ನಾಳೆ ಬೆಂಬಲಿಗರೊಂದಿಗೆ ಕಳಲೆ ಕೈ ಸೇರ್ಪಡೆ
Team Udayavani, Feb 14, 2017, 12:28 PM IST
ಮೈಸೂರು: ಜೆಡಿಎಸ್ ತೊರೆದಿರುವ ಕಳಲೆ ಕೇಶವಮೂರ್ತಿ ಅವರು ಬುಧವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಬುಧವರ ಮಧ್ಯಾಹ್ನ 3ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಲಿದ್ದಾರೆ.
ಫೆ.7ರಂದು ನಂಜನಗೂಡಿನಲ್ಲಿ ತಮ್ಮ ಬೆಂಬಲಗರೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸೇರ್ಪಡೆಯನ್ನು ಅಧಿಕೃತವಾಗಿ ಘೋಷಿಸಿದ್ದ ಕಳಲೆ ಕೇಶವಮೂರ್ತಿ ಅವರು, ಅದರ ಹಿಂದಿನ ದಿನವೇ (ಫೆ.6) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪ ಡೆಗೆ ಹಸಿರು ನಿಶಾನೆ ಪಡೆದಿದ್ದರು. ಕಾಂಗ್ರೆಸ್ ಪಕ್ಷದ ವರಿಷ್ಠ ರಿಂದಲೇ ತಮಗೆ ಆಹ್ವಾನ ಬಂದಿತ್ತು.
ಈ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿಯವರನ್ನು ಕಂಡು ಮಾತನಾಡಿ ಅವರ ಒಪ್ಪಿಗೆ ಪಡೆದು ಕೊಂಡಿದ್ದು, ಬುಧವಾರ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಾಗಿ ಕಳಲೆ “ಉದಯವಾಣಿ’ಗೆ ತಿಳಿಸಿದರು. ಅಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು, ತಾಲೂಕು ಪಂಚಾಯಿತಿ ಹಾಗೂ ನಗರಸಭೆಯ ಹಲವು ಸದಸ್ಯರು ತಮ್ಮ ಜೊತೆೆಗೆ ಕಾಂಗ್ರೆಸ್ ಪಕ್ಷ ಸೇರಲಿದ್ದು, ನಂಜನಗೂಡಿನಿಂದ ಸುಮಾರು 300 ಜನರು ತಮ್ಮ ಜೊತೆಗೆ ಬೆಂಗಳೂರಿಗೆ ಬರಲಿದ್ದಾರೆ ಎಂದು ಕಳಲೆ ಕೇಶವಮೂರ್ತಿ ತಿಳಿಸಿದ್ದಾರೆ.
ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಕಳಲೆ, 40 ಸಾವಿರಕ್ಕೂ ಅಧಿಕ ಮತ ಪಡೆದು ಪ್ರಬಲ ಪೈಪೋಟಿ ನೀಡಿದ್ದರು. ಇದೀಗ ಬದಲಾದ ರಾಜಕೀಯ ವಿದ್ಯಮಾನದಲ್ಲಿ ನಂಜನಗೂಡು ಉಪವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ವಿರುದ್ಧ ಕಣಕ್ಕಿಳಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.