗಳು ಪುನಾರಂಭವಾಗುತ್ತಿರುವುದು ಖುಷಿಯ ವಿಚಾರ. ಆದರೆ, ಎಷ್ಟು ಜನ ಬರಬೇಕು ಅಂತ ನಟನಾಗಿ ನಾನು ಏನು ಹೇಳಲಾಗುವುದಿಲ್ಲ. ನಟನಾಗಿ ನಾನು ಶೂಟಿಂಗ್‌ ಮಾಡಬಹುದು, ಆ್ಯಕ್ಟಿಂಗ್‌ ಮಾಡಬಹುದು. ಚಿತ್ರ ಪ್ರದರ್ಶನ ಹಾಗೂ ಬಿಡುಗಡೆ ಬಗ್ಗೆ ನಾನೇನು ಹೇಳುವುದಿಲ್ಲ. ಅದಕ್ಕೆ ಅಂತ ನಿರ್ಮಾಪಕರಿದ್ದಾರೆ, ಅವರೇ ತೀರ್ಮಾನ ಮಾಡಲಿದ್ದಾರೆ. ನಾನು ಪ್ರೇಕ್ಷಕರಿಗೆ ಸಿನಿಮಾ ನೋಡಲು ಬನ್ನಿ ಎಂದು ಹೇಳಬಹುದಷ್ಟೇ. ಆದರೆ ಸಿನಿಮಾ ಮಂದಿರಕ್ಕೆ ಬನ್ನಿ ಎಂದು ಒತ್ತಾಯ ಮಾಡುವುದಿಲ್ಲ ಎಂದು ನಟ ಶಿವರಾಜ್‌ಕುಮಾರ್‌ ಹೇಳಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.