ಸಮಸ್ಯೆ ಇತ್ಯರ್ಥ್ಯಕ್ಕೆ ಸಂಘಟನೆ ಅವಶ್ಯ
Team Udayavani, Dec 15, 2017, 12:51 PM IST
ಪಿರಿಯಾಪಟ್ಟಣ: ಸಂಘಟನೆ ಕೊರತೆಯಿಂದ ಸಮಸ್ಯೆಗಳಿಗೆ ನಿವಾರಣೆ ಸಿಗುತ್ತಿಲ್ಲ ಎಂದು ರಾಜ್ಯ ಪದವೀದರ ಪ್ರಾಥಮಿಕ ಶಿಕ್ಷಕರ ಸಂಘದ ನಂಜನಗೂಡು ತಾಲೂಕು ಅಧ್ಯಕ್ಷ ಪ್ರಕಾಶ್ ತಿಳಿಸಿದರು. ಪಟ್ಟಣದ ಕೋಟೆ ಸರ್ಕಾರಿ ಶಾಲೆಯಲ್ಲಿ ನಡೆದ ಪಿರಿಯಾಪಟ್ಟಣ ತಾಲೂಕು ಪದವೀದರ ಪ್ರಾಥಮಿಕ ಶಿಕ್ಷಕರ ಸಂಘದ ಉದ್ಘಾಟನೆಯಲ್ಲಿ ಮಾತನಾಡಿದರು.
ಪ್ರಾಥಮಿಕ ಶಿಕ್ಷಣದಲ್ಲಿ 1 ರಿಂದ 5 ಮತ್ತು 6 ರಿಂದ8 ಎಂಬ ವಿಭಾಗಗಳಿದ್ದು ಶಿಕ್ಷಕರ ಮೂಲ ವೇತನದಲ್ಲೂ ಸಾಕಷ್ಟು ವ್ಯತ್ಯಾಸಗಳಿವೆ. ನೇಮಕಾತಿ ನಿಯಮದ ಅನುಸಾರ ಬಡ್ತಿಯಲ್ಲಿ ವಿಭಾಗ ಮಾಡಿ ಪದವೀದರ ಪ್ರಾಥಮಿಕ ಶಿಕ್ಷಕರಿಗೆ ಮೊದಲ ಅದ್ಯತೆ ನೀಡಬೇಕೆಂಬುದೇ ನಮ್ಮ ಕೋರಿಕೆ ಎಂದರು.
ಜಿಲ್ಲಾಧ್ಯಕ್ಷ ರವಿ, ರಾಜಾದ್ಯಂತ ಸಂಘದ ರಚನೆಯಾಗುತ್ತಿದ್ದು ಪದಾಧಿಕಾರಿಗಳ ಆಯ್ಕೆ ನಡೆಯುತ್ತಿದೆ. ಪದವೀದರ ಪ್ರಾಥಮಿಕ ಶಿಕ್ಷಕರು ತಮ್ಮ ಜೇಷ್ಠತ ಪಟ್ಟಿ ಸಿದ್ಧಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಲಿಗೆ ತಿಳಿಸಿಬೇಕು ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನಮ್ಮಗಳ ವೇತನದಲ್ಲಿ ಸದಸತ್ವ ಶುಲ್ಕಕ್ಕೆಂದು 200 ರೂ.,ಕಡಿತವಾಗುತ್ತಿದ್ದು ಅದನ್ನು ಮರು ಪಾವತಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ನೀಡಬೇಕೆಂದರು. ನೂತನ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಮನು.ಬಿ.ಆರ್, ತನಗೆ ವಹಿಸಿದ ಜವಾಬ್ದಾರಿಗೆ ಯಾವುದೇ ಚ್ಯುತಿ ಬಾರದಂತೆ ಶಿಕ್ಷಕರ ಸಮಸ್ಯೆ ನಿವಾರಣೆಗೆ ಶ್ರಮಿಸುತ್ತೇನೆಂದರು.
ಪದಾಧಿಕಾರಿಗಳ ಆಯ್ಕೆ: ತಾಲೂಕು ಘಟಕದ ಅಧ್ಯಕ್ಷರಾಗಿ ಮನು.ಬಿಆರ್, ಉಪಾಧ್ಯಕ್ಷರಾಗಿ ಯಶಸ್ವಿನಿ, ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್, ಖಜಾಂಚಿಯಾಗಿ ಮಹಮದ್ ಅತಿಕ್‌ವುಲ್ಲ, ಸಂಘಟನಾ ಕಾರ್ಯದರ್ಶಿಯಾಗಿ ಲಂಕೇಶ್, ಮಾನಸ, ವಕ್ತಾರರಾಗಿ ಶಿವಣ್ಣ, ನಿರ್ದೇಶಕರಾಗಿ, ಸವಿತಾ, ಪುಷ್ಪವತಿ ಅವರನ್ನು ಅವಿರೋಧ ಆಯ್ಕೆ ಮಾಡಲಾಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್‌ರಾಜ್, ಸಂಘಟನಾ ಕಾರ್ಯದರ್ಶಿ ರೂಪೇಶ್, ರಂಗಪ್ಪ, ಶಿಕ್ಷಕರಾದ ಶ್ರೀನಿವಾಸ್, ಕವಿತಾ, ಮಮತಾ, ಉಷಾ, ರಂಜಿತಾ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.