17 ಲಕ್ಷ ಮಕ್ಕಳಿಗೆ ಅಕ್ಷಯಪಾತ್ರೆ ಬಿಸಿಯೂಟ


Team Udayavani, Feb 12, 2019, 7:26 AM IST

m5-17laksha.jpg

ಮೈಸೂರು: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ಮಧ್ಯಾಹ್ನದ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಅಕ್ಷಯಪಾತ್ರೆಯ ಕೊಡುಗೆ ಮಹತ್ವವಾದದ್ದು ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಹೇಳಿದರು.

ದಿ ಅಕ್ಷಯಪಾತ್ರ ಪ್ರತಿಷ್ಠಾನದ 300 ಕೋಟಿ ಊಟವನ್ನು ಮಥುರಾದ ವೃಂದಾವನದಲ್ಲಿ ಸೋಮವಾರ, ಮಕ್ಕಳಿಗೆ ಊಟ ಬಡಿಸುವ ಮೂಲಕ ಪ್ರಧಾನಿ ನರೇಂದ್ರಮೋದಿ ಅವರು ಉದ್ಘಾಟಿಸಿರುವ ಹಿನ್ನೆಲೆಯಲ್ಲಿ ಮೈಸೂರಿನ ಶಾರದಾವಿಲಾಸ ಶತಮಾನೋತ್ಸವ ಭವನದಲ್ಲಿ ಅಕ್ಷಯ ಪಾತ್ರ ಪ್ರತಿಷ್ಠಾನದ ಮೈಸೂರು ಶಾಖೆ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಮಕ್ಕಳಿಗೆ ಊಟ ಬಡಿಸುವ ಮೂಲಕ ಅವರು ಉದ್ಘಾಟಿಸಿ ಮಾತನಾಡಿದರು.

ಅಸಮಾನತೆ ವಿಮುಖ: ದೇಶದ 12 ರಾಜ್ಯಗಳಲ್ಲಿ ಅಕ್ಷಯ ಪಾತ್ರೆಯು ಕಾರ್ಯ ನಿರ್ವಹಿಸುತ್ತಿದ್ದು, ಸುಮಾರು 17 ಲಕ್ಷ ಮಕ್ಕಳಿಗೆ ಪೌಷ್ಟಿಕಯುಕ್ತ ಮಧ್ಯಾಹ್ನದ ಬಿಸಿಯೂಟವನ್ನು ವಿತರಿಸುತ್ತಿದೆ. ಎಲ್ಲಾ ಮಕ್ಕಳು ಆರ್ಥಿಕ ಹಾಗೂ ಜಾತಿಯ ಅಸಮಾನತೆಯಿಂದ ವಿಮುಖರಾಗಿ ಒಂದೇ ರೀತಿಯ ಊಟ ಮಾಡುತ್ತಿದ್ದಾರೆ. ಅಕ್ಷಯ ಪಾತ್ರೆಯ ಹಲವಾರು ಅಡುಗೆ ಮನೆಗಳು ಐಎಸ್‌ಒ ಪ್ರಮಾಣಪತ್ರ ಹೊಂದಿದ್ದು, ಒಂದು ಸಣ್ಣ ಕಪ್ಪು ಚುಕ್ಕೆಯೂ ಇಲ್ಲದೆ, ಸ್ವಚ್ಛತೆಯನ್ನು ಕಾಪಾಡುತ್ತಿರುವ ಅಕ್ಷಯ ಪಾತ್ರೆಗೆ ಯಶಸ್ಸು ಹಾಗೂ ಮಕ್ಕಳಿಗೆ ಉತ್ತಮ ಜೀವನ ಸಿಗಲಿ ಎಂದು ಹಾರೈಸಿದರು.

ಹಾಜರಾತಿ ವೃದ್ಧಿ: ಶಾರದಾವಿಲಾಸ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಎಸ್‌.ಪಾರ್ಥಸಾರಥಿ ಮಾತನಾಡಿ, ನಮ್ಮ ಶಾಲೆಯಲ್ಲಿ ಹಿಂದುಳಿದ ಬಡವರ್ಗದ ಮಕ್ಕಳು ಹೊಟ್ಟೆಗಿಲ್ಲದೆ ಸೊರಗಿದ್ದರು. 2013ನೇ ಸಾಲಿನಲ್ಲಿ ತಮ್ಮ ಶಾಲೆಗೆ ಅಕ್ಷಯ ಪಾತ್ರೆ ಕಾಲಿಟ್ಟ ನಂತರ ಆ ಮಕ್ಕಳು ಆರು ತಿಂಗಳಲ್ಲಿ ದಷ್ಟ-ಪುಷ್ಟರಾದರು. ಶಾಲೆಯ ಹಾಜರಾತಿಯಲ್ಲಿ ಪ್ರಗತಿ ಕಂಡಿತು ಎಂದು ಅಕ್ಷಯ ಪಾತ್ರೆಯ ಕಾರ್ಯವನ್ನು ಶ್ಲಾಘಿಸಿದರು.

ಡ್ರೀಮ್‌ ಪ್ರಾಜೆಕ್ಟ್: ಇಸ್ಕಾನ್‌ ಮೈಸೂರಿನ ಉಪಾಧ್ಯಕ್ಷರಾದ ರಸಿಕ ಶೇಖರ ದಾಸ ಮಾತನಾಡಿ, ಅಕ್ಷಯಪಾತ್ರೆಯಲ್ಲಿ ಪ್ರತಿದಿನ ಲಕ್ಷಾಂತರ ಮಕ್ಕಳಿಗೆ ಉಣಬಡಿಸುವ ಬಿಸಿಯೂಟ ತಯಾರಿಕೆ ಹಾಗೂ ವಿತರಿಸುವ ರೀತಿಯನ್ನು ವಿಡಿಯೋ ಮೂಲಕ ಪ್ರಸ್ತುತಪಡಿಸಿದರು. ಅಕ್ಷಯಪಾತ್ರೆಯು ಮಧ್ಯಾಹ್ನದ ಬಿಸಿಯೂಟಕ್ಕಷ್ಟೇ ಸೀಮಿತವಾಗದೆ ಶಾಲಾ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಒದಗಿಸಿ ಎಷ್ಟೋ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಡ್ರೀಮ್‌ ಪ್ರಾಜೆಕ್ಟ್ ಮೂಲಕ ಹೊರತೆಗೆದು ಅವರ ಕನಸನ್ನು ನನಸು ಮಾಡುವ ಉದ್ದೇಶ ಹೊಂದಿದೆ ಎಂದು ಹೇಳಿದರು.

ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆ ಹಾಗೂ ಹಾಜರಾತಿಯಲ್ಲಿ ಮುಂಚೂಣಿಯಲ್ಲಿರುವ ವಿದ್ಯಾರ್ಥಿಗಳಿಗೆ ದಿ ಅಕ್ಷಯ ಪ್ರಾತ್ರ ಪ್ರತಿಷ್ಠಾನದವತಿಯಿಂದ ನೆನಪಿನ ಕಾಣಿಕೆ ನೀಡಲಾಯಿತು. ಬಳಿಕ ಮಥುರೆಯ ವೃಂದಾವನದಲ್ಲಿ ನಡೆದ ಕಾರ್ಯಕ್ರಮವನ್ನು ಎಲ್‌ಇಡಿ ಪರದೆಯ ಮೇಲೆ ಅಂತರ್ಜಾಲದಿಂದ ನೇರಪ್ರಸಾರ ಮಾಡಲಾಯಿತು.

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.