ಸಿದ್ದರಾಮಯ್ಯ ಬಜೆಟ್‌ನಲ್ಲಿ ಅನ್ನದಾತರಿಗೆ ಅನ್ಯಾಯ: ಪ್ರಸಾದ್‌

Team Udayavani, Mar 17, 2017, 12:30 PM IST

mys5.jpg

ನಂಜನಗೂಡು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ರೈತರ ಪಾಲಿಗೆ ನಿರಾಶ ದಾಯಕವಾಗಿದೆ. ಇದೊಂದು ಗಿಮಿಕ್‌ ಬಜೆಟ್‌ ಎಂದು ನಂಜನಗೂಡು ಉಪಚುನಾವಣೆ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಶ್ರೀನಿವಾಸ್‌ ಪ್ರಸಾದ್‌ ಟೀಕಿಸಿದರು.

ಪಟ್ಟಣದಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅನ್ನದಾತರಿಗೆ ಅನ್ಯಾಯ ಎಸಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಸಮರ್ಪಕ ಮಳೆಯಿಲ್ಲದೆ ಬರದಿಂದ ಸಂಕಷ್ಟದಲ್ಲಿರುವ ರೈತ ಸಾಲಮನ್ನಾ ಮಾಡಲಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅವರಿಗೆ ರೈತರಿಗೆ ಯಾವುದೇ ಯೋಜನೆ ಘೋಷಿಸದೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.

ಅರ್ಧ ಸಾಲಮನ್ನಾ ಮಾಡಬೇಕಿತ್ತು: ಬಜೆಟ್‌ನಲ್ಲಿ ಕನಿಷ್ಠ ರೈತರ ಅರ್ಧ ಸಾಲವನ್ನಾದರೂ ಮನ್ನಾ ಮಾಡಬೇಕಿತ್ತು. ಬೇರೆ ಇಲಾಖೆಗಳಿಗೆ ತುಸು ಅನುದಾನ ಕಡಿತ ಮಾಡಿ, ಈ ಹಣವನ್ನು ಸಾಲಮನ್ನಾಕ್ಕೆ ಬಳಸಿ ರೈತ ಸಮುದಾಯವನ್ನು ಉಳಿಸಬೇಕಿತ್ತು. ಕೇವಲ ರೈತರಿಗಾಗಿ ಮೊಸಳೆ ಕಣ್ಣೀರು ಹಾಕುವ ಈ ಮಹಾಶಯರಿಗೆ ಇದು ಅರ್ಥವಾಗಬೇಕಲ್ಲವೇ ಎಂದು ಕುಟುಕಿದರು

ಜಗದೀಶ್‌ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದಾಗ  49 ತಾಲೂಕುಗಳ ಪೈಕಿ  43 ತಾಲೂಕುಗಳ ಘೋಷಣೆ ಮಾಡಲಾಗಿತ್ತು. ಇದರಲ್ಲಿ ಸಿದ್ದರಾಮಯ್ಯ ಪಾತ್ರ ಏನೂ ಇಲ್ಲ. ಚಾಮರಾಜನಗರ, ದಾವಣಗೆರೆ, ಗದಗ ಸೇರಿದಂತೆ ವಿವಿಧ ಜಿಲ್ಲೆಗಳ ಉಪವಿಭಾಗಗಳ ಕುರಿತು ಬಜೆಟ್‌ನಲ್ಲಿ ಪ್ರಸ್ತಾಪಿಸಿಲ್ಲ ಎಂದು ದೂರಿದರು. ಸಿದ್ದರಾಮಯ್ಯ ಮಂಡಿಸಿರುವ ಈ ಬಜೆಟ್‌ನಲ್ಲಿನ ಯೋಜನೆಗಳು ಕಾರ್ಯಗತಗೊಳ್ಳಲು ಕನಿಷ್ಠ ನಾಲ್ಕು ವರ್ಷ ಬೇಕಿದೆ.  ಕಂದಾಯ ಇಲಾಖೆಯ ಡಿ ಗ್ರೂಪ್‌ ನೌಕಕರ ಕುರಿತು ಪ್ರಸ್ತಾಪವಾಗಿಲ್ಲ ಎಂದು ತಿಳಿಸಿದರು.

ಇದುವರೆಗೂ ನಾಮಪತ್ರ ಸಲ್ಲಿಕೆಯಿಲ್ಲ: ನಂಜನಗೂಡು ಉಪ ಚುನಾವಣೆಗೆ ಇದುವರೆಗೂ ಯಾರೊಬ್ಬರೂ ನಾಮಪತ್ರ ಸಲ್ಲಿಸಿಲ್ಲ. ಮಂಗಳವಾರದಿಂದ ನಾಮಪತ್ರ ಸ್ವೀಕರಿಸಲು ಚುನಾವಣಾಧಿಕಾರಿ ಜಿ. ಜಗದೀಶ ಕಾದು ಕುಳಿತ್ತಿದ್ದು, ಗುರುವಾರವೂ ಯಾರೂ ನಾಮಪತ್ರ ಸಲ್ಲಿಸಲು ಕಚೇರಿಗೆ ಆಗಮಿಸಲಿಲ್ಲ. ಗುರುವಾರ  6 ನಾಮಪತ್ರದ ಅರ್ಜಿಗಳನ್ನು ಪಡೆದುಕೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ತಹಶೀಲ್ದಾರ್‌ ದಯಾನಂದ್‌ ತಿಳಿಸಿದ್ದಾರೆ. ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿ ಸೋಮವಾರ ನಾಮಪತ್ರ ಸಲ್ಲಿಸುವ ನಿರೀಕ್ಷೆಯಿದೆ. 

ಟಾಪ್ ನ್ಯೂಸ್

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.