ಸೋರುತಿಹುದು ಅರಮನೆ ಮಾಳಿಗೆ!
ಸರಕಾರದ ನಿರ್ಲಕ್ಷ್ಯ ಕುರಿತು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅಸಮಾಧಾನ
Team Udayavani, Nov 24, 2021, 6:40 AM IST
ಮೈಸೂರು: ಕೆಲವು ದಿನಗಳಿಂದ ಸತತವಾಗಿ ಸುರಿದ ಮಳೆಯಿಂದಾಗಿ ವಿಶ್ವವಿಖ್ಯಾತ ಮೈಸೂರಿನ ಅಂಬಾವಿಲಾಸ ಅರಮನೆ ಮೇಲ್ಛಾವಣಿ ಸೋರುತ್ತಿದ್ದು, ಗೋಡೆಗಳು ತೇವಗೊಂಡಿವೆ.
ರಾಜವಂಶಸ್ಥರು ವಾಸಿಸುತ್ತಿರುವ ಅರಮನೆಯ ಭಾಗದ ಮೇಲ್ಛಾವಣಿ ಯಿಂದ ನೀರು ಹೆಚ್ಚಿನ ಪ್ರಮಾಣದಲ್ಲಿ ಸೋರುತ್ತಿದ್ದು, ಛಾವಣಿಯ ಪ್ಲಾಸ್ಟರಿಂಗ್ ಉದುರಿ ಬಿದ್ದಿದೆ. ಆಗ ಯಾರೂ ಇಲ್ಲದಿದ್ದ ಕಾರಣ ಅಪಾಯ ಸಂಭವಿಸಿಲ್ಲ. ನೆಲಕ್ಕೆ ಹಾಸಲಾಗಿರುವ ಟೈಲ್ಸ್‌ಗಳೂ ಕಿತ್ತು ಬಂದಿವೆ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಹೇಳಿದ್ದಾರೆ.
ಅರಮನೆಯ ಕೆಲವು ಭಾಗಗಳು ಈ ಹಿಂದೆಯೇ ದುರಸ್ತಿಯಾಗಿವೆ. ಆದರೆ, ಈ ಬಾರಿ ಸತತ ಮಳೆಯಿಂದಾಗಿ ಹೆಚ್ಚಿನ ಹಾನಿಗೊಳಗಾಗಿದೆ. ಪ್ರಮೋದಾ ದೇವಿ ಅವರು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಪ್ರತಿಷ್ಠಾನದಿಂದ ಅರಮನೆಯಲ್ಲಿ ಹಾನಿಗೀಡಾದ ಕರಿಕಲ್ಲುತೊಟ್ಟಿ ಭಾಗದ ಚಂದ್ರಕಲಾ ತೊಟ್ಟಿ ಮತ್ತಿತರ ಕಡೆಗಳಲ್ಲಿ ತಜ್ಞರ ಮಾರ್ಗದರ್ಶನದಲ್ಲಿ ಕೈಗೊಂಡಿರುವ ದುರಸ್ತಿ ಕಾರ್ಯ ನಡೆಯುತ್ತಿರುವಾಗಲೇ ಇತರ ಕೆಲವು ಭಾಗಗಳಲ್ಲಿ ಹಾನಿಯ ಪ್ರಮಾಣ ಹೆಚ್ಚಾಗುತ್ತಿದೆ. ಆದರೆ, ಕಟ್ಟಡದ ದುರಸ್ತಿ ಕೈಗೊಳ್ಳಲು ರಾಜ್ಯ ಸರಕಾರ ಮುಂದಾಗಿಲ್ಲ. ಹೀಗಾಗಿ, ಅಂಬಾವಿಲಾಸ ಅರಮನೆಯಲ್ಲಿ ಹಾನಿಯ ಪ್ರಮಾಣ ಹೆಚ್ಚಾಗುತ್ತಿದೆ.
ಇದನ್ನೂ ಓದಿ:ಕಾಂಪ್ಲೆಕ್ಸ್ ಗೊಬ್ಬರ ಬಳಕೆಗೆ ಹೆಚ್ಚಿನ ಗಮನ ನೀಡಲು ಕ್ರಮ: ಬಿ.ಸಿ.ಪಾಟೀಲ್
ನಮ್ಮಷ್ಟು ಕಷ್ಟ ಯಾರಿಗೂ ಆಗಿಲ್ಲ
ಇಡೀ ದೇಶದಲ್ಲಿ ಸ್ವಾತಂತ್ರ್ಯದ ಬಳಿಕ ಸರಕಾರದಿಂದ ನಾವು ಪಟ್ಟಷ್ಟು ತೊಂದರೆಯನ್ನು ಬೇರೆ ಯಾವ ರಾಜಮನೆತನವೂ ಅನುಭವಿಸಿಲ್ಲ. ನಮ್ಮ ತಪ್ಪಿಲ್ಲದಿದ್ದರೂ ನಾವು ನೋವು ಅನುಭವಿಸಬೇಕಿದೆ. ನ್ಯಾಯಾಲಯಗಳು ನಮ್ಮ ಪರ ತೀರ್ಪು ನೀಡಿದರೂ ಸರಕಾರ ಜಾರಿಗೆ ತರುತ್ತಿಲ್ಲ ಎಂದು ಪ್ರಮೋದಾದೇವಿ ಒಡೆಯರ್ ಅವರು ಮಂಗಳವಾರ “ಉದಯವಾಣಿ’ಯೊಂದಿಗೆ ತಮ್ಮ ನೋವನ್ನು ತೋಡಿಕೊಂಡರು. ನಾನು ರಾಜ್ಯ ಸರಕಾರದ ಅನುಮತಿ ಪಡೆದು ಅರಮನೆಯ ಕೆಲವು ಭಾಗಗಳಲ್ಲಿ ಪಾರಂಪರಿಕ ಕಟ್ಟಡದ ಸಂರಕ್ಷಣೆಗಾಗಿ ಸ್ವಂತ ಹಣದಿಂದ ದುರಸ್ತಿ ಕಾರ್ಯ ಮಾಡುತ್ತಿದ್ದೇನೆ. ಆದರೆ, ಸರಕಾರದಿಂದ ಈ ಹಣ ನಮಗೆ ಮರು ಪಾವತಿಯಾಗಿಲ್ಲ. ಸರಕಾರಕ್ಕೆ ಪತ್ರ ಬರೆದರೂ ಪ್ರತಿಕ್ರಿಯೆ ಬರುತ್ತಿಲ್ಲ. ಇದರಿಂದ ಮನಸ್ಸಿಗೆ ತುಂಬಾ ನೋವಾಗುತ್ತದೆ ಎಂದು ಅವರು ಹೇಳಿದರು. ಅರಮನೆ ಸ್ವಾಧೀನಪಡಿಸಿಕೊಳ್ಳುವ ಸರಕಾರದ ಕಾಯ್ದೆ ವಿರುದ್ಧ ಕೋರ್ಟಿ ನಲ್ಲಿ ದಾವೆ ಹೂಡಿದ್ದೇವೆ. ಇದು ಇತ್ಯರ್ಥವಾಗುವವರೆಗೂ ಮೈಸೂರು ಅರಮನೆ ನಿರ್ವಹಣೆಯನ್ನು ಸರಕಾರ ಮಾಡಬೇಕು. ಅರಮನೆ ವೀಕ್ಷಿಸಲು ಬರುವವರಿಂದ ಪ್ರವೇಶ ದರ ಪಡೆಯಲಾಗುತ್ತದೆ. ಈ ಹಣದಿಂದಲೇ ಅರಮನೆ ಕಟ್ಟಡದ ನಿರ್ವಹಣೆ ಮಾಡಬಹುದು ಎಂದರು.
-ಕೂಡ್ಲಿ ಗುರುರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.