ಲಕ್ಷ ಲಕ್ಷ ಭಕ್ತರು ಮಿಂದೇಳುವ ಕುಂಭಮೇಳಕ್ಕೆ ಸಜ್ಜು


Team Udayavani, Feb 14, 2019, 12:04 PM IST

mys-1.jpg

ದಕ್ಷಿಣ ಭಾರತದ 11ನೇ ಮಹಾ ಕುಂಭಮೇಳಕ್ಕೆ ಇನ್ನು ಮೂರು ದಿನ ಮಾತ್ರ ಬಾಕಿ ಇದ್ದು, ಇದಕ್ಕಾಗಿ ತಿರುಮಕೂಡಲು ಕಾವೇರಿ, ಕಪಿಲ ಮತ್ತು ಸ್ಫಟಿಕ ಸರೋವರಗಳ ತ್ರಿವೇಣಿ ಸಂಗಮ ಸಜ್ಜಾಗಿದೆ. ಸಹಸ್ರಾರು ಸಾಧು ಸಂತರು ಸೇರಿದಂತೆ 10 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಪುಣ್ಯಸ್ನಾನಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ನದಿಯಲ್ಲಿ ಭಕ್ತರು ಸಂಚರಿಸಲು ಅನುಕೂಲವಾಗುವಂತೆ ಸೇನಾ ಯೋಧರಿಂದ ತಾತ್ಕಾಲಿಕ ತೂಗು ಸೇತುವೆ ನಿರ್ಮಿಸಲಾಗಿದೆ. ಮಹಾ ಉತ್ಸವಕ್ಕೆ ತ್ರಿವೇಣಿ ಸಂಗಮ ಅಲಂಕೃತಗೊಳ್ಳುತ್ತಿದ್ದು, ಫೆ.17ರಿಂದ 3 ದಿನಗಳ ಕಾಲ ನಡೆಯಲಿರುವ ಕುಂಭಮೇಳದಲ್ಲಿ ವಾರಾಣಸಿ ಮಾದರಿಯಲ್ಲಿ ನದಿ ಸಂಗಮ ಸ್ಥಳದಲ್ಲಿ ಗಂಗಾಪೂಜೆ, ದೀಪಾರತಿ ನೆರವೇರಲಿದೆ. ತಿರುಮಕೂಡಲು ಸ್ಥಳದಲ್ಲಿ ಉಚಿತ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಮೈಸೂರು: ಕಾವೇರಿ, ಕಪಿಲ ಮತ್ತು ಸ್ಫಟಿಕ ಸರೋವರಗಳ ತ್ರಿವೇಣಿ ಸಂಗಮವಾದ ತಿ.ನರಸೀಪುರ ತಾಲೂಕಿನ ತಿರುಮಕೂಡಲು ಶ್ರೀಕ್ಷೇತ್ರದಲ್ಲಿ ಇದೇ 17ರಿಂದ ಮೂರು ದಿನಗಳ ಕಾಲ ನಡೆಯಲಿರುವ 11ನೇ ಮಹಾ ಕುಂಭಮೇಳಕ್ಕೆ ಸರ್ಕಾರ ವಿಶೇಷ ಗಮನಹರಿಸಿ ಸಕಲ ಸಿದ್ಧತೆ ನಡೆಸಿದೆ ಎಂದು ಆದಿ ಚುಂಚನಗಿರಿ ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ ತಿಳಿಸಿದರು.

ಮೈಸೂರಿನ ಶಾಖಾ ಮಠದಲ್ಲಿ ಕುಂಭ ಮೇಳದ ಸಿದ್ಧತೆ ಕುರಿತು ಬುಧವಾರ ಸುದ್ದಿ ಗೋಷ್ಠಿ ನಡೆಸಿ ವಿವರ ನೀಡಿದ ಅವರು, ಉತ್ತರ ಭಾರತದ ಪ್ರಯಾಗ, ಹರಿದ್ವಾರ, ನಾಸಿಕ, ಉಜ್ಜಯಿನಿಗಳಂತಹ ಸಂಗಮ ಕ್ಷೇತ್ರಗಳಲ್ಲಿ ಆಚರಣೆಯಲ್ಲಿರುವ ಮಹಾ ಕುಂಭಮೇಳಗಳಲ್ಲಿ ಕೋಟಿ ಕೋಟಿ ಜನರು ಪುಣ್ಯಸ್ನಾನ ಮಾಡಿ ಧನ್ಯರಾಗುತ್ತಿದ್ದರು. ಈ ಸೌಭಾಗ್ಯದಿಂದ ದಕ್ಷಿಣ ಭಾರತದ ಭಕ್ತರು ವಂಚಿತರಾಗುತ್ತಿದ್ದುದನ್ನು ಮನಗಂಡ ಕೈಲಾಸಾ ಶ್ರಮದ ತಿರುಚ್ಚಿ ಸ್ವಾಮೀಜಿ, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಬಾಲಗಂಗಾಧರ ನಾಥ ಸ್ವಾಮೀಜಿ, ಸುತ್ತೂರು ವೀರಸಿಂಹಾಸನ ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿಗಳು ಪವಿತ್ರ ನದಿಗಳ ಸಂಗಮವಾದ ತಿರುಮ ಕೂಡಲು ಕ್ಷೇತ್ರವನ್ನು ಗುರುತಿಸಿ 1989ರಲ್ಲಿ ಪ್ರಪ್ರಥಮ
ಬಾರಿಗೆ ದಕ್ಷಿಣ ಭಾರತದಲ್ಲೂ ಕುಂಭಮೇಳ ಆರಂಭವಾಗಿ ಈವರೆಗೆ ಪ್ರತಿ 3 ವರ್ಷಕ್ಕೊಮ್ಮೆಯಂತೆ 10 ಕುಂಭಮೇಳಗಳು ನಡೆದಿವೆ. ಎಲ್ಲಾ ಮತದವರೂ ಒಟ್ಟುಗೂಡಿ ಮಾಡುವ ಕಾರ್ಯ ಇದು. ಮಾಘಮಾಸದಲ್ಲಿ ನಡೆಯುತ್ತಿರುವ ಈ ಕುಂಭಮೇಳದಲ್ಲಿ ನಾಡಿನ ಎಲ್ಲಾ ಜನರೂ ಭಾಗವಹಿಸಿ ಪುಣ್ಯಸ್ನಾನ ಮಾಡುವಂತಾಗಬೇಕು ಎಂದು ಆಶಿಸಿದರು.

ಮೊದಲ ದಿನ: ಫೆ.17ರಂದು ಬೆಳಗ್ಗೆ 6ಗಂಟೆಗೆ ಮಾಘ ಶುದ್ಧ ತ್ರಯೋದಶೀ ಪುಷ್ಯ ನಕ್ಷತ್ರದಲ್ಲಿ ಶ್ರೀ ಅಗಸ್ತೇಶ್ವರ ಸನ್ನಿಧಿಯಲ್ಲಿ ಅನುಜ್ಞೆ, ಪುಣ್ಯಾಹ, ಕಲಶ ಸ್ಥಾಪನೆ, ಗಣಹೋಮ, ಅಭಿಷೇಕ, ದೇವತಾರಾಧನೆ, ರಾಷ್ಟ್ರಾಶೀ ರ್ವಾದ. ಸಂಜೆ 4ಕ್ಕೆ ಅಗ್ರತೀರ್ಥ ಸಂಗ್ರಹ ಸಮೇತ ಯಾಗಶಾಲಾ ಪ್ರವೇಶ, ಪುಣ್ಯಾಹ, ವಾಸ್ತುಹೋಮಗಳು ನಡೆಯಲಿದೆ.

ಎರಡನೇ ದಿನ: 18ರಂದು ಬೆಳಗ್ಗೆ 6ಕ್ಕೆ ಮಾಘಶುದ್ಧ ಚತುರ್ದಶೀ ಆಶ್ಲೇಷ ನಕ್ಷತ್ರ, ಪುಣ್ಯಾಹ, ನವಗ್ರಹ ಪೂಜೆ, ಜಪ, ನವಗ್ರಹ ಹೋಮ, ಪೂರ್ಣಾಹುತಿ. ಮಧ್ಯಾಹ್ನ 3.45ಕ್ಕೆ ಸುದರ್ಶನ ಪೂಜೆ, ಹೋಮ, ಪೂರ್ಣಾಹುತಿ ನಡೆಯಲಿದೆ. ಸಂಜೆ 4ಗಂಟೆಗೆ ಗುಂಜಾ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಮಹಾತ್ಮರ ಪುರಪ್ರವೇಶ ಮತ್ತು ಉತ್ಸವ, ಸಂಜೆ 6.30ಕ್ಕೆ ಯಾಗಶಾಲಾ ಪ್ರವೇಶ ಮತ್ತು ಪೂರ್ಣಾಹುತಿ ನಡೆಯಲಿದೆ.

ರಾತ್ರಿ 7ಗಂಟೆಗೆ ವಾರಾಣಸಿ ಮಾದರಿಯಲ್ಲಿ ನದಿ ಸಂಗಮ ಸ್ಥಳದಲ್ಲಿ ಸಾರ್ವಜನಿಕ ಗಂಗಾಪೂಜೆ ಮತ್ತು ದೀಪಾರತಿ ನೆರವೇರಿಸ ಲಾಗುವುದು ಎಂದು ತಿಳಿಸಿದರು.

ಮೂರನೇ ದಿನ: ಫೆ.19ರ ಮುಂಜಾನೆ 5.30ಕ್ಕೆ ಮಾಘಶುದ್ಧ ವ್ಯಾಸ ಪೂರ್ಣಿಮಾ, ಪುಷ್ಯನಕ್ಷತ್ರ, ಪುಣ್ಯಾಹ, ಸಪ್ತನದೀತೀರ್ಥ ಕಲಶ ಪೂಜೆ, ಹೋಮ, ಕುಂಭಲಗ್ನದಲ್ಲಿ ಪೂರ್ಣಾಹುತಿ, ತ್ರಿವೇಣಿ ಸಂಗಮದಲ್ಲಿ ಕಲಶತೀರ್ಥ ಸಂಯೋಜನೆ ಮಾಡಲಾಗು ವುದು. ಪ್ರಾತಃಕಾಲ 9.35ರಿಂದ 9.50ರ ಮೀನಲಗ್ನ, ಬೆಳಗ್ಗೆ 11.30ರಿಂದ 12ಗಂಟೆಯ ವೃಷಭ ಲಗ್ನ, ಅಭಿಜಿನ್‌ ಮುಹೂರ್ತ, ವಿಧಿ ಮುಹೂರ್ತ ಹಾಗೂ ವೇದ ಮುಹೂರ್ತಗಳಲ್ಲಿ ಮಹೋದಯ ಪುಣ್ಯಸ್ನಾನ ನಡೆಯ ಲಿದೆ. ಯಾಗಶಾಲೆಗೆ ಹೊಂದಿಕೊಂಡಂತೆ ಸ್ಫಟಿಕ ಸರೋವರವನ್ನು ಗುರುತಿಸಿ ಮಹಾತ್ಮರ ಪುಣ್ಯ ಸ್ನಾನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕುಂಭಮೇಳದ ಮೂರು ದಿನಗಳ ಕಾಲ ನಡೆಯುವ ಹೋಮ – ಹವನಗಳ ಜವಾಬ್ದಾರಿಯನ್ನು ಕೈಲಾಸಾಶ್ರಮ ನೋಡಿ ಕೊಳ್ಳಲಿದ್ದು, ಮಹಾತ್ಮರ ಸ್ವಾಗತದ ಜವಾಬ್ದಾರಿಯನ್ನು ಸುತ್ತೂರು ಮಠ ನೋಡಿಕೊಳ್ಳಲಿದೆ. ಧರ್ಮಾ ಧಿಕಾರಿಗಳು, ಮಹಾತ್ಮರ ಗೌರವ, ಪುಣ್ಯ ಸ್ನಾನದ ಜವಾಬ್ದಾರಿಯನ್ನು
ಆದಿಚುಂಚನಗಿರಿ ಮಠ ನೋಡಿಕೊಳ್ಳಲಿದೆ ಎಂದರು.  ಕಳೆದ ಬಾರಿಯ ಕುಂಭಮೇಳದಲ್ಲಿ ಒಂದು ಲಕ್ಷ ಜನರು ಪುಣ್ಯಸ್ನಾನ ಮಾಡಿರುವ ಅಂದಾಜಿದೆ. ಈ ಬಾರಿ ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ನದಿಯ ಎರಡೂ ಕಡೆ ತಡೆಗೋಡೆ ನಿರ್ಮಾಣ ಹಾಗೂ ಸ್ನಾನಘಟ್ಟ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಸರ್ಕಾರದ ವಿವಿಧ ಇಲಾಖೆ ಅಧಿಕಾರಿಗಳು ಆಗಾಗ್ಗೆ ಕ್ಷೇತ್ರಕ್ಕೆ ಭೇಟಿ ನೀಡಿ ಸಿದ್ಧತೆಯ ಪರಿಶೀಲನೆ ನಡೆಸಿದ್ದಾರೆ. 

ತ್ರಿವೇಣಿ ಸಂಗಮದಲ್ಲಿಸ್ವತ್ಛತೆಗೆ ಆದ್ಯತೆ: ಅಶೋಕ್‌
ಮೈಸೂರು:
ತಿ.ನರಸೀಪುರದ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಫೆ.17 ರಿಂದ 3 ದಿನಗಳ ಕಾಲ ನಡೆಯುವ ಕುಂಭಮೇಳಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಸ್ವತ್ಛತೆಗೆ ಪ್ರಮುಖ ಆದ್ಯತೆ ನೀಡಲಾಗುತ್ತಿದ್ದು, ಸ್ವತ್ಛತಾ ಕಾರ್ಯ ಭರದಿಂದ ಸಾಗುತ್ತಿದೆ ಎಂದು ತಿ. ನರಸೀಪುರ ಪುರಸಭೆ ಮುಖ್ಯಾಧಿಕಾರಿ ಅಶೋಕ್‌ ತಿಳಿಸಿದ್ದಾರೆ.

ಅಗಸ್ತೇಶ್ವರ ದೇವಾಲಯ ಮತ್ತು ಗುಂಜಾ ನರಸಿಂಹ ಸ್ವಾಮಿ ದೇವಸ್ಥಾನದ ಸುತ್ತ ಮುತ್ತ ಗಿಡ ಗಂಟಿಗಳನ್ನು ಕಳೆದ ಹತ್ತು ದಿನಗಳಿಂದ ನಿರಂತರ ತೆರವು ಮಾಡಲಾಗುತ್ತಿದೆ. ಸೇತುವೆಗಳ ಎರಡೂ ಬದಿಗಳಲ್ಲಿ ಬೆಳೆದಿದ್ದ ಗಿಡಗಳನ್ನು ತೆರವು ಮಾಡಿ ಎಲ್ಲಾ ಕಡೆ ಸುಣ್ಣ ಬಣ್ಣ ತುಂಬಿಸಿ ಸ್ವತ್ಛತೆಗೆ
ಆದ್ಯತೆ ನೀಡಲಾಗುತ್ತಿದೆ ಎಂದರು.

ನಗರ ಬಸ್‌ ನಿಲ್ದಾಣ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಮಲಿನ ಉಂಟಾಗದಂತೆ ಸೂಕ್ತ ಕ್ರಮ ವಹಿಸಲಾಗಿದೆ ಚರಂಡಿಗಳಲ್ಲಿರುವ ತ್ಯಾಜ್ಯ ಹೊರ ತೆಗೆದು ಸೊಳ್ಳೆಗಳು ಬಾರದಂತೆ ಎಲ್ಲಾ ಕಡೆ ಬ್ಲೀಚಿಂಗ್‌ ಪೌಡರ್‌ ಹಾಕಲಾಗಿದೆ, ಭಕ್ತಾದಿಗಳು ತಿಂಡಿ ತಿನಿಸುಗಳು ತಿಂದ ಮೇಲೆ ಅವುಗಳನ್ನು
ಕಸದಬುಟ್ಟಿಗೆ ಹಾಕುವ ವ್ಯವಸ್ಥೆ ಮಾಡಲಾಗಿದೆ ಎಂದರು. ಕುಂಭಮೇಳಕ್ಕೆ ಸುಮಾರು 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಕುಂಭಮೇಳಕ್ಕೆ ಬರುವ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸುಮಾರು ಎಂಟು ನೀರಿನ ಟ್ಯಾಂಕ್‌ಗಳ ಸ್ವತ್ಛತೆ ಮಾಡಲಾಗಿದೆ. ಹಾಗೆಯೇ ಸುತ್ತ
ಮುತ್ತ ಭಕ್ತಾದಿಗಳು ಅನೈರ್ಮಲ್ಯ ಮಾಡಬಾರದೆಂದು ಅವರಿಗಾಗಿಯೇ ಶೌಚಾಲಯ ವ್ಯವಸ್ಥೆಗಳನ್ನು ಸಹ ಮಾಡಲಾಗಿದೆ.

ನಗರದ ಚರಂಡಿಗಳಿಂದ ನದಿಗೆ ಸೇರುತ್ತಿದ್ದ ತ್ಯಾಜ್ಯ ನೀರನ್ನು ತಡೆದು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಯಾವ ಕಲುಷಿತ ನೀರು ನದಿಗೆ ಸೇರದ ಹಾಗೆ ಕ್ರಮ ಕೈಗೊಳ್ಳಲಾಗಿದೆ ಮತ್ತು ನದಿ ಒಳಗಡೆ ತೇಲುತ್ತಿದ್ದ ಬಟ್ಟೆಗಳು ಹಾಗೂ ಇತರೆ ಗಲೀಜುಗಳನ್ನು ನೀರಾವರಿ ಇಲಾಖೆಯವರ
ಸಹಾಯದಿಂದ ಅದನ್ನು ಹೊರ ತೆಗೆಯುವ ಕೆಲಸ ಮಾಡಲಾಗಿದೆ ಎಂದರು.

ಬಜೆಟ್‌ ನಿಗದಿ ಇಲ್ಲ ಧರ್ಮದ ಕಾರ್ಯ ಆಗಿರುವುದರಿಂದ ಕುಂಭಮೇಳಕ್ಕೂ ಮುನ್ನ ಖರ್ಚುವೆಚ್ಚದ ಲೆಕ್ಕ ಹಾಕುವುದಿಲ್ಲ. ಕಾರ್ಯ ಮುಗಿದ ನಂತರ ಖರ್ಚಾದ ಹಣವನ್ನು ಸರ್ಕಾರ ಭರಿಸಲಿದೆ. ಕಳೆದ ಬಾರಿ ಕುಂಭಮೇಳಕ್ಕೆ ಸರ್ಕಾರ 3 ಕೋಟಿ ರೂ. ನೀಡಿದ್ದು, ಈ ಪೈಕಿ ಒಂದು ಕೋಟಿ ಮಾತ್ರ ಖರ್ಚಾ ಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸ್ವಾಮೀಜಿ ಹೇಳಿದರು. ತಿರುಮ ಕೂಡಲು ರಾಜ-ಮಹಾರಾಜರ ವೈಭವದ ಜಾಗ. ಕುಂಭಮೇಳದ ನಿಮಿತ್ತದಲ್ಲಿ ಅಲ್ಲಿ ಅಭಿವೃದ್ಧಿ ಕಾರ್ಯ ಗಳಾಗುವುದರಿಂದ ಅದೊಂದು ಪ್ರವಾಸಿ ತಾಣವಾಗಲಿದೆ ಎಂದು ಸ್ವಾಮೀಜಿ ತಿಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.