ಕಾಯ್ದೆ ರದ್ದತಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
Team Udayavani, Oct 4, 2020, 1:26 PM IST
ಮೈಸೂರು: ರೈತರ ಪಾಲಿನ ಕರಾಳ ಕಾಯ್ದೆಗಳನ್ನು ರದ್ದುಪಡಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮನವಿ ಶನಿವಾರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ವಾಸು, ಕೇಂದ್ರ ಸರ್ಕಾರವು ದೇಶದ ರೈತರು ಮತ್ತು ಕೃಷಿ ವಿರುದ್ಧ ಕುಟಿಲ ಪಿತೂರಿಯನ್ನು ನಡೆಸುತ್ತಿದೆ. ರೈತ ವಿರೋಧಿ ಕಾಯ್ದೆಗಳನ್ನು ತರುವ ಮೂಲಕ ಹಸಿರು ಕ್ರಾಂತಿಯನ್ನು ಸೋಲಿಸಲು ಕೇಂದ್ರ ಬಿಜೆಪಿ ಸರ್ಕಾರ ಸಂಚು ರೂಪಿಸುತ್ತಿದೆ. ಬಂಡವಾಳ ಶಾಹಿಗಳು ನಿರ್ಮಿಸುವ ಬಲಿಪೀಠದ ಎದುರು ಅನ್ನದಾತ ರೈತರ ಮತ್ತು ಕೃಷಿ ಯನ್ನು ಬಲಿಕೊಡಲು ನಡೆಸುವ ಪೂರ್ವ ಯೋಜಿತ ಕೃತ್ಯ ಎಂದು ಕಿಡಿಕಾರಿದರು.
ದೇಶಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಬಂಡವಾಳಶಾಹಿ ಗೆಳೆಯರಿಗೆ ಸೇವೆ ಸಲ್ಲಿಸಲು ಕಟಿಬದ್ಧರಾದ ಪ್ರಧಾನಿ ಮೋದಿಯವರು ರೈತರ ಸಂಕಷ್ಟಕ್ಕೆ ಕುರುಡರಾಗಿದ್ದಾರೆ. ಅಧಿಕಾರದ ಮದದಿಂದ ಪ್ರತಿಭಟನೆಯ ಧ್ವನಿಯನ್ನು ದಮನಿಸುತ್ತಿದ್ದಾರೆ ಎಂದು ಹರಿಹಾಯ್ದರು.
ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ಅನ್ನದಾತ ರೈತ ಮತ್ತು ಕೃಷಿಕಾರ್ಮಿಕರು ಅನುಭವಿಸುತ್ತಿರುವ ಬವಣೆಗಳನ್ನು ಬಂಡವಾಳಶಾಹಿಗಳ ಅವಕಾಶವಾಗಿ ಪರಿವರ್ತಿಸಿದ ಮೋದಿ ಸರ್ಕಾರದ ಕೆಟ್ಟ ನಡೆಯನ್ನು ರೈತಾಪಿ ವರ್ಗ ಎಂದೂಮರೆಯುವುದಿಲ್ಲ,ಕ್ಷಮಿಸುವುದೂ ಇಲ್ಲ. ಈ ವಿಚಾರದಲ್ಲಿ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಈ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆದೇಶಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್‌ಕುಮಾರ್, ನಗರಾಧ್ಯಕ್ಷ ಆರ್. ಚಂದ್ರಶೇಖರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysore: ಹಾಡಹಗಲೇ ಕಾರು ಅಡ್ಡಗಟ್ಟಿ ರಾಬರಿ; ಹಣದೊಂದಿಗೆ ಕಾರು ಕೂಡಾ ದೋಚಿದರು!
Hunasur: ಪ್ರೇಯಸಿಗೆ ಚಿನ್ನ ಖರೀದಿಸಲು ಎಟಿಎಂ ಗೆ ತುಂಬಬೇಕಿದ್ದ ಹಣ ಎಗರಿಸಿದ ಯುವಕ
Mysuru ಮುಟ್ಟುಗೋಲು: 142 ನಿವೇಶನ ಮಾಹಿತಿ ಬಹಿರಂಗಕ್ಕೆ ಸ್ನೇಹಮಯಿ ಕೃಷ್ಣ ಒತ್ತಾಯ
ತ್ರಿವೇಣಿ ಸಂಗಮ ಕುಂಭಮೇಳಕ್ಕೆ 10 ಕೋಟಿ ರೂ. ಪ್ರಸ್ತಾವನೆ: ಸಚಿವ ಮಹದೇವಪ್ಪ
Mysuru: ಸಿದ್ದರಾಮಯ್ಯ ಹೆಸರು ದುರ್ಬಳಕೆಗೆ ಇ.ಡಿ. ಮೂಲಕ ಯತ್ನ; ಯತೀಂದ್ರ