ನೆರವು ಸಾಮಗ್ರಿ ಸ್ವೀಕಾರ ಕೇಂದ್ರ ಆರಂಭ
Team Udayavani, Aug 18, 2018, 12:22 PM IST
ಮೈಸೂರು: ಕೊಡಗು ಸೇರಿದಂತೆ ವಿವಿಧೆಡೆ ಉಂಟಾಗಿರುವ ನೆರೆ ಹಾವಳಿಗೆ ಸಿಲುಕಿರುವ ಸಂತ್ರಸ್ತರಿಗೆ ತುರ್ತು ಅವಶ್ಯಕ ಸಾಮಗ್ರಿಗಳನ್ನು ನೀಡಲು ಸಾರ್ವಜನಿಕರು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಪುರಭವನದಲ್ಲಿ ಅವಶ್ಯಕ ಸಾಮಗ್ರಿಗಳ ಸ್ವೀಕಾರ ಕೇಂದ್ರವನ್ನು ತೆರೆಯಲಾಗಿದೆ.
ಈ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಮಹಾ ನಗರಪಾಲಿಕೆ ಆರೋಗ್ಯ ಮತ್ತು ಪರಿಸರ ವಿಭಾಗದ ಅಧಿಕಾರಿಗಳನ್ನು ನಿಯೋಜಿಸಿ ಪಾಲಿಕೆ ಆಯುಕ್ತ ಕೆ.ಎಚ್.ಜಗದೀಶ್ ಆದೇಶ ಹೊರಡಿಸಿದ್ದಾರೆ. ಈ ಸಾಮಗ್ರಿ ಸ್ವೀಕಾರ ಕೇಂದ್ರದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜು, ಪರಿಸರ ಎಂಜಿನಿಯರ್ ಮೈತ್ರಿ, ಆರೋಗ್ಯ ಪರಿವೀಕ್ಷಕರಾದ ಯೋಗೇಶ್, ದರ್ಶನ್, ಮಂಜುನಾಥ್ ಹಾಗೂ ಜಯಂತಿ ಕಾರ್ಯನಿರ್ವಹಿಸಲಿದ್ದಾರೆ.
ದಾನಿಗಳು ಹಾಗೂ ಸಂಘ ಸಂಸ್ಥೆಗಳವರು ನೀಡುವ ತುರ್ತು ಅವಶ್ಯಕ ಸಾಮಗ್ರಿಗಳನ್ನು ಈ ಕೇಂದ್ರದಲ್ಲಿ ಅಧಿಕೃತವಾಗಿ ಸ್ವೀಕರಿಸಲಾಗುವುದು. ದಾನಿಗಳು ನೀಡಿದ ಸಾಮಗ್ರಿಗಳನ್ನು ದಾಖಲಿಸಿಕೊಂಡು ಜಿಲ್ಲಾಡಳಿತದ ಮೂಲಕ ಕೊಡಗು ಹಾಗೂ ಇತರೆ ನೆರೆ ಹಾವಳಿ ಪೀಡಿತ ಪ್ರದೇಶಗಳಿಗೆ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.
ದಾನಿಗಳು, ಸಂಘ ಸಂಸ್ಥೆಗಳವರು ಮಾಹಿತಿಗಾಗಿ ನಗರಪಾಲಿಕೆ ಕಂಟ್ರೋಲ್ ರೂಂ ಸಂಖ್ಯೆ: 9449841195/96, 0821-2418800 ಇಲ್ಲಿಗೆ ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.