ಆರಾಧ್ಯ ದೈವನನ್ನು ನಿಂದಿಸುತ್ತಾ ಭಿಕ್ಷೆ ಬೇಡುವ ಆದಿವಾಸಿಗಳು
Team Udayavani, May 31, 2017, 1:13 PM IST
ಹುಣಸೂರು; ನಾಗರಹೊಳೆ ರಾಷ್ಟ್ರೀಯ ಉದ್ಯಾನವನದೊಳಗಿನ ಆದಿವಾಸಿಗಳು ಮಳೆಗಾಲಕ್ಕೂ ಮುನ್ನ ತಮ್ಮ ಆರಾಧ್ಯ ದೇವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಭಿಕ್ಷೆ ಬೇಡುತ್ತಾ, ಬೇಡಿದ್ದನ್ನು ಕೊಡಗು ಜಿಲ್ಲೆಯ ತಿತಿಮತಿಗೆ ಸಮೀಪದ ಕಾಡಿನಲ್ಲಿರುವ ದೇವಸ್ಥಾನಕ್ಕೆ ಕೊಂಡೊಯ್ದು ಹಂಚಿ ತಿನ್ನುವ ವಿಶಿಷ್ಟವಾದ ಹಬ್ಬವನ್ನು (ಕುಂಡೆಹಬ್ಬ) ಹನಗೋಡು ಹಾಗೂ ಸುತ್ತ ಮುತ್ತಲ ಹಾಡಿಗಳಲ್ಲಿ ಸಂಭ್ರಮದಿಂದ ಆಚರಿಸಿದರು. ಹಳ್ಳಿ ಹಳ್ಳಿಗಳಲ್ಲಿ ಭಿಕ್ಷೆ ಬೇಡುತ್ತಾ ದೇವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಕುಣಿದು-ಕುಪ್ಪಳಿಸಿ ಸಂಭ್ರಮದಿಂದ ಆಚರಿಸಿದರು.
ಕಾಡಿನ ಸೊಪ್ಪು, ಗೋಣಿ ಚೀಲವೇ ಮೈ ಮೇಲಿನ ಆಭರಣ: ಗಿರಿಜನರು ತಮ್ಮ ಆರಾಧ್ಯದೈವ ಭದ್ರಕಾಳಿ, ಅಯ್ಯಪ್ಪ ದೇವರ ಹೆಸರಿನಲ್ಲಿ ನಡೆಯುವ ಈ ಹಬ್ಬಕ್ಕೆ ಹನಗೋಡು ಹೋಬಳಿ ವ್ಯಾಪ್ತಿಯಲ್ಲಿರುವ 35ಕ್ಕೂ ಹೆಚ್ಚು ಹಾಡಿಯ ಗಿರಿಜನರು ಕಾಡಿನಲ್ಲಿ ಸಿಗುವ ಸೊಪ್ಪು ಹಳೇ ಹರಿದ ಬಟ್ಟೆ ಹಾಗೂ ಗೋಣಿ ಚೀಲಗಳಿಂದ ವಿವಿಧ ವೇಷಗಳನ್ನು ತೊಟ್ಟು, ಒಣಗಿದ ಸೋರೆಕಾಯಿ ಬುರುಡೆ, ಪ್ಲಾಸ್ಟಿಕ್ ಡಬ್ಬಿ ಹಾಗೂ ಟಿನ್‌ಗಳನ್ನು ಡೋಲಿನ ರೀತಿಯಲ್ಲಿ ಬಡಿಯುತ್ತಾ ಆಕರ್ಷಕವಾಗಿ ಕುಣಿಯುತ್ತಾ, ಸಿಕ್ಕ ಸಿಕ್ಕವರನ್ನು ಕೆಟ್ಟ ಪದಗಳಿಂದ ನಿಂದಿಸುತ್ತಾ ಭಿûಾಟನೆ ಮಾಡುತ್ತಾ ಸಂಭ್ರಮಿಸಿದರು.
ಈ ಹಬ್ಬವನ್ನು ಮೂಲ ನಿವಾಸಿ ಗಿರಿಜನ ಜನಾಂಗಕ್ಕೆ ಸೇರಿದ ಜೇನುಕುರುಬ, ಬೆಟ್ಟಕುರುಬ, ಬುಡಕಟ್ಟು ಜನಾಂಗಕ್ಕೆ ಸೇರಿದವರು ಹೆಚ್ಚಾಗಿ ಆಚರಿಸುವ ಈ ಕುಂಡೆ ಹಬ್ಬದಲ್ಲಿ ಕೊಡಗಿನ ಕಾಡಂಚಿನ ಜನರು ಸೇರಿ ಆಚರಿಸುವರು. ಹಿಂದೆ ಕೊಡಗಿನ ಜಮೀನಾªರರು ಕೂಲಿಕಾರ್ಮಿಕರನ್ನು ವರ್ಷವಿಡಿ ಬೈಯ್ಯುತ್ತಿದ್ದರು, ಇದನ್ನು ಗಿರಿಜನರು ಆ ಜಮೀನಾªರರಿಗೆ ಒಂದು ದಿನ ಬೈದು ತಮ್ಮ ಆಕ್ರೋಶವನ್ನು ತೋಡಿಕೊಂಡು ದೇವರಲ್ಲಿ ಪೂಜೆಸಲ್ಲಿಸಿ ಕ್ಷಮೆ ಕೇಳಿ ಕೋಪ ತಣಿಸಿಕೊ ಳ್ಳುವುದೇ ಈ ಕುಂಡೆಹಬ್ಬದ ವಿಶೇಷವಾಗಿದೆ.
ಪ್ರತಿ ವರ್ಷದ ಮೇ ತಿಂಗಳ ಕೊನೆಯ ಕೊನೆವಾರದಲ್ಲಿ ಗಿರಿಜನರು ವಿವಿಧ ವೇಷ ಧರಿಸಿ ಆಚರಣೆ ಮಾಡುತ್ತಾರೆ. ದೇವರಲ್ಲಿ ಹೆಚ್ಚು ಭಯ, ಭಕ್ತಿ ಇರುವ ಈ ಜನಾಂಗ ಭಕ್ತಿಯಿಂದ ಪ್ರಾರ್ಥನೆ ಮಾಡಿ ವೇಷ ಹಾಕುತ್ತಾರೆ. ನಂತರ ಕಾಲುನಡಿಗೆಯಲ್ಲೇ ಸುತ್ತ-ಮುತ್ತಲ ಹಳ್ಳಿ ಸೇರಿದಂತೆ ನಗರಪ್ರದೇಶಗಳಲ್ಲಿ ಸುತ್ತಾಡಿ ಭಿಕ್ಷೆ ಬೇಡುತ್ತಾರೆ.
ವಿಶೇಷ ಪೂಜೆ: ಕಾಡಿನ ದಾರಿಯಲ್ಲೇ ನಡೆದು ತೆರಳಿ ಈ ರೀತಿ ವಸೂಲಿ ಮಾಡಿದ ಹಣ ಮತ್ತು ದವಸ-ಧಾನ್ಯಗಳನ್ನು ವಿರಾಜಪೇಟೆ ರಸ್ತೆಯಲ್ಲಿರುವ ತಿತಿಮತಿ ಪಕ್ಕದ ದೇವರಪುರದಲ್ಲಿರುವ ಅಯ್ಯಪ್ಪ ಹಾಗೂ ಭದ್ರಕಾಳಿ ದೇವಾಲಯಕ್ಕೆ ಅರ್ಪಿಸಿ ದೇವರ ಉತ್ಸವದಲ್ಲಿ ಪಾಲ್ಗೊಂಡು ತಾವು ಮಾಡಿದ ತಪ್ಪಿಗಾಗಿ ದೇವರಲ್ಲಿ ಕ್ಷಮೆಯಾಚಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ.
* ಸಂಪತ್‌ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.