ಚಾಮುಂಡೇಶ್ವರಿಗೆ ಕಡೆ ಆಷಾಢ ಶುಕ್ರವಾರದ ವಿಶೇಷ ಪೂಜೆ
Team Udayavani, Jul 18, 2020, 8:57 AM IST
ಮೈಸೂರು: ಕೋವಿಡ್ ಸೋಂಕು ಹರಡುವ ಭೀತಿಯಿಂದ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ್ದ ಹಿನ್ನೆಲೆ ಕಡೆಯ ಆಷಾಢ ಶುಕ್ರವಾರವೂ ಸರಳವಾಗಿ ವಿಶೇಷ ಪೂಜೆಗಳು ನೆರವೇರಿದವು.
ಪೂಜಾ ಕೈಂಕರ್ಯ: ಆಷಾಢ ಮಾಸದ ಕಡೆಯ ಶುಕ್ರವಾರದ ಅಂಗವಾಗಿ ಬೆಟ್ಟದಲ್ಲಿ ಬೆಳಗ್ಗೆ 5.30ರಿಂದಲೇ ಪೂಜಾ ಕೈಂಕರ್ಯ ನಡೆಯಿತು. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ದೇವಸ್ಥಾನದ ಆವರಣದ ಒಳಗೇ ಮೆರವಣಿಗೆ ನಡೆಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ವಿಧಿಗಳು ನೆರವೇರಿದ್ದು, ಕೊರೊನಾ ಭೀತಿಯಿಂದ ಬೆಳಗ್ಗೆ 7.30ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಬೆಳಗ್ಗೆ ಬರಿಗಾಲಿನಲ್ಲಿ ಬೆಟ್ಟ ಹತ್ತುವ ಮೂಲಕ ಸಂಸದೆ ಶೋಭಾ ಕರಂದ್ಲಾಜೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಬೆಟ್ಟಕ್ಕೆ ತೆರಳಲು ನಿರ್ಬಂಧ ಇದ್ದರೂ ಅದನ್ನು ಅವರು ಲೆಕ್ಕಿಸಲಿಲ್ಲ. ಅವರ ಬೆಂಬಲಿಗರೂ ಬೆಟ್ಟ ಏರಿ ದೇವಿಯ ದರ್ಶನ ಪಡೆದರು.
ತಾರತಮ್ಯಕ್ಕೆ ಆಕ್ರೋಶ: ಚಾಮುಂಡೇಶ್ವರಿ ದರ್ಶನ ಪಡೆಯಲು ಆಗಮಿಸಿದ್ದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ನಗರ ಪಾಲಿಕೆ ಸದಸ್ಯೆ ಭಾಗ್ಯಾ ಅವರನ್ನು ಪೊಲೀಸರು ಬೆಟ್ಟದ ಮಾರ್ಗದ ಮುಖ್ಯ ದ್ವಾರದ ಬಳಿಯೇ ತಡೆದು ಹಿಂದಕ್ಕೆ ಕಳುಹಿಸಿದರು. ಈ ಸಂದರ್ಭ ಭಾಗ್ಯ ಹಾಗೂ ಸ್ಥಳದಲ್ಲಿದ್ದ ಸಾರ್ವಜನಿಕರು ಪೊಲೀಸರ ತಾರತಮ್ಯ ನೀತಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಹೇಗೆ ಒಳಗೆ ಬಿಟ್ಟಿರಿ? ನಮ್ಮನ್ನು ಏಕೆ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚಾಮುಂಡಿಬೆಟ್ಟ ಗ್ರಾಮದ ನಿವಾಸಿಗಳನ್ನೂ ಪೊಲೀಸರು ತಡೆದರು. ನಮ್ಮ ಮನೆಗೆ ಹೋಗಲು ಅವಕಾಶ ನೀಡಿ ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡರೂ ಅವಕಾಶ ಮಾಡಿಕೊಡ ದಿದ್ದಾಗ ಗ್ರಾಮಸ್ಥರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಬಳಿಕ ಬೆಟ್ಟದ ನಿವಾಸಿಗಳಿಗೆ ಪ್ರವೇಶ ನೀಡಲಾಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.