“ಯೋಗ ಪ್ರವೀಣ-2017′ ಪ್ರಶಸ್ತಿ ಪ್ರದಾನ
Team Udayavani, Jun 21, 2017, 1:01 PM IST
ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್‌ನಿಂದ ಯೋಗ ಪ್ರವೀಣ ಪ್ರಶಸ್ತಿ-2017 ಪ್ರದಾನ ಮಾಡಲಾಯಿತು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಸರಳ ಸಮಾರಂಭದಲ್ಲಿ ಮೈಸೂರು ಯೋಗ ಅಸೋಸಿಯೇಷನ್ ಅಧ್ಯಕ್ಷ ಯೋಗ ಪ್ರಕಾಶ್, ಪೊಲೀಸ್ ಪಬ್ಲಿಕ್ ಸ್ಕೂಲ್‌ನ ಯೋಗ ಶಿಕ್ಷಕ ನಾಗಭೂಷಣ, ಹಿಮಾಲಯ ಫೌಂಡೇಷನ್ ಸಂಸ್ಥಾಪಕ ಎನ್.ಅನಂತ್, ಚಿನ್ಮಯಿ ಯೋಗ ಶಾಲೆ ಶಿಕ್ಷಕಿ ಕೆ.ಆರ್.ಪಾರ್ವತಮ್ಮ ಹಾಗೂ ನಿರ್ವಾಣ ಯೋಗ ಶಾಲೆಯ ಬಿ. ಶ್ರೀನಾಥ್ ಅವರುಗಳಿಗೆ ಯೋಗ ಪ್ರವೀಣ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಂ.ಎನ್.ನಟರಾಜು ಮಾತನಾಡಿ, ಯೋಗದ ಆಚರಣೆಯಲ್ಲಿ ಇಡೀ ವಿಶ್ವಕ್ಕೆ ಭಾರತ ಮಾದರಿಯಾಗಿದ್ದು, ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ವಿಶ್ವದ 192 ರಾಷ್ಟ್ರಗಳು ಜೂ.21 ರಂದು ವಿಶ್ವ ಯೋಗ ದಿನವನ್ನು ಆಚರಿಸುತ್ತಿರುವುದು ಅತ್ಯಂತ ಸಂತಸದ ಸಂಗತಿಯಾಗಿದೆ. ಅದರಂತೆ ಈ ಬಾರಿಯ ವಿಶ್ವ ಯೋಗ ದಿನದಂದು ಇಡೀ ವಿಶ್ವವೇ ಮೈಸೂರು ನಗರವನ್ನು ಬೆರಗುಗಣ್ಣಿನಿಂದ ನೋಡುವಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ವಿಶ್ವದಾಖಲೆ ಮಾಡುವ ನಿರೀಕ್ಷೆಯಲ್ಲಿ ನಡೆಸಲಾಗುತ್ತಿರುವ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ಜೂ.19ರಂದು ಆರಮನೆ ಆವರಣದಲ್ಲಿ ಸಾವಿರಾರು ಯೋಗಾಸಕ್ತರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ವಿಶ್ವದಾಖಲೆ ನಿರ್ಮಿಸಲು ಮುಂದಾಗಿದ್ದಾರೆ. ಇದರೊಂದಿಗೆ ಮತ್ತೂಂದು ಗಿನ್ನಿಸ್ ದಾಖಲೆ ನಿರ್ಮಾಣಕ್ಕೆ ಸಕಲ ಸಿದ್ಧತೆ ನಡೆಸಿರುವ ಜಿಲ್ಲಾಡಳಿತದೊಂದಿಗೆ ನಾವೆಲ್ಲರೂ ಕೈಜೋಡಿಸಬೇಕಿದೆ ಎಂದರು.
ಮುಡಾ ಮಾಜಿ ಅಧ್ಯಕ್ಷ ಕೆ.ಆರ್.ಮೋಹನ್ ಕುಮಾರ್, ಪಾಲಿಕೆ ಸದಸ್ಯ ಮಾ.ವಿ.ರಾಂಪ್ರಸಾದ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಸಮಾಜ ಸೇವಕ ರಘುರಾಮಯ್ಯ ವಾಜಪೇಯಿ, ಬಸವರಾಜು, ಎಚ್.ಎನ್. ಶ್ರೀಧರ್‌ಮೂರ್ತಿ, ಸುಮಂತ್‌ಶಾಸಿ, ವಿಕ್ರಂ ಅಯ್ಯಂಗಾರ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.