ಯುವಪೀಳಿಗೆ ಗಾಂಧೀಜಿ ತತ್ವಾದರ್ಶ ಅಳವಡಿಸಿಕೊಳ್ಳಿ
Team Udayavani, Oct 3, 2018, 11:37 AM IST
ಮೈಸೂರು: ಇಂದಿನ ಯುವಪೀಳಿಗೆ ಮಹಾತ್ಮ ಗಾಂಧೀಜಿ ಅವರ ಜೀವನ, ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ನಗರದ ಪುರಭವನದಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮದಲ್ಲಿ ಸ್ವತ್ಛತಾ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
ಹೋರಾಟ ಅವಿಸ್ಮರಣೀಯ: ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಗಾಂಧೀಜಿ ಅವರು ನಡೆಸಿದ ಅಹಿಂಸಾತ್ಮಕ ಚಳವಳಿ, ಶಾಂತಿಯ ಹೋರಾಟ ಅವಿಸ್ಮರಣೀಯ. ಕೇವಲ ಗಾಂಧೀಜಿ ಅವರ ಹೋರಾಟವಷ್ಟೇ ಅಲ್ಲದೇ, ಅವರ ಜೀವನ ಎಲ್ಲರಿಗೂ ಮಾದರಿಯಾಗಿದೆ. ಜೀವನದಲ್ಲಿ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದ ಗಾಂಧೀಜಿ ಅವರ ಜೀವನ, ತತ್ವ, ಆದರ್ಶಗಳನ್ನು ಇಂದಿನ ಯುವ ಸಮುದಾಯ ಅಳವಡಿಸಿಕೊಳ್ಳಬೇಕಿದೆ ಎಂದರು.
ಸರ್ವಧರ್ಮ ಪ್ರಾರ್ಥನೆ: ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಹಿಂದೂ, ಮುಸ್ಲಿಂ, ಕ್ರೆ„ಸ್ತ, ಜೈನ, ಬೌದ್ಧ ಹಾಗೂ ಸಿಖ್ ಧರ್ಮಗುರುಗಳು ಒಟ್ಟಾಗಿ ಸರ್ವಧರ್ಮ ಪ್ರಾರ್ಥನೆ ಸಲ್ಲಿಸುವ ಮೂಲಕ ಏಕತೆ ಮೆರೆದರು. ಇದೇ ಸಂದರ್ಭದಲ್ಲಿ ಸ್ವತ್ಛ ಭಾರತ್ ಅಭಿಯಾನದಡಿ ಮೈಸೂರು ಮಹಾನಗರ ಪಾಲಿಕೆ ದೇಶದಲ್ಲೇ ಸ್ವತ್ಛ ನಗರ ಎಂಬ ಪ್ರಖ್ಯಾತಿಯನ್ನು ಪಡೆದಿರುವ ನೆನಪಿಗಾಗಿ ವಿಶೇಷ ಅಂಚೆ ಲಕೋಟೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅವರು ಪ್ರಕಟಿಸಿರುವ ವಿಶೇಷ ಸಂಚಿಕೆ ಮತ್ತು ಮಾರ್ಚ್ ಆಫ್ ಕರ್ನಾಟಕ ಆಂಗ್ಲ ಮಾಸಿಕ ಪತ್ರಿಕೆಗಳನ್ನು ಸಚಿವ ಜಿ.ಟಿ.ದೇವೇಗೌಡ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗಾಂಧೀಜಿ ಅವರ ಬಾಲ್ಯ, ಕುಟುಂಬ, ಶಿಕ್ಷಣ, ಧಾರ್ಮಿಕ, ಆಧ್ಯಾತ್ಮಿಕ ವಿಚಾರಧಾರೆಗಳು, ಹೋರಾಟಗಳ ಸೇರಿದಂತೆ ಗಾಂಧೀಜಿ ಅವರ ಬದುಕಿನ ಚಿತ್ರಣವನ್ನು ತಿಳಿಸುವ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಯಿತು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಚಿವ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಗಾಂಧಿಚೌಕದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಶಾಸಕ ತನ್ವೀರ್, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಪ್ರಾದೇಶಿಕ ಆಯುಕ್ತ ಕಪಿಲ್ ಮೋಹನ್, ಪಾಲಿಕೆ ಆಯುಕ್ತ ಕೆ.ಎಚ್.ಜಗದೀಶ್, ಜಿಪಂ ಅಧ್ಯಕ್ಷ ನಯೀಮಾ ಸುಲ್ತಾನ್, ಜಿಪಂ ಸಿಇಒ ಕೆ.ಜ್ಯೋತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ವಿನೋದಚಂದ್ರ, ಸಹಾಯಕ ನಿರ್ದೇಶಕ ರಾಜು ಇನ್ನಿತರರು ಹಾಜರಿದ್ದರು.
ಮನವಿ ಮಾಡಲಾಗಿದೆ: ದಸರಾ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆಗೆ ಶೀಘ್ರವೇ ಮೇಯರ್ ಆಯ್ಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಈ ಹಿಂದೆ 1995ರಲ್ಲಿ ಮೇಯರ್ ಇಲ್ಲದೇ ದಸರಾ ನಡೆದಿತ್ತು. ಆದರೆ ಈ ಬಾರಿ ಹಾಗೇ ಆಗುವುದಿಲ್ಲ. ದಸರಾ ವೇಳೆಗೆ ಮೇಯರ್ ಆಯ್ಕೆ ಮಾಡುವಂತೆ ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮೇಯರ್ ಆಯ್ಕೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.