![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 31, 2022, 10:53 AM IST
ಹುಣಸೂರು: ಎರಡು ವರ್ಷಗಳ ಪ್ರೀತಿಗೆ ಮನೆಯವರ ಅಡ್ಡಿಯಿಂದಾಗಿ ಮನೆ ತೊರೆದು ಕೊಡಗಿನಲ್ಲಿ ಮದುವೆಯಾಗಿದ್ದ ಜೋಡಿಯನ್ನು ಅಡ್ಡಗಟ್ಟಿ, ಯುವಕನ ಮೇಲೆ ಯುವತಿಯ ಕಡೆಯವರು ಸಿನಿಮೀಯ ರೀತಿಯಲ್ಲಿ ಹಲ್ಲೆ ನಡೆಸಿ ಯುವತಿಯನ್ನು ಕರೆದೊಯ್ದಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕದಬಹಳ್ಳಿಯ ಅಭಿಷೇಕ್ (24) ಪಕ್ಕದ ಗ್ರಾಮದ ಚೋಳೇನಹಳ್ಳಿಯ ಅನನ್ಯ(18) ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು.
ಮದುವೆ ಆಗಲು ಸಮ್ಮತಿ ನೀಡುವಂತೆ ಪೋಷಕರನ್ನು ಕೇಳಿದಾಗ ಯುವತಿಯ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮದುವೆಯಾಗಲು ಇಬ್ಬರು ತೀರ್ಮಾನಿಸಿ ಮನೆ ತೊರೆದಿದ್ದಾರೆ.
ಈ ನಡುವೆ ಮನೆ ತೊರೆದಿದ್ದ ಜೋಡಿ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬಾಲತ್ರಿಪುರ ಸುಂದರಿ ಅಮ್ಮನವರ ದೇವಸ್ಥಾನದಲ್ಲಿ ಮಾ.28 ರಂದು ಮದುವೆಯಾಗಿದ್ದರು. ಸಂಜೆ ಹುಣಸೂರು ನಗರದ ಬೈಪಾಸ್‌ನ ಕಾಫಿಡೇ ಬಳಿ ಕಾಫಿ ಕುಡಿಯಲು ಕಾರು ನಿಲ್ಲಿಸಿದ್ದ ವೇಳೆ ಯುವತಿಯ ತಂದೆ ಹಾಗೂ ಚಿಕ್ಕಪ್ಪ ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿ ಯುವಕ ಅಭಿಷೇಕ್‌ನ ಮೇಲೆ ಹಲ್ಲೆ ನಡೆಸಿ ಯುವತಿಯನ್ನು ಬಲವಂತವಾಗಿ ಕರೆದೊಯ್ದಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
ಹುಣಸೂರು ಪೊಲೀಸ್ ಠಾಣೆಯಲ್ಲಿ ಅಭಿಷೇಕ್ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ನಾಗಮಂಗಲ ಠಾಣೆಗೆ ಯುವತಿಯನ್ನು ಕರೆಸಿ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.