ಬಾರ್‌ ತೆರೆದರೆ ಅನಿರ್ದಿಷ್ಟಾವಧಿ ಮುಷ್ಕರ


Team Udayavani, Feb 27, 2019, 6:56 AM IST

m3-bar.jpg

ಎಚ್‌.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್‌ನ ಆರ್‌.ಪಿ.ಸರ್ಕಲ್‌ ಬಳಿ ಜನನಿಬಿಡ ಸ್ಥಳದಲ್ಲಿ ಸಿಲ್‌-7 ಮದ್ಯದಂಗಡಿ ತೆರೆಯಲು ತೆರೆಮರೆಯಲ್ಲಿ ಮುಂದಾಗಿರುವುದಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಹ್ಯಾಂಡ್‌ಪೋಸ್ಟ್‌ ಸುತ್ತಮುತ್ತಲ ಗ್ರಾಮಸ್ಥರು ಬಾರ್‌ ತೆರೆಯಲು ಪರವಾನಗಿ ನೀಡದಂತೆ ಪಟ್ಟು ಹಿಡಿದಿದ್ದು, ಒಂದು ವೇಳೆ ಪರವಾನಗಿ ನೀಡಿದರೆ ಅನಿರ್ದಿಷ್ಟಾವಾಧಿ ಮುಷ್ಕರ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಮದ್ಯ ಮಾರಾಟಗಾರ ಈಗಾಗಲೇ ಬಾರ್‌ ತೆರೆಯುವ ಸಂಬಂಧ ಪರವಾನಗಿಗೆ ಅರ್ಜಿ ಸಲ್ಲಿಸಿದ್ದು, ಅಬಕಾರಿ ಇಲಾಖೆಯ ಉಪ ಆಯುಕ್ತರು ಸ್ಥಳ ಪರಿಶೀಲಿಸಿದ್ದಾರೆ. ಬಾರ್‌ ತೆರೆಯಲು ಬೇಕಾದ ಎಲ್ಲಾ ಸಿದ್ಧತೆ ನಡೆಸಲಾಗುತ್ತಿದೆ. ಇದಕ್ಕಾಗಿ ತಾತ್ಕಾಲಿಕ ಮಳಿಗೆಯನ್ನೂ ನಿರ್ಮಿಸಲಾಗಿದೆ.

ಬಾರ್‌ ತೆರಯಲು ಉದ್ದೇಶಿಸಿರುವ ಸ್ಥಳವು ಕೆಲವೇ ಮೀಟರ್‌ಗಳ ಅಂತರದಲ್ಲಿ ಮಾಜಿ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್‌ ವೃತ್ತವಿದ್ದು, ಈ ಪ್ರದೇಶ ಯಾವಾಗಲೂ ಜನದಟ್ಟಣೆಯಿಂದ ಕೂಡಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಮಹಿಳೆಯರು, ವ್ಯಾಪಾರಸ್ಥರು, ತಾಲೂಕಿನ ವಿವಿಧ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಈ ಪ್ರದೇಶದಲ್ಲೇ ಬಸ್‌ಗಾಗಿ ಕಾಯುತ್ತಾರೆ.

ಇಂತಹ ಜನನಿಬಿಡ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಬಾರ್‌ ಆರಂಭಿಸಲು ಅವಕಾಶ ನೀಡಬಾರದು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಹ್ಯಾಂಡ್‌ಪೋಸ್ಟ್‌ ಮಧ್ಯೆಯೇ ಮೈಸೂರು ಮಾನಂದವಾಡಿ ರಾಷ್ಟ್ರೀಯ ಹೆದ್ದಾರಿ ಹಾದಿ ಹೋಗಿದೆ.

ಪ್ರಮುಖ ರಸ್ತೆಗಳನ್ನು ಬೆಸೆಯುವ ಸ್ಥಳ ಇದಾಗಿದ್ದು, ಯಾವುದೇ ಕಾರಣಕ್ಕೂ ಇಲ್ಲಿ ಬಾರ್‌ಗೆ ಅನುಮತಿ ನೀಡಬಾರದು ಎಂದು ಎಚ್‌.ಡಿ.ಕೋಟೆ ನಿವಾಸಿ ರಾಕೇಶ್‌ ಒತ್ತಾಯಿಸಿದ್ದಾರೆ. ಅಲ್ಲದೇ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಬಕಾರಿ ಆರಕ್ಷಕ ಉಪನಿರೀಕ್ಷಕ ನಟರಾಜ್‌, ಅಬಕಾರಿ ಇಲಾಖೆಯ ನಿಯಮಗಳನ್ನು ಪಾಲಿಸದರೆ ಮಾತ್ರ ಬಾರ್‌ ತೆರೆಯುಲು ಅವಕಾಶ ನೀಡಲಾಗುವುದು. ಸ್ಥಳಪರಿಶೀಲನೆ ನಡೆಸಿ, ವಿರೋಧವಿದ್ದರೆ ಜನಾಭಿಪ್ರಾಯ ಸಂಗ್ರಹಿಸಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.