ನೀರಿಗೆ ಆಗ್ರಹಿಸಿ 3ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ
Team Udayavani, Jul 26, 2017, 12:10 PM IST
ಮೈಸೂರು: ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ ಕಾಲುವೆಗಳ ಮೂಲಕ ರೈತರ ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ 2ನೇ ದಿನಕ್ಕೆ ಕಾಲಿಟ್ಟಿತು. ನಗರದ ಕಾಡಾ ಕಚೇರಿ ಆವರಣದಲ್ಲಿ ಶಾಸಕ ಶಾಸಕ ಸಾ.ರಾ. ಮಹೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರವನ್ನು ಬೆಂಬಲಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ್‌ಸ್ವಾಮಿ ಸೇರಿದಂತೆ ಇನ್ನಿತರರು ಸಾಥ್ ನೀಡಿದರು.
ಎಚ್.ಡಿ. ಕುಮಾರ್‌ಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರ ಕೂಡಲೇ ಜಲಾಶಯಗಳಿಗೆ ನೀರು ಹರಿಸಬೇಕು. ಇಲ್ಲವಾದಲ್ಲಿ ಜು.31ರಂದು ಹುಣಸೂರಿನಿಂದ ಬೆಂಗಳೂರುವರೆಗೆ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರವನ್ನು ಎಚ್ಚರಿಸಲಾಗುವುದು ಎಂದರು.
ಮುಷ್ಕರದ ಹಿನ್ನೆಲೆಯಲ್ಲಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕಾವೇರಿ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಮಂಜುನಾಥ್, ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ನೀರು ಹರಿಸುವ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆಯಲಿದ್ದು, ಸಭೆಯ ತೀರ್ಮಾನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಶಾಸಕ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರಾದ ಅಪ್ಪಾಜಿಗೌಡ, ಕೆ.ಟಿ.ಶ್ರೀಕಂಠೇಗೌಡ, ನೂರಾರು ರೈತರು ಹಾಜರಿದ್ದರು.
ಆರೋಗ್ಯದಲ್ಲಿ ಏರುಪೇರು: ಕಾಡಾ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ನೇತೃತ್ವವಹಿಸಿರುವ ಶಾಸಕ ಸಾ.ರಾ.ಮಹೇಶ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆ ಸ್ಥಳಕ್ಕಾಗಮಿಸಿದ ವೈದ್ಯರು ತಪಾಸಣೆ ನಡೆಸಿ ಸಾ.ರಾ. ಮಹೇಶ್ ಕಡಿಮೆ ರಕ್ತದೊತ್ತಡಕ್ಕೆ ಒಳಗಾಗಿರುವುದು ತಿಳಿದುಬಂತು. ಈ ವೇಳೆ ವೈದ್ಯರಿಂದ ಚಿಕಿತ್ಸೆ ಪಡೆದ ಶಾಸಕರು, ಪ್ರತಿಭಟನೆ ಮುಂದುವರಿಸಿದರು.
ನಾಲೆಗಳಿಗೆ ನೀರು ಹರಿಸದಿದ್ರೆ 31ಕ್ಕೆ ವಿಧಾನಸೌಧ ಮುತ್ತಿಗೆ
ಮೈಸೂರು: ರಾಜ್ಯದಲ್ಲಿ ಎದುರಾಗಿರುವ ಬರದ ಹಿನ್ನೆಲೆ ಸರ್ಕಾರ ಶೀಘ್ರವೇ ನಾಲೆಗಳಿಗೆ ನೀರು ಹರಿಸದಿದ್ದಲ್ಲಿ ಜು.31ರಂದು ವಿಧಾನಸೌಧಕ್ಕೆ ಪಾದಯಾತ್ರೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಸಿದರು.
ನಗರದ ಕಾಡಾ ಕಚೇರಿ ಆವರಣದಲ್ಲಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಉಂಟಾಗಿರುವ ಮಳೆ ಅಭಾವದಿಂದ ಈ ಬಾರಿಯೂ ಭೀಕರ ಬರ ಆವರಿಸಿದೆ. ಆದರೂ ರಾಜ್ಯದ ರೈತರ ಬಗ್ಗೆ ಕಾಳಜಿ ತೋರದ ಸರ್ಕಾರ, ನ್ಯಾಯಾಲಯದ ಆದೇಶ ನೆಪವಾಗಿಟ್ಟುಕೊಂಡು ತಮಿಳುನಾಡಿಗೆ ನೀರು ಹರಿಸುತ್ತಿದೆ. ಆ ಮೂಲಕ ರಾಜ್ಯದ ರೈತರ ಹಿತವನ್ನು ಸಂಪೂರ್ಣ ಕಡೆಗಣಿಸಿರುವ ರಾಜ್ಯ ಸರ್ಕಾರ ತಮಿಳುನಾಡಿನ ರೈತರ ಹಿತ ಕಾಪಾಡಲು ಮುಂದಾಗಿದೆ ಎಂದು ಆರೋಪಿಸಿದರು.
ಅದರಂತೆ ಕಾವೇರಿ ಕಣಿವೆ ಜಲಾಶಯಗಳು ಭರ್ತಿಯಾಗುವುದಕ್ಕೂ ಮೊದಲೇ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ. ಹೀಗಾಗಿ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಬರಗಾಲದಿಂದ ತತ್ತರಿಸಿರುವ ರೈತರ ಜಮೀನುಗಳಿಗೆ ನೀರು ನೀಡಬೇಕು, ಇಲ್ಲದಿದ್ದಲ್ಲಿ ಜು.31ರಂದು ಹುಣಸೂರಿನಿಂದ ಬೆಂಗಳೂರುವರೆಗೆ ಪಾದಯಾತ್ರೆ ನಡೆಸುವುದಾಗಿ ಎಚ್ಚರಿಸಿದರು.
ರಾಜಕೀಯ ಪ್ರೇರಿತ: ಲಿಂಗಾಯತ-ವೀರಶೈವ ಪ್ರತ್ಯೇಕ ಎಂಬ ಚರ್ಚೆ ರಾಜಕೀಯ ಪ್ರೇರಿತವಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವೇ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ವೀರಶೈವ ಹಾಗೂ ವೀರಶೈವ ಲಿಂಗಾಯತ ಸಮುದಾಯ ಪ್ರತ್ಯೇಕ ಧರ್ಮವೆಂದು ಘೋಷಿಸಲು ಐವರು ಸಚಿವರು ರಾಜ್ಯದಲ್ಲಿ ಪ್ರವಾಸ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ.
ಆದರೆ ಸರ್ಕಾರದ ಈ ಚರ್ಚೆಯಿಂದ ರಾಜ್ಯದ ಜನರಿಗೆ ಯಾವ ಪ್ರಯೋಜನವೂ ಇಲ್ಲ, ಇದರ ಬದಲು ಐವರು ಸಚಿವರು ರೈತರ ಸಮಸ್ಯೆ ಬಗೆಹರಿಸಲು ಪ್ರವಾಸ ನಡೆಸಲಿ. ಶಿವನನ್ನು ಪೂಜಿಸುವ ಎಲ್ಲರೂ ಹಿಂದೂಗಳೇ ಎಂಬುದಾದರೆ ಲಿಂಗಾಯತ-ವೀರಶೈವ ಪ್ರತ್ಯೇಕ ಧರ್ಮ ಎನ್ನುವುದು ಸರಿಯಲ್ಲ. ಅಲ್ಲದೆ ಈ ಚರ್ಚೆ ಹೀಗೆ ಮುಂದುವರಿದರೆ ನಾಳೆ ಬೇರೆ ಸಮುದಾಯಗಳು ಸಹ ಪ್ರತ್ಯೇಕ ಧರ್ಮ ನೀಡುವಂತೆ ಸರ್ಕಾರದ ಮುಂದೆ ಬೇಡಿಕೆ ಇಡಲಿದ್ದು, ಇದನ್ನು ಈಡೇರಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.