ಎಲ್ಲರೂ ಒಗ್ಗೂಡಿ ಸಹ ಪಂಕ್ತಿ ಭೋಜನ ನಡೆಸಿ
Team Udayavani, Feb 23, 2019, 7:29 AM IST
ಮೈಸೂರು: ರಾಜ ಮಹಾರಾಜರುಗಳು ಶೂದ್ರರನ್ನು ಜೀತಕ್ಕೆ ಬಳಸಿಕೊಳ್ಳುತ್ತಿದ್ದರು. ಕರ್ನಾಟಕದಲ್ಲಿ ಬಸವಣ್ಣ ಹುಟ್ಟದಿದ್ದರೆ ಜಾತಿ ಮತ್ತು ಜೀತಪದ್ಧತಿ ಇನ್ನೂ ಜೀವಂತವಾಗಿರುತ್ತಿತ್ತು ಎಂದು ರಮ್ಮನಹಳ್ಳಿ ಮಠದ ಬಸವಲಿಂಗಮೂರ್ತಿ ಸ್ವಾಮೀಜಿ ಹೇಳಿದರು.
ಮೈಸೂರು ತಾಲೂಕು ವರುಣ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲ್ಲೂಕು ಆಡಳಿತ, ತಾಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಅಸ್ಪೃಶ್ಯತಾ ನಿರ್ಮೂಲನಾ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಗತ್ತಿನಲ್ಲಿ ಸೂರ್ಯ ಮತ್ತು ಬೆಂಕಿ ಎರಡೇ ಅಸ್ಪೃಶ್ಯ, ಉಳಿದಿದ್ದೆಲ್ಲಾ ಸ್ಪೃಶ್ಯ. ಭಾರತದಲ್ಲಿ ಅಶೋಕ ಚಕ್ರವರ್ತಿಯನ್ನು ಹೊರತುಪಡಿಸಿ ಉಳಿದ ರಾಜರೆಲ್ಲರೂ ಅಸ್ಪೃಶ್ಯತೆ ವಿಚಾರದಲ್ಲಿ ತಟಸ್ಥರಾಗಿದ್ದರು. ಬುದ್ಧ, ಬಸವಣ್ಣ, ಯೇಸು, ಪೈಗಂಬರ್, ನಾರಾಯಣಗುರು, ಕಬೀರ್‌ದಾಸ, ಮೀರಾಬಾಯಿಯಂತಹ ಮಹನೀಯರು ಅಸ್ಪೃಶ್ಯತೆ ಹೋಗಲಾಡಿಸಲು ಶ್ರಮಿಸಿದರು ಎಂದರು.
ಸಮಾಜದಲ್ಲಿ ಜಾತಿಕಲಹ ಮಾಡುವವರು ಅಜ್ಞಾನಿಗಳು, ಮೂಢರು, ಅಹಂಕಾರಿಗಳಾಗಿದ್ದಾರೆ. ದೇವರ ದೃಷ್ಟಿಯಲ್ಲಿ ಯಾರೂ ಕೀಳಲ್ಲ, ಮೇಲಲ್ಲ. ಅಸ್ಪೃಶ್ಯತೆಯನ್ನು ಬೇರು ಸಹಿತ ಕಿತ್ತು ಹಾಕಬೇಕಾದರೆ ಎಲ್ಲರೂ ವಿದ್ಯಾವಂತರಾಗಬೇಕು. ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು.
ಡಾ.ಬಿ.ಆರ್.ಅಂಬೇಡ್ಕರ್‌ರವರು ಸಂವಿಧಾನದಲ್ಲಿ ಎಲ್ಲಾ ಜಾತಿಯ ಬಡವರಿಗೂ, ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದ್ದಾರೆ. ಎಲ್ಲರೂ ಪ್ರೀತಿಯಿಂದ ಬದುಕಬೇಕು. ಮೇಲ್ವರ್ಗದವರು ಮನಸ್ಸು ಮಾಡಿ ಎಲ್ಲಾ ವರ್ಗದವರನ್ನು ಸೇರಿಸಿಕೊಂಡು ಹಬ್ಬ ಹರಿದಿನಗಳಲ್ಲಿ ಸಹ ಪಂಕ್ತಿ ಭೋಜನ ಮಾಡಿ ಒಟ್ಟಾಗಿ ಬದುಕಬೇಕು ಎಂದರು.
ಸಮಾರಂಭದಲ್ಲಿ ಮಾಜಿ ಮೇಯರ್ ಪುರುಷೋತ್ತಮ್, ತಹಶೀಲ್ದಾರ್ ರಮೇಶ್‌ಬಾಬು, ಇಒ ಲಿಂಗರಾಜಯ್ಯ, ಎಪಿಎಂಸಿ ಉಪಾಧ್ಯಕ್ಷ ಜವರಪ್ಪ, ಚೋರನಹಳ್ಳಿ ಶಿವಣ್ಣ, ಚೌಹಳ್ಳಿ ನಿಂಗರಾಜು, ಭುಗತಗಳ್ಳಿ ಮಣಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಗುರುಶಾಂತಪ್ಪ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.