ಶಾಲಾ ಮಕ್ಕಳೊಂದಿಗೆ ಆಡಿ ನಲಿದ ನಟಿ ಶಾನ್ವಿ     

Team Udayavani, Nov 14, 2017, 12:58 PM IST

m5-shanvi.jpg

ಮೈಸೂರು: ಮನರಂಜನೆ ಮೂಲಕ ಮಕ್ಕಳಲ್ಲಿರುವ ಕಲೆ ಹಾಗೂ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ ಹೊರತರುವ ಉದ್ದೇಶದಿಂದ ನಗರದ ಕಲಿಸು ಫೌಂಡೇಷನ್‌ನಿಂದ ಆಯೋಜಿಸಿದ್ದ ಕಾಮನಬಿಲ್ಲು ಕಾರ್ಯಕ್ರಮ ಸರ್ಕಾರಿ ಶಾಲಾ ಮಕ್ಕಳನ್ನು ಆಕರ್ಷಿಸಿತು.

ಮಕ್ಕಳ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುವ ನಿಟ್ಟಿನಲ್ಲಿ ನಗರದ ಹೂಟಗಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಟಿ ಶಾನ್ವಿ ಶ್ರೀವಾತ್ಸವ್‌, ಕಲಾವಿದ ಬಾದಲ್‌ ನಂಜುಂಡಸ್ವಾಮಿ ಕಾರ್ಯಕ್ರಮಕ್ಕೆ ತಾರಾ ಮೆರುಗು ತಂದರು.

ಶಾಲಾ ಮಕ್ಕಳೊಂದಿಗೆ ಮಗುವಾಗಿ ಬೆರೆತ ನಟಿ ಶಾನ್ವಿ ಶ್ರೀವಾತ್ಸವ್‌, ಕಾಗದದ ಬಾತುಕೋಳಿ ಸೇರಿದಂತೆ ಇನ್ನಿತರ ಕಲಾಕೃತಿಗಳನ್ನು ಮಾಡಿದರೆ, ಕಲಾವಿದ ಬಾದಲ್‌ ನಂಜುಂಡಸ್ವಾಮಿ ಸಹ ಕಲೆ, ಕ್ರೀಡೆ ಮನರಂಜನೆ ಮೂಲಕ ದಿನವಿಡೀ ಚಿಣ್ಣರ ಸಂಭ್ರಮಕ್ಕೆ ಸಾಕ್ಷಿಯಾದರು.

ಇದಕ್ಕೂ ಮುನ್ನ ಸಸಿನೆಟ್ಟು ಬಣ್ಣದ ಬಲೂನ್‌ಗಳನ್ನು ಹಾರಿ ಬಿಡುವ ಮೂಲಕ ಕಾಮನಬಿಲ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮಕ್ಕಳೊಂದಿಗೆ ಸಂವಾದ ನಡೆಸಿದ ನಟಿ ಶಾನ್ವಿ, ಮಕ್ಕಳು ಹೆಚ್ಚಾಗಿ ಓದಿನಲ್ಲಿ ತೊಡಗಿಸಿಕೊಳ್ಳಬೇಕು. ಜೀವನದಲ್ಲಿ ಶಿಕ್ಷಣ ಅತ್ಯವಶ್ಯಕವಾಗಿದ್ದು, ಅಂತಹದೊಂದು ಅದ್ಭುತ ಕೆಲಸವನ್ನು ನಿರ್ವಹಿಸುವ ಶಿಕ್ಷಕರ ವೃತ್ತಿ ದೊಡ್ಡದು ಎಂದು ಶಿಕ್ಷಕರಿಗೆ ಅಭಿನಂದಿಸಿದರು.

ಕಲಿಸು ಫೌಂಡೇಷನ್‌ ಸಂಸ್ಥಾಪಕ ನಿಖೀಲೇಶ್‌, ಕಾಮನಬಿಲ್ಲು ಕಾರ್ಯಕ್ರಮದ ಮೂಲಕ ಮಕ್ಕಳಿಗೆ ಮನರಂಜನೆ ಕಲೆ ಹೊರತರಬೇಕಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ, ಮಕ್ಕಳನ್ನು ಆಕರ್ಷಿಸಲು ಇಂತಹ ಪಠ್ಯೇತರ ಚಟುವಟಿಕೆಗಳು ಅತ್ಯಂತ ಮುಖ್ಯವಾಗಲಿದೆ ಎಂದರು.

ಇದೇ ವೇಳೆ ಚಿತ್ರಕಲೆ, ಕರಕುಶಲ ಕಲೆ, ಕ್ರೀಡೆಯಲ್ಲಿ ಗೆದ್ದ ಮಕ್ಕಳಿಗೆ ಬಹುಮಾನವಾಗಿ ಸಸಿ ವಿತರಿಸಲಾಯಿತು. ಈ ಮುನ್ನ ನೆರೆದಿದ್ದ ಮಕ್ಕಳು ಹಾಗೂ ಶಿಕ್ಷಕರೊಂದಿಗೆ ಬೆರೆತ ಶಾನ್ವಿ ಶ್ರೀವಾತ್ಸವ್‌ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸಪಟ್ಟರು. ಚಿತ್ರ ನಿರ್ದೇಶಕ ಸುರಾಜ್‌ಕುಮಾರ್‌, ಗ್ರಾಮೀಣ ವಲಯ ಬಿಇಒ ವಿವೇಕಾನಂದ, ಶಾಲೆಯ ಮುಖ್ಯೋಪಾಧ್ಯಾಯ ಸತೀಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.