ಬಿಜೆಪಿಗೆ ಮೈತ್ರಿ ಪಕ್ಷಗಳ ಕಾರ್ಯಕರ್ತರ ಬೆಂಬಲ
Team Udayavani, Mar 12, 2019, 7:44 AM IST
ತಿ. ನರಸೀಪುರ: ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ನಲ್ಲಿ ಹೊಂದಾಣಿಕೆಯಿಲ್ಲ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ಪೈಕಿ ಒಂದು ಪಕ್ಷದ ಕಾರ್ಯಕರ್ತರು ಬಿಜೆಪಿ ಪರವಾಗಿ ನಿಲ್ಲುವ ವಿಶ್ವಾಸದೆ ಎಂದು ಹಿರಿಯ ಮುಖಂಡ, ಮಾಜಿ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಪಟ್ಟಣದ ವೀರಶೈವ ವಿದ್ಯಾರ್ಥಿ ನಿಲಯದಲ್ಲಿ ನಡೆದ ಪ್ರಬುದ್ಧರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರದ ಮುಖಂಡರು ನಡೆದುಕೊಳ್ಳುತ್ತಿರುವ ರೀತಿಯನ್ನು ಗಮನಿಸುತ್ತಿದ್ದಾರೆ. ಸಚಿವರೇ ಹೆಣ್ಣು ಮಗಳ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡುತ್ತಿದ್ದಾರೆ.
ಅವರ ಇಂತಹ ಅಸಂಬದ್ಧ ರಾಜಕೀಯ ನಡವಳಿಕೆಯ ಜನರು ಬೇಸತ್ತಿದ್ದು, ಅದನ್ನು ಸೂಕ್ಷ್ಮವಾಗಿ ಬಳಸಿಕೊಂಡು ಕೇಂದ್ರ ಸರ್ಕಾರದ ಜನಪರ ಆಡಳಿತವನ್ನು ಮುಂದಿಟ್ಟು ಜನರ ಮುಂದೆ ಹೋಗುವಂತೆ ಕಾರ್ಯಕರ್ತರಿಗೆ ತಿಳಿಸಿದ್ದೇವೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ದೋಷಾರೋಪ ಮಾಡದೇ ಸಕಾರತ್ಮಕ ಪ್ರಚಾರದ ಮೂಲಕ ಹೆಚ್ಚು ಸ್ಥಾನ ಪಡೆಯುತ್ತದೆ. ರಾಜ್ಯದಲ್ಲಿ ಯಾರ ಜತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಮೈತ್ರಿ ಸರ್ಕಾರದಲ್ಲಿ ಹೊಂದಾಣಿಕೆ ಗೊಂದಲವಿದೆ. ಮಹಾಘಟ ಬಂಧನ್ ಹೊಂದಾಣಿಕೆ ಯಾವುದೂ ಇಲ್ಲಿ ನಡೆಯುವುದಿಲ್ಲ.
ನಾವು ಬೂತ್ ಹಂತದಿಂದಲೇ ಪಕ್ಷ ಸಂಘಟಿಸಿದ್ದೇವೆ. ದೇಶವನ್ನು ಅಭಿವೃದ್ಧಿ ಹಾಗೂ ರಕ್ಷಣೆಯ ದೃಷ್ಟಿಯಿಂದ ಈ ಚುನಾವಣೆ ನಮಗೆ ಮಹತ್ವವಾಗಿದೆ ಎಂದರು. ಕೇಂದ್ರದಲ್ಲಿ ನರೇಂದ್ರ ಮೋದಿ ನಾಯಕತ್ವ ಹಾಗೂ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನಾಯಕತ್ವದಲ್ಲಿ ಈ ಚುನಾವಣೆ ಎದುರಿಸಲಿದ್ದೇವೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುವ ಸೂಕ್ತ ಹಾಗೂ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ. ಇವರನ್ನು ಆಯ್ಕೆ ಮಾಡಿದರೆ ನಾವು ಕೆಲಸ ಮಾಡುತ್ತೇವೆ ಎನ್ನುವ ಅಭಿಪ್ರಾಯ ಪಡೆದು ಅಭ್ಯರ್ಥಿ ಘೋಷಣೆಯಾಗಲಿದೆ ಎಂದರು.
ಸಭೆಯಲ್ಲಿ ಮಾಜಿ ಶಾಸಕ ಡಾ. ಎನ್. ಎಲ್ ಭಾರತೀಶಂಕರ್, ಕ್ಷೇತ್ರಾಧ್ಯಕ್ಷ ಹಿರಿಯೂರು ಪರಶಿವಮೂರ್ತಿ, ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ, ಜಿಪಂ ಮಾಜಿ ಸದಸ್ಯ ಕೆ.ಸಿ. ಲೋಕೇಶ್, ರಾಜ್ಯ ಸಮಿತಿ ಸದಸ್ಯ ಕರುಹಟ್ಟಿ ಮಹದೇವಯ್ಯ, ಪುರಸಭಾ ಸದಸ್ಯ ಕಿರಣ್, ಎಂ.ದಾಸಯ್ಯ, ಕೆಬ್ಬೆಹುಂಡಿ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.