ಮಡಿವಾಳರನ್ನು ಪರಿಶಿಷ್ಟ ಜಾತಿಗೆ ಸೇರಿಸಿ
Team Udayavani, Nov 8, 2017, 12:16 PM IST
ಭೇರ್ಯ: ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಿ ನ್ಯಾಯಯುತವಾಗಿ ಸಿಗಬೇಕಾದ ಅಧಿಕಾರ, ಸ್ಥಾನಮಾನ ಮತ್ತು ಸವಲತ್ತುಗಳನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಮಿರ್ಲೆ ಕ್ಷೇತ್ರದ ಜಿಪಂ ಸದಸ್ಯ ಸಾ.ರಾ.ನಂದೀಶ್ ಹೇಳಿದರು.
ಸಮೀಪದ ಮಾಳನಾಯಕನಹಳ್ಳಿ ಗ್ರಾಮದಲ್ಲಿ ನಡೆದ ಶ್ರೀಮಡಿವಾಳ ಮಾಚಿ ದೇವರ ಸಂಘವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಹಿಂದುಳಿದಿರುವ ಸಮಾಜವನ್ನು ಮೇಲೆತ್ತಲು ಮೊದಲು ಸರ್ಕಾರ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂದು ಆಗ್ರಹಿಸಿದರು.
ಸ್ವಾತಂತ್ರ ಬಂದು 72 ವರ್ಷಗಳು ಕಳೆಯುತ್ತಿದ್ದರೂ ನಮಗೆ ಸಿಗಬೇಕಾದ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗದೆ ಹೋರಾಟ ನಡೆಸಬೇಕಾದ ಅನಿವಾರ್ಯತೆಯಿದೆ ಎಂದರು. ಜಿಪಂ ಸದಸ್ಯ ಸಾ.ರಾ.ನಂದೀಶ್, ತಾಪಂ ಸದಸ್ಯೆಯರಾದ ಶೋಭಾಕೋಟೆಗೌಡ, ಲಲಿತಾನವೀನ್ ಅವರನ್ನು ಅಭಿನಂದಿಸಲಾಯಿತು.
ಮಿರ್ಲೆ ಗ್ರಾಪಂ ಅಧ್ಯಕ್ಷ ಎಂ.ಆರ್.ಮಹದೇವ್, ಸದಸ್ಯರಾದ ರತ್ನಮ್ಮ, ಸರಸ್ವತಿ, ರಾಜೇಶ್, ತಾಲೂಕು ಮಡಿವಾಳ ಸಮಾಜದ ಅಧ್ಯಕ್ಷ ಧರ್ಮರಾಜು, ಖಜಾಂಚಿ ದೊಡ್ಡಕೊಪ್ಪಲು ಶಿವಣ್ಣ, ಸಂಘದ ಅಧ್ಯಕ್ಷ ಸಂದೀಪ್, ಗೌರವ ಅಧ್ಯಕ್ಷ ಮಹದೇವ್, ಬಾಲುಶೆಟ್ಟಿ, ಹರೀಶ್‌ಶೆಟ್ಟಿ, ಶೇಖರ್, ನಾಗೇಶ್, ದಿನೇಶ್, ಮಹೇಶ್, ಮಂಜುಶೆಟ್ಟಿ, ಪ್ರಕಾಶ್‌ಶೆಟ್ಟಿ, ಲೋಕೇಶ್‌ಶೆಟ್ಟಿ, ಟಿ.ಮಂಜುಶೆಟ್ಟಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.