ಮತದಾರರ ನೆರವಿಗೆ ಸಹಾಯವಾಣಿ ಸಂಖ್ಯೆ 1950
Team Udayavani, Mar 23, 2019, 7:37 AM IST
ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ದೇಶದ ಮತದಾರರಿಗೆ ಎದುರಾಗುವ ವಿವಿಧ ಗೊಂದಲಗಳನ್ನು ಪರಿಹರಿಸಿಕೊಳ್ಳಲು 1950 ಉಚಿತ ಸಹಾಯವಾಣಿಯನ್ನು ಜಾರಿಗೆ ತಂದಿದೆ. ಇಡೀ ದೇಶದಲ್ಲಿ ಈ ಒಂದೇ ಸಂಖ್ಯೆಯು ಕಾರ್ಯ ನಿರ್ವಹಿಸಲಿದೆ.
ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ, ಹೊಸ ನೋಂದಣಿ, ಹಳೇಯ ಪಟ್ಟಿಯಲ್ಲಿ ತಿದ್ದುಪಡಿ ಹಾಗೂ ತಮ್ಮ ಮತಗಟ್ಟೆಯ ಬಗ್ಗೆ ಮಾಹಿತಿಯನ್ನು ಪಡೆಯಲು ಈ ಸಂಖ್ಯೆಗೆ ಕರೆ ಮಾಡಬಹುದು. ಜಿಲ್ಲಾ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಇದರ ಕಂಟ್ರೋಲ್ ರೂಂಅನ್ನು ತೆರೆಯಲಾಗಿದೆ. ಯಾವ ಜಿಲ್ಲೆಯಲ್ಲಿ ಕರೆ ಮಾಡುತ್ತೆವೆಯೋ ಆ ಜಿಲ್ಲಾ ಕೇಂದ್ರ ಕಂಟ್ರೋಲ್‌ರೂಂಗೆ ಕರೆ ಹೋಗುತ್ತದೆ.
ನಿಮ್ಮ ಮತದಾರರ ಪಟ್ಟಿಯಲ್ಲಿನ ಸಂದೇಹಗಳ ಬಗ್ಗೆ ಈ ಮೂಲಕ ಮಾಹಿತಿ ಪಡೆದು, ಸರಿಪಡಿಸಿಕೊಳ್ಳಬಹುದು. ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಚುನಾವಣಾ ಗುರುತಿನ ಚೀಟಿ ಸಂಖ್ಯೆ ಹೇಳಿದರೆ ನಿಮ್ಮ ಮತದಾರರ ಪಟ್ಟಿಯಲ್ಲಿರುವ ಗೊಂದಲದ ಬಗ್ಗೆ ನೀವು ಕುಳಿತಲ್ಲಿಯೇ ಕ್ಷಣಾರ್ಧದಲ್ಲಿ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಚುನಾವಣಾ ಆಯೋಗವು ಸಿದ್ಧಪಡಿಸಿರುವ ಈ ಸಹಾಯವಾಣಿಯ ಮೂಲಕ ನಿಮ್ಮ ಮತಗಟ್ಟೆ ಸಂಖ್ಯೆ ಹಾಗೂ ಮತದಾನ ಮಾಡಬೇಕಾದ ಸ್ಥಳದ ಬಗ್ಗೆಯೂ ನಿಖರವಾದ ಮಾಹಿತಿಯನ್ನು ಪಡೆಯಬಹುದು.
ವಿವಿಧ ಗ್ರಾಮಗಳಲ್ಲಿ ಮತದಾನ ಜಾಗೃತಿ
ಎಚ್.ಡಿ.ಕೋಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ನಾಗನಹಳ್ಳಿ, ಸವ್ವೆ, ಹೆಬ್ಬಲಗುಪ್ಪೆ, ಮಾದಾಪುರ ಹಾಗೂ ಎಚ್.ಡಿ.ಕೋಟೆ ಪಟ್ಟಣದಲ್ಲಿ ಸಾರ್ವಜನಿಕರಿಗೆ ಮತದಾನ ಕುರಿತು ಅರಿವು ಮೂಡಿಸಿ, ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭ ತಾಪಂ ಕಾರ್ಯನಿರ್ವಾಹಕ ಡಾ.ಕೆ.ಎ.ದರ್ಶನ್ ಮಾತನಾಡಿ, ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಹಾಕುವ ಮೂಲಕ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು. ಈ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಸಾರ್ವಜಿನಿಕರ ಮತಯಂತ್ರ ಬಳಕೆ ಕುರಿತು ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕ ಜೆರಾಲ್ಡ್ ರಾಜೇಶ್, ತಾಲೂಕು ಯೋಜನಾಧಿಕಾರಿ ರವೀಂದ್ರಕುಮಾರ್ ಧನಂಜಯ್, ಗುರು, ಎಸ್.ಪಿ.ಮಂಜು, ಪುಟ್ಟಸ್ವಾಮಿ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.