ಆಡಳಿತ-ವಿಪಕ್ಷ ಸದಸ್ಯರ ನಡುವೆ ಜಟಾಪಟಿ
Team Udayavani, Oct 7, 2020, 2:15 PM IST
ಮೈಸೂರು: ರಾಜ್ಯದ ಇತರೆ ಭಾಗಗಳಂತೆ ಮೈಸೂರಿನಲ್ಲಿ ಖಾಸಗಿ ಆಸ್ಪತ್ರೆಗಳಿಂದ ಶೇ.50 ಹಾಸಿಗೆಯನ್ನು ಕೋವಿಡ್-19 ಚಿಕಿತ್ಸೆಗೆ ಮೀಸಲಿರಿಸಿ ಬಡವರಿಗೆ ಏಕೆ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂದು ಪಾಲಿಕೆಯ ಜೆಡಿಎಸ್-ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಂಗಳವಾರ ನಡೆದ ಕೌನ್ಸಿಲ್ ಸಭೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಸದಸ್ಯರು ರಾಜ್ಯದಲ್ಲಿ ಬೇರೆ ಕಡೆಗಳಲ್ಲಿ ಬಡವರ ಆಸ್ಪತ್ರೆ ಬಿಲ್ ಪಾವತಿಸುವ ರಾಜ್ಯ ಸರ್ಕಾರ ಮೈಸೂರಿನಲ್ಲಿ ಮಾತ್ರ ಬಡವರ ಆಸ್ಪತ್ರೆ ವೆಚ್ಚ ಭರಿಸುತ್ತಿಲ್ಲ. ಮೈಸೂರಿನ ಬಡವರು ಏನು ಪಾಪ ಮಾಡಿದ್ದಾರೆ. ಇಂತಹ ಪರಿಸ್ಥಿತಿಗೆ ಬಿಜೆಪಿ ನೇತೃತ್ವದ ಸರ್ಕಾರವೇ ಕಾರಣ ಎಂದು ಆರೋಪಿಸಿದರು.
ತರಾಟೆ: ಆಡಳಿತ ಪಕ್ಷದ ಸದಸ್ಯರ ಆರೋಪಕ್ಕೆ ಕೆಂಡಾಮಂಡಲರಾದ ಬಿಜೆಪಿ ಸದಸ್ಯರು, ಸಭಾಂಗಣದ ಮುಂಭಾಗಕ್ಕೆ ತೆರಳಿ ಪ್ರತಿಭಟನೆ ನಡೆಸಿ, ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆಸುವುದು ಬಿಟ್ಟು ಸರ್ಕಾರದ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಆಕ್ರೋಶ: ಮಾಜಿ ಮೇಯರ್ ಆರೀಫ್ ಹುಸೇನ್ ಮಾತನಾಡಿ, ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಮೈಸೂರು ವಿಫಲವಾಗಿದೆ.ಖಾಸಗಿ ಆಸ್ಪತ್ರೆಗಳ ಬಿಲ್ ಕಟ್ಟಲಾರದೆ ಬಡವರು ಆತಂಕಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಶೇ.50 ಹಾಸಿಗೆ ಮೀಸಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಮೈಸೂರು ಜಿಲ್ಲೆಯಲ್ಲಿ ಸೋಂಕಿತರು, ಮೃತರ ಸಂಖ್ಯೆ ಏರುತ್ತಿದ್ದರೂ ಈವರೆಗೂ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ಶೇ.50 ಹಾಸಿಗೆ ಕಾಯ್ದಿರಿಸಿ ಬಡವರಿಗೆ ಕೋವಿಡ್ ಚಿಕಿತ್ಸೆ ನೀಡುತ್ತಿಲ್ಲ. ಇದಕ್ಕೆ ಕಾರಣವೇನು?. ಬಡವರಿಗೆ ಚಿಕಿತ್ಸೆ ಕೊಡದ ಅತ್ಯಂತಕೆಟ್ಟ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ಆದೇಶವಿದ್ದರೂ ಜಿಲ್ಲೆಯಲ್ಲಿ ಸೋಂಕಿಗೆ ಒಳಗಾಗುವ ಬಡವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಹಾಸಿಗೆವ್ಯವಸ್ಥೆಈವರೆಗೂಆಗಿಲ್ಲ.ಹೀಗಾಗಿ,ಚಿಕಿತ್ಸೆಪಡೆಯಲು ಹೋದರೆ ಲಕ್ಷಗಟ್ಟಲೆ ಹಣ ಕೊಡಬೇಕಿದೆ. ಇದರಿಂದ ಬಡ ರೋಗಿಗಳಿಗೆ ಅನ್ಯಾಯವಾಗುತ್ತಿದೆ. ಹೀಗಿದ್ದರೂ ಜಿಲ್ಲಾಡಳಿತ ಖಾಸಗಿ ಆಸ್ಪತ್ರೆಗಳ ವಿರುದ್ಧ ಏಕೆ ಕ್ರಮಕೈಗೊಂಡಿಲ್ಲ?. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಬೆಂಗಳೂರಿನಲ್ಲಿ ಕೋವಿಡ್ ಚಿಕಿತ್ಸೆಗೆ ಒಳ್ಳೆಯ ವ್ಯವಸ್ಥೆ ಮಾಡಿರುವ ಸರ್ಕಾರ ಮೈಸೂರು ಜಿಲ್ಲೆ ವಿಚಾರದಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿದೆ. ಇದು ಕೆಟ್ಟ ಸರ್ಕಾರ ಎಂದು ಕಿಡಿಕಾರಿದರು. ಗದ್ದಲ ತಿಳಿಗೊಳಿಸಲು ಮೇಯ ರ್10 ನಿಮಿಷ ಸಭೆಮುಂದೂಡಿದರು. ಬಳಿಕ 50 ನಿಮಿಷವಾದರೂ ಸಭೆಆರಂಭವಾಗಲಿಲ್ಲ. ನಂತರ ನಡೆದ ಸಭೆಯಲ್ಲಿಯೂ ಕೋವಿಡ್ ವಿಚಾರದ ಬಗ್ಗೆ ಚರ್ಚೆ ಆರಂಭವಾಯಿತು. ಬಿಜೆಪಿಯವರು ಕೆಟ್ಟ ಸರ್ಕಾರ ಎಂದು ಹೇಳಿದ್ದಕ್ಕೆ ಕ್ಷಮೆ ಕೇಳಿ ಎಂದು ಪಟ್ಟು ಹಿಡಿದರು. ಕೇಳುವುದಿಲ್ಲ ಎಂದು ಕಾಂಗ್ರೆಸ್ ಸದಸ್ಯರು ತಮ್ಮ ಆರೋಪ ಮುಂದುವರಿಸಿದರು.
ಹಾಗಾಗಿ ನಂತರ ಊಟದ ವಿರಾಮಕ್ಕೆ ಸಭೆ ಸ್ಥಗಿತಗೊಳಿಸಲಾಯಿತು. ಮಧ್ಯಾಹ್ನದ ಬಳಿಕವೂ ಇದೇ ವಿಚಾರ ಪ್ರಸ್ತಾಪಿಸಲಾಯಿತು. ಹೀಗಾಗಿ ಅಭಿವೃದ್ಧಿ ಕುರಿತು ಚರ್ಚಿಸಬೇಕಾದ ವಿಚಾರಗಳ ಪ್ರಸ್ತಾಪವೇ ಆಗಲಿಲ್ಲ.
ಅನುದಾನ ನೀಡಲು ಮನವಿ: ಇದಕ್ಕೂ ಮುನ್ನ ನಡೆದ ಸಾಮಾನ್ಯ ವಿಷಯಗಳ ಕುರಿತ ಚರ್ಚೆಯಲ್ಲಿ ಕಳೆದ ಬಾರಿ ಕೌನ್ಸಿಲ್ ಸಭೆಯಲ್ಲಿ ನಿರ್ಣಯವಾಗಿರುವಂತೆ ಪ್ರತಿ ವಾರ್ಡ್‌ಗಳ ಅಭಿವೃದ್ಧಿಗಾಗಿ 50 ಲಕ್ಷ ರೂ. ಬಿಡುಗಡೆ ಮಾಡುವಂತೆ ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್ ಮನವಿ ಮಾಡಿದರು. ಆಯುಕ್ತ ಗುರುದತ್ತ ಹೆಗ್ಡೆ ಪ್ರತಿಕ್ರಿಯಿಸಿ, ಪ್ರತಿ ವಾರ್ಡ್‌ಗೂ 50 ಲಕ್ಷ ರೂ. ನೀಡುವುದಾದರೆ ಒಟ್ಟು 32.50 ಕೋಟಿ ರೂ. ಬೇಕಾಗುತ್ತದೆ. ಸದ್ಯ ಪಾಲಿಕೆ ಆರ್ಥಿಕ ದುಸ್ಥಿತಿ ಎದುರಿಸುತ್ತಿದೆ. ಹಾಗಾಗಿ ಹಣ ಬಿಡುಗಡೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು. ಸಭೆಯಲ್ಲಿ ಮೇಯರ್ ತಸ್ನೀಂ, ಉಪ ಮೇಯರ್ ಶ್ರೀಧರ್, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಇದ್ದರು.
ಸಭೆ ಮುಂದೂಡಿದರೂ ಮತ್ತೆ ಗದ್ದಲ ಮುಂದುವರಿಕೆ : ಆರೀಫ್ ಅವರು”ಕೆಟ್ಟ ಸರ್ಕಾರ’ಎಂಬ ಪದ ಬಳಸಿದ್ದರಿಂದ ತೀವ್ರ ಅಸಮಾಧಾನಗೊಂಡ ಬಿಜೆಪಿ ಸದಸ್ಯರು, ಸಭಾಂಗಣದ ಮುಂಭಾಗಕ್ಕೆ ಆಗಮಿಸಿ ಪ್ರತಿಭಟಿಸಿದರು. ಸರ್ಕಾರದ ವಿರುದ್ಧದ ಹೇಳಿಕೆ ವಾಪಸ್ ತೆಗೆದುಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಸಭೆಯಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು. ಜೆಡಿಎಸ್, ಕಾಂಗ್ರೆಸ್ ಸದಸ್ಯರು ಆರಿಫ್ ಹುಸೇನ್ ಅವರ ಆರೋಪಕ್ಕೆ ದನಿಗೂಡಿಸಿದರು. ಕೋವಿಡ್ ವಿಚಾರದಲ್ಲಿ ಮೈಸೂರಿನಲ್ಲಿ ನಿರ್ಲಕ್ಷ್ಯ ಕಂಡು ಬಂದಿದೆ. ಬಡವರಿಗೆ ಚಿಕಿತ್ಸೆ ದೊರೆಯುತ್ತಿಲ್ಲ. ನಿತ್ಯವೂ ಜನ ಸಾಯುತ್ತಿದ್ದಾರೆ. ಹಾಗಾಗಿ ಆರಿಫ್ ಹುಸೇನ್ ಅವರ ಆರೋಪ ಸರಿ ಇದೆ. ಅದಕ್ಕೆಕ್ಷಮೆ ಕೇಳುವ ಅಗತ್ಯವಿಲ್ಲ ಎಂದರು. ಗದ್ದಲ ತಿಳಿಗೊಳಿಸಲು ಮೇಯರ್10 ನಿಮಿಷ ಸಭೆ ಮುಂದೂಡಿದರು. ಆದರೂ, ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.