ಕಡೆ ಆಷಾಢ ಶುಕ್ರವಾರ: ಬೆಟ್ಟಕ್ಕೆ ಭಕ್ತರ ದಾಂಗುಡಿ
Team Udayavani, Jul 15, 2023, 4:14 PM IST
ಮೈಸೂರು: ಆಷಾಢ ಮಾಸದ ಕೊನೆಯ ಶುಕ್ರವಾರ ಅಂಗವಾಗಿ ಲಕ್ಷಾಂತರ ಭಕ್ತರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ದುರ್ಗೆಯ ದರ್ಶನ ಪಡೆದರು. ಈ ಮೂಲಕ ಚಾಮುಂಡಿಬೆಟ್ಟದಲ್ಲಿ ಸಂಭ್ರಮ, ಸಡಗರದಿಂದ ಆಷಾಢ ಶುಕ್ರವಾರ ಸುಸಂಪನ್ನವಾಯಿತು. ಮುಂಜಾನೆಯಿಂದಲೇ ದೇವಿಯ ದರ್ಶ ನಕ್ಕೆ ವಿವಿಧೆಡೆಗಳಿಂದ ಬೆಟ್ಟಕ್ಕೆ ಆಗಮಿಸಿದ ಭಕ್ತರು ನೂಕುನುಗ್ಗಲಿಲ್ಲದೆ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ದರ್ಶನ ಪಡೆದರು.
ಒಂದೆಡೆ ಹಿಮ ಮಳೆ ಸುರಿಯುತ್ತಿದ್ದರೆ, ಮತ್ತೂಂದೆಡೆ ತಾಯಿಯ ಜಯಘೋಷಗಳು ಮೊಳಗುತ್ತಿದ್ದವು. ಯಾವುದೇ ಗಲಾಟೆ ಗೊಂದಲಗಳಿಗೆ ಆಸ್ಪದ ಕೊಡದೆ ಸಾವಧಾನವಾಗಿ ಸರತಿ ಸಾಲಿನಲ್ಲಿ ದೇವಸ್ಥಾನಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆದು ಭಕ್ತಿಭಾವ ಮೆರೆದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ತೆರಳಿ ದರ್ಶನ ಪಡೆದರೆ, ಮಾಜಿ ಶಾಸಕರಾದ ಅನಿತಾ ಕುಮಾರ ಸ್ವಾಮಿ, ಎಲ್.ನಾಗೇಂದ್ರ ಸೇರಿದಂತೆ ಅನೇಕ ಗಣ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಮುಂಜಾನೆಯಿಂದಲೇ ಪೂಜೆ: ಮುಂಜಾನೆ 3 ಗಂಟೆಯಿಂದಲೇ ದೇವಸ್ಥಾನ ದಲ್ಲಿ ಪೂಜಾ ವಿಧಿವಿಧಾನಗಳು ಆರಂಭವಾದವು. ದೇವಿಗೆ ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿ ಸಲಾಯಿತು. 5.30ರಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಈ ಮಧ್ಯೆ ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ತಾಯಿಗೆ ಮತ್ತೂಮ್ಮೆ ಮಹಾಮಂಗಳಾರತಿ ನೆರವೇರಿಸಲಾಯಿತು. ರಾತ್ರಿ 10 ಗಂಟೆವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ನಾಗಲಕ್ಷ್ಮೀ ಅಲಂಕಾರ: ಕಳೆದ ಮೂರು ವಾರಗಳಂತೆ ದೇವಸ್ಥಾನ ವಿಶೇಷ ರೀತಿಯಲ್ಲಿ ಅಲಂಕೃತಗೊಂಡಿತ್ತು. ತಾಯಿ ಚಾಮುಂಡೇಶ್ವರಿಗೆ ವಿಶೇಷ ನಾಗಲಕ್ಷ್ಮೀ ಅಲಂಕಾರ ಮಾಡಲಾಗಿತ್ತು. ವಿವಿಧ ಬಣ್ಣಗಳ ಸೇವಂತಿಗೆ, ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ಬಗೆಯ ಹೂಗಳಿಂದ ದೇವಸ್ಥಾನದ ಆವರಣ ಅಲಂಕೃತಗೊಂಡಿತ್ತು. ದೇವಾಲಯದ ಪ್ರವೇಶದ್ವಾರ, ಹೊರಾವರಣವೂ ವಿಶೇಷವಾಗಿ ಸಿಂಗಾರಗೊಂಡಿತ್ತು.
ನಗರದೆಲ್ಲೆಡೆ ಪ್ರಸಾದ ವಿತರಣೆ : ಕಡೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ರಸ್ತೆ, ವೃತ್ತಗಳಲ್ಲಿ ಚಾಮುಂಡೇಶ್ವರಿ ಭಾವಚಿತ್ರವಿರಿಸಿ, ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಅಗ್ರಹಾರ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ಚಾಮರಾಜ ಜೋಡಿ ರಸ್ತೆ, ಎಂ.ಜಿ.ರಸ್ತೆ, ಕೆ.ಜಿ.ಕೊಪ್ಪಲು, ಒಂಟಿಕೊಪ್ಪಲು, ಇಲವಾಲ, ಹೂಟಗಳ್ಳಿ, ಹಿನ ಕಲ್, ಆಲನಹಳ್ಳಿ, ಹೆಬ್ಟಾಳ, ಕುಂಬಾರಕೊಪ್ಪಲು ಸೇರಿದಂತೆ ನಗರದ ಹಲವೆಡೆ ಪ್ರಸಾದ ವಿತರಣೆ ಮಾಡಲಾಯಿತು. ಸಾರ್ವಜನಿಕರು ಸರತಿ ಸಾಲಿನಲ್ಲಿ ಪ್ರಸಾದ ಸ್ವೀಕರಿಸಿದರು.
ಹರಕೆ ತೀರಿಸಿದ ಲಕ್ಷಾಂತರ ಭಕ್ತರು: ಬೆಟ್ಟಕ್ಕೆ ಮುಂಜಾನೆಯಿಂದಲೇ ಭಕ್ತರ ದಂಡು ಹರಿದುಬಂದಿತ್ತು. ಕೆಲವರು ಸಾರಿಗೆ ಬಸ್ ನಲ್ಲಿ ಬಂದರೆ ಇನ್ನು ಕೆಲವರು ಮೆಟ್ಟಿಲುಗಳು ಮೂಲಕ ಬೆಟ್ಟಕ್ಕೆ ಆಗಮಿಸಿದರು. ಚಾಮುಂಡಿಬೆಟ್ಟದ ಪಾದದಿಂದ ಪ್ರತಿ ಮೆಟ್ಟಿಲಿಗೂ ಅರಿಶಿಣ ಕುಂಕುಮ ಹೂಗಳನ್ನಿಟ್ಟು, ಕರ್ಪೂರ ಹಚ್ಚಿ ಭಕ್ತಿ ಭಾವದಿಂದ ಮೆಟ್ಟಿಲು ಹತ್ತಿ ತಮ್ಮ ಹರಕೆ ತೀರಿಸಿದರು. ಕಳೆದ ವಾರಗಳಂತೆಯೇ ಬೆಟ್ಟಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಬಹುಮಹಡಿ ಪಾರ್ಕಿಂಗ್ ಸ್ಥಳದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ 7ರಿಂದ ಪ್ರಾರಂಭವಾದ ಪ್ರಸಾದ ವಿತರಣೆ ರಾತ್ರಿಯವರೆಗೂ ನಡೆಯಿತು.
ಸುತ್ತೂರು ಮಠದಲ್ಲಿ ಪ್ರಸಾದ ವಿತರಣೆ: ಆಷಾಢ ಮಾಸದ ಕಡೆಯ ಶುಕ್ರವಾರದ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ಹೋಗುವ ಸಾವಿರಾರು ಭಕ್ತರು ಮಠಕ್ಕೆ ತೆರಳಿ ಪ್ರಸಾದ ಸ್ವೀಕರಿಸಿದರು. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸ್ವತಃ ತಾವೇ ಪ್ರಸಾದ ವಿತರಿಸಿದರು. ಆಷಾಢ ಮಾಸದ ಕೊನೆಯ ಶುಕ್ರವಾರದ ಹಿನ್ನಲೆಯಲ್ಲಿ ಶ್ರೀ ಮಠದಿಂದ ಭಕ್ತರಿಗೆ ಪ್ರಸಾದ ವಿತರಣೆ ಮಾಡುತ್ತಿದ್ದೇವೆ. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಒಳಿತು ಮಾಡಲಿ ಎಂದು ಆಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.