ಮಡಿವಾಳರನ್ನು ಪರಿಶಿಷ್ಟ ಜಾತಿಗೆ ಸೇರಿಸಿ
Team Udayavani, Oct 31, 2017, 12:57 PM IST
ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಮಡಿವಾಳರ ಸಂಘ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ಪರಿಶಿಷ್ಟ ಜಾತಿಗೆ ಸೇರಿಸಿ: ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಮೈಸೂರು ಜಿಲ್ಲಾ ಮಡಿವಾಳರ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಮಡಿವಾಳ ಸಮುದಾಯದ ಅನುಕೂಲಕ್ಕಾಗಿ ಪೊ›.ಅನ್ನಪೂರ್ಣಮ್ಮ ವರದಿ ಆಧಾರದ ಮೇಲೆ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು, ಮಡಿವಾಳರ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ,
ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮಡಿವಾಳ ಸಮಾಜದವರಿಗೆ ಸಮುದಾಯ ಭವನ ಮತ್ತು ವಿದ್ಯಾರ್ಥಿನಿಲಯ ಸ್ಥಾಪಿಸಬೇಕು, ಮೈಸೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಕೇಂದ್ರಗಳು, ಗ್ರಾಮಗಳಲ್ಲಿರುವ ಮಡಿಕಟ್ಟೆ ಜಾಗಗಳನ್ನು ಮಡಿವಾಳರಿಗೆ ಮೀಸಲಿಡಬೇಕೆಂದು ಒತ್ತಾಯಿಸಿದರು.
ಇದಕ್ಕೂ ಮುನ್ನ ಪ್ರತಿಭಟನಾಕಾರರು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಬೈರಿ, ಎಂ.ರಾಜು, ಎಸ್.ಜೆ.ಪ್ರಶಾಂತ್, ಚನ್ನಕೇಶವ, ಬಿ.ರಮೇಶ್, ವರುಣ ಮಹದೇವ್, ರವಿನಂದನ್, ಪುರುಷೋತ್ತಮ, ರಾಮಸ್ವಾಮಿ, ಸಿದ್ದಪ್ಪಾಜಿ ಸೇರಿ ನೂರಾರು ಮಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!
MUST WATCH
ಹೊಸ ಸೇರ್ಪಡೆ
WPL Auction: ಎಲ್ಲಾ ಆರು ತಂಡಗಳು ಉಳಿಸಿಕೊಂಡ ಆಟಗಾರರ ಪಟ್ಟಿ ಇಲ್ಲಿದೆ
Udupi: ಮುನಿಯಾಲ್ ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ “ಎ’ ಗ್ರೇಡ್
ಜೀವನ ಪರ್ಯಂತ ವೀಲ್ ಚೇರ್‌ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ
WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
Madras: ಮರಿಕೋತಿಗೆ ಚಿಕಿತ್ಸೆ ನೀಡಿದ್ದ ಪಶುವೈದ್ಯರು ಮತ್ತೆ ಭೇಟಿ ಮಾಡಬಹುದು: ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.