ನಂಜನಗೂಡು ಜೆಡಿಎಸ್‌ನಲ್ಲಿ ರಾಜೀನಾಮೆ ಪರ್ವ ಆರಂಭ


Team Udayavani, Feb 9, 2017, 12:00 PM IST

mys1.jpg

ನಂಜನಗೂಡು: ಕಳಲೆ ಕೇಶವಮೂರ್ತಿ ರಾಜೀನಾಮೆಯೊಂದಿಗೆ ತಾಲೂಕು ಜೆಡಿಎಸ್‌ನಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಮೊದಲಿಗೆ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ ಅವರಿಗೆ ಕೇಶವ ಮೂರ್ತಿ ರಾಜೀನಾಮೆ ಪತ್ರ ಸಲ್ಲಿಸಿದರು. ಬಳಿಕ ಪಟ್ಟಣದ ಘಟಕದ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯರೂ ಆದ ಮಂಜುನಾಥ್‌ ಮತ್ತು ಬೆಂಬಲಿಗರು ಬುಧವಾರ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದರು. 

ಇದರ ಬೆನ್ನಲ್ಲೇ ತಾಲೂಕು ಘಟಕದ ಅಧ್ಯಕ್ಷರಾಗಿ ಆರ್‌.ವಿ. ಮಹದೇವಸ್ವಾಮಿ ಅಧಿಕಾರ ವಹಿಸಿಕೊಂಡರು. ಪಕ್ಷದ ಕಾರ್ಯಾಲಯದಲ್ಲಿ ಜೆಡಿಎಸ್‌ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ ಕಾರ್ಯ ಕರ್ತರ ಸಮ್ಮುಖದಲ್ಲಿ ಮಹದೇವಸ್ವಾಮಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ವೇಳೆ ಮಾತನಾಡಿದ ನರಸಿಂಹಸ್ವಾಮಿ, ಕೇಶವಮೂರ್ತಿ ಅವರ ಈ ನಿಲುವನ್ನು ಪಕ್ಷದ ವರಿಷ್ಠರಾದ ಎಚ್‌.ಡಿ. ದೇವೇಗೌಡರಾಗಲೀ, ಎಚ್‌.ಡಿ. ಕುಮಾರಸ್ವಾಮಿ ಬೆಂಬಲಿಸಿರಲಿಲ್ಲ ಎಂದರು. 

ಕಳಲೆ ಅವರನ್ನೇ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ವರಿಷ್ಠರು ತೀರ್ಮಾನಿಸಿದ್ದರು. ಒಂದು ವೇಳೆ ಚುನಾವಣೆಯಲ್ಲಿ ಏರುಪೇರಾದರೆ, ವಿಧಾನ ಪರಿಷತ್‌ಗೆ ಕಳುಹಿಸುವ ಸಂಕಲ್ಪ ಮಾಡಿದ್ದರು. ಆದರೆ, ಇದೀಗ ಅವರು ಏಕಾಏಕಿ ಪಕ್ಷದಿಂದ ಹೊರ ನಡೆದಿರುವುದು ಆಘಾತ ವನ್ನುಂಟು ಮಾಡಿದೆ. ಏನೇ ಆಗಲಿ ತೆನೆ ಇಳಿಸಿ, ಕೈ ಹಿಡಿಯುತ್ತಿರುವ ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಕೋರಿದರು. 

ಅಭ್ಯರ್ಥಿಗಳಿಗೆ ಕೊರತೆಯಿಲ್ಲ: ಉಪ ಚುನಾವಣೆ ಯಲ್ಲಿ ಸ್ಪರ್ಧಿಸಲು ಪಕ್ಷದಲ್ಲಿ ಅಭ್ಯರ್ಥಿಗಳಿಗೆ ಬರವಿಲ್ಲ. ಈಗಾಗಲೇ ಸಾಕಷ್ಟು ಮಂದಿ ಮುಂದೆ ಬಂದಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮುಖಂಡರ ಸಭೆ ನಡೆಯಲಿದ್ದು, ಅಲ್ಲಿ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 

ಇನ್ನು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವ ನಗರಸಭೆ ಸದಸ್ಯ ಮಂಜುನಾಥ್‌ ಹಾಗೂ ಬೆಂಬಲಿಗರ ಕುರಿತು ಪ್ರತಿಕ್ರಿಯಿಸಿದ ನರಸಿಂಹಸ್ವಾಮಿ, ಅವರು ಪಕ್ಷದ ಗುರುತಿನ ಮೇಲೆ ಗೆದ್ದು ಬಂದಿದ್ದಾರೆ. ಪಕ್ಷವೇ ಬೇಡ ಎಂದ ಮೇಲೆ ಅದರಿಂದ ದೊರೆತಿರುವ ಅಧಿಕಾರವೇಕೆ ಬೇಕು. ನೈತಿಕತೆ ಇದ್ದರೆ ಮೊದಲು ತಮ್ಮ ನಗರಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜೀನಾಮೆ ಸಲ್ಲಿಸಿದ ಕಳಲೆ
ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಂಗಳವಾರ ಘೋಷಿಸಿದ್ದ ಕಳಲೆ ಕೇಶವಮೂರ್ತಿ, ಬುಧವಾರ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದರು. ಪಟ್ಟಣದಲ್ಲಿರುವ ಜೆಡಿಎಸ್‌ ಕಚೇರಿಗೆ ಆಗಮಿಸಿದ ಕೇಶವಮೂರ್ತಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ ಅವರಿಗೆ ಜೆಡಿಎಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.