![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Dec 23, 2021, 6:52 PM IST
ಪಿರಿಯಾಪಟ್ಟಣ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಕಾಲಕಾಲಕ್ಕೆ ಅಗತ್ಯ ಸಾಲ ನೀಡುವ ಮೂಲಕ ರೈತರ ಜೀವನಾಡಿಯಾಗಿವೆ ಎಂದು ಸಂಘದ ಅಧ್ಯಕ್ಷ ಹೆಚ್.ಡಿ.ರಾಜೇಂದ್ರ ತಿಳಿಸಿದರು.
ತಾಲ್ಲೂಕಿನ ನಾಂದಿನಾಥಪುರ ಗ್ರಾಮದಲ್ಲಿ ಗುರುವಾರ ನಡೆದ 2020-21 ನೇ ಸಾಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.
ನಂದಿನಾಥಪುರ ಕೃಷಿ ಪತ್ತಿನ ಸಹಕಾರ ಸಂಘವು 1967 ರಲ್ಲಿ ಪ್ರಾರಂಭವಾಗಿ ರಾಜ್ಯದಲ್ಲಿಯೇ 2 ನೇ ಅತಿ ದೊಡ್ಡ ಸಹಕಾರ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಗಿ ಪ್ರಸ್ತುತ 3600 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿ 3.68 ಕೋಟಿ ಷೇರು ಬಂಡವಾಳವನ್ನು ಹೊಂದಿದೆ. ಸಾಲವಿತರಣೆ, ಮರುಪಾವತಿ, ಠೇವಣೆ ಸಂಗ್ರಹ, ರಸಗೊಬ್ಬರ ಮತ್ತು ಬಿತ್ತನೆ ಬೀಜ ಮಾರಾಟದಲ್ಲಿ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿದೆ. 2020-21 ನೇ ಸಾಲಿನಲ್ಲಿ ರೈತರಿಗೆ 35.93 ಕೋಟಿ ಸಾಲ ನೀಡಲಾಗಿದ್ದು, 19.24 ಲಕ್ಷ ನಿವ್ವಳ ಲಾಭ ಗಳಿಸಿದೆ ಇದಲ್ಲದೆ ಶೇ 90 ರಷ್ಟು ಸಾಲವನ್ನು ವಸೂಲಾತಿ ಮಾಡಲಾಗಿದೆ ಇದರೊಂದಿಗೆ ಕಾಲಕಾಲಕ್ಕೆ ಬೆಳೆಸಾಲ, ಪಿಗ್ಮಿಸಾಲ, ಸೌಧೆಸಾಲ, ಸೇರಿದಂತೆ ಅಲ್ಪಾವಧಿ ಮತ್ತು ಧೀರ್ಘಾವಧಿ ಸಾಲಗಳನ್ನು ನೀಡಲಾಗುತ್ತಿದ್ದು ರೈತರು ಈ ಸಧಾವಾಶವನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು.
ಸಂಘದ ಸಿಇಒ ಶಿವಣ್ಣ ಮಾತನಾಡಿ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ರೈತರು ಸಹಕಾರ ಸಂಘಗಳನ್ನೆ ನಂಬಿ ಬದುಕುತ್ತಿದ್ದಾರೆ. ಸರ್ಕಾರ ಕೂಡ ಇವರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ. ಇದನ್ನು ಸಂಪೂರ್ಣವಾಗಿ ಸದ್ಭಳಕೆ ಮಾಡಿಕೊಳ್ಳಬೇಕು, ಈ ಸಹಕಾರ ಸಂಘ ತಾಲ್ಲೂಕಿನಲ್ಲಿಯೇ ಅತ್ಯುತ್ತಮ ನಿವ್ವಳ ಲಾಭ ಹೊಂದಿದ್ದು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಿ ಷೇರುದಾರರಿಗೆ ಸಹಕಾರಿಯಾಗಿದೆ. ಸಂಘದಿಂದ ಸಾಲ ಪಡೆದುಕೊಂಡ ರೈತರು ಹೈನುಗಾರಿಕೆ ಹಾಗೂ ನೀರಾವರಿ ಸೇರಿದಂತೆ ಇನ್ನಿತರ ಚಟುವಟಿಕೆಗೆ ಹಣ ಬಳಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎನ್.ಇ.ರಾಜು, ನಿರ್ದೇಶಕರಾದ ಹೆಚ್.ಬಿ.ಗೋವಿಂದೇಗೌಡ, ಪಿ.ವಿ.ಜಲೇಂದ್ರ, ಎಂ.ಎಸ್.ಸ್ವಾಮಿಗೌಡ, ಎಸ್.ನಾಗಪ್ಪ, ಜವರೇಗೌಡ, ಕೃಷ್ಣೇಗೌಡ, ಪಿ.ಜೆ, ಮಂಜುನಾಥ, ವೆಂಕಟೇಶ, ಭಾಗ್ಯಸುರೇಶ್, ಎಚ್.ಕೆ.ಜಗದೀಶ್. ಸಿಬ್ಬಂದಿಗಳಾದ ಬಿ.ಬಿ.ಮಹದೇವ್, ಪಿ.ರಾಜಶೇಖರಮೂರ್ತಿ, ಬಿ.ಮಹದೇವಯ್ಯ, ಎಚ್.ಕೆ.ಮಂಜುನಾಥ್, ಎಂ.ವಿ.ರವಿ, ಮುತ್ತುರಾಜ್, ಎಂ.ಕೃಷ್ಣ, ಕೆ.ಎನ್.ಅರುಣ್ ಕುಮಾರ್, ಕೆ.ಎಸ್.ಮಧು, ಎಂ ಶಶಿಧರ, ಎನ್ ಪಿ ಗಣೇಶ್, ಎನ್ ಸಿ ರಾಜಾ, ಡಿ.ಬಸವರಾಜ್, ಮಹೇಶ್, ಪೂಣಚ್ಚ ಸೇರಿದಂತೆ ಸಂಘದ ಸರ್ವ ಸದಸ್ಯರು ಹಾಜರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.