ನಟಿ ರಾಖೀ ಸಾವಂತ್ ಪತಿ ಫೆ.27ರವರೆಗೆ ಪೊಲೀಸ್ ವಶಕ್ಕೆ
Team Udayavani, Feb 23, 2023, 6:45 AM IST
ಮೈಸೂರು: ಇರಾನ್ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದ ಪ್ರಕರಣ ಸಂಬಂಧ ನಟಿ ರಾಖೀ ಸಾವಂತ್ ಪತಿ ಆದಿಲ್ ಖಾನ್ ದುರಾನಿಯನ್ನು ಫೆ.27 ರವರೆಗೆ ಪೊಲೀಸ್ ವಶಕ್ಕೆ ನೀಡಿ ಮೈಸೂರು ನ್ಯಾಯಾಲಯ ಆದೇಶಿಸಿದೆ.
ಆರೋಪಿ ಆದಿಲ್ ಖಾನ್ ದುರಾನಿಯನ್ನು ಪೊಲೀಸರು ಬುಧವಾರ ಕೋರ್ಟ್ಗೆ ಹಾಜರುಪಡಿಸಿದ್ದರು. ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆಗಾಗಿ ಆದಿಲ್ ಖಾನ್ನನ್ನು ಕರೆದೊಯ್ದರು. ನಗರದ ಖಾಸಗಿ ಫಾರ್ಮಸಿ ಕಾಲೇಜಿಗೆ ವಿದ್ಯಾಭ್ಯಾಸಕ್ಕಾಗಿ ಇರಾನ್ನಿಂದ ಬಂದಿದ್ದ ಯುವತಿಯನ್ನು ಆದಿಲ್ ಖಾನ್ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ನಡೆಸಿ¨ªಾರೆಂದು ಸಂ ತ್ರ ಸ್ತೆ ದೂರು ನೀಡಿದ್ದಳು. ಈ ದೂರಿನ ಮೇರೆಗೆ ರಾಖೀ ಸಾವಂತ್ ಪತಿ ಆದಿಲ್ ಖಾನ್ ವಿರುದ್ಧ ವಿ.ವಿ.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನ್ಯಾಯಾಲಯಕ್ಕೆ ಬಂದ ರಾಖೀ ಸಾವಂತ್: ತನ್ನ ಪತಿಯ ಪ್ರಕರಣದ ವಿಚಾರಣೆ ವೇಳೆ ರಾಖೀ ಸಾವಂತ್ ಕೂಡ ನ್ಯಾಯಾಲಯ ಆವರಣದಲ್ಲಿ ಹಾಜರಾಗಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಆದಿಲ್ ಖಾನ್ ದುರಾನಿಯನ್ನು ನಾನು ಕಾನೂನು ಬದ್ಧವಾಗಿ ಮದುವೆಯಾಗಿದ್ದೇನೆ. ಅವನಿಗೋಸ್ಕರ ಮುಸ್ಲಿಂ ಧರ್ಮಕ್ಕೂ ಸೇರಿಕೊಂಡಿದ್ದೇನೆ. ನನ್ನಿಂದ ಸುಮಾರು 1.70 ಕೋಟಿ ರೂ. ಪಡೆದುಕೊಂಡಿ ರುವ ಆದಿಲ್ ವಾಪಸ್ ಕೊಡುತ್ತಿಲ್ಲ. ಅವರ ಮನೆಯವರು ಮನೆಗೂ ಸೇರಿಸುತ್ತಿಲ್ಲ. ನನಗೆ ನ್ಯಾಯ ಕೊಡಿಸಿ ಎಂದು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.