ಎಸ್‌ಡಿಪಿಐ, ಪಿಎಫ್ಐ ಸಂಘಟನೆ ನಿಷೇಧಿಸಿ

Team Udayavani, Jan 19, 2020, 3:00 AM IST

sdpi

ಪಿರಿಯಾಪಟ್ಟಣ: ದೇಶಾದ್ಯಂತ ಹಿಂದೂ ಕಾರ್ಯಕರ್ತರು, ಸಂಸದರು ಹಾಗೂ ಶಾಸಕರನ್ನು ಹತ್ಯೆಗೈಯಲು ಸಂಚು ರೂಪಿಸುತ್ತಿರುವ ಎಸ್‌ಡಿಪಿಐ, ಕೆಎಫ್ಡಿ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಪಿರಿಯಾಪಟ್ಟಣ ತಾಲೂಕು ಬಿಜೆಪಿ ಘಟಕದ ವತಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಶನಿವಾರ ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಆಘಾತಕಾರಿ ಮಾಹಿತಿ: ಈ ಸಂದರ್ಭದಲ್ಲಿ ತಾಲೂಕು ಘಟಕದ ಅಧ್ಯಕ್ಷ ಡಾ.ಪ್ರಕಾಶ್‌ ಬಾಬುರಾವ್‌ ಮಾತನಾಡಿ, ಇತ್ತೀಚಿಗೆ ಬೆಂಗಳೂರಿನಲ್ಲಿ ಜರುಗಿದ ಪೌರತ್ವ ತಿದ್ದುಪಡಿ ಕಾನೂನು ಜಾಗೃತಿ ಕಾರ್ಯಕ್ರಮ ಮುಗಿಸಿ ತೆರಳುವಾಗ ಆರ್‌ಎಸ್‌ಎಸ್‌ ಕಾರ್ಯಕರ್ತ ವರುಣ್‌ ಮೇಲೆ ಆರು ಜನರ ತಂಡ ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ್ದ ಆಘಾತಕಾರಿ ಮಾಹಿತಿ ರಾಜ್ಯ ಪೊಲೀಸ್‌ ಬಹಿರಂಗಪಡಿಸಿದ್ದು ಹಾಗೂ ವಿಚಾರಣೆ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸಂಚು ರೂಪಿಸಿದ್ದು ಬೆಳಕಿಗೆ ಬಂದಿರುವುದಲ್ಲದೆ ಈ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ ಎಂದರು.

ಹಿಂದೂಪರ ಸಂಘಟನೆ ಒತ್ತಾಯ: ರಾಜ್ಯದಲ್ಲಿ ಹಿಂದೆ ಎಸ್‌ಡಿಪಿಐ, ಕೆಎಫ್ಡಿ ಮತ್ತು ಪಿಎಫ್ಐ ಸಂಘಟನೆಗಳು ನೇರವಾಗಿ ಭಾಗಿಯಾಗಿರುವುದು ಹಲವಾರು ಸಂದರ್ಭಗಳಲ್ಲಿ ಸಾಬೀತಾಗಿದ್ದರೂ ಸಹ ಸಕ್ರಿಯವಾಗಿ ದೇಶದಲ್ಲಿ ಭಯೋತ್ಪಾದನೆ ಮತ್ತು ಉಗ್ರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ನಾಡಿನಲ್ಲಿ ಅಶಾಂತಿ ನಿರ್ಮಾಣ ಮಾಡಲು ಮುಂದಾಗಿದ್ದು ಕಂಡುಬಂದಿದೆ. ಆದ್ದರಿಂದ ರಾಜ್ಯಪಾಲರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಎಸ್‌ಡಿಪಿಐ, ಕೆಎಫ್ಡಿ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವಂತೆ ಶಿಫಾರಸು ಮಾಡಿ ದೇಶದಲ್ಲಿ ಶಾಂತಿ ನಿರ್ಮಾಣವಾಗುವುದನ್ನು ಹಾಗೂ ಅಮಾಯಕರು ಹತ್ಯೆಗೀಡಾಗುವುದನ್ನು ತಪ್ಪಿಸಬೇಕೆಂದು ತಾಲೂಕು ಬಿಜೆಪಿ ಘಟಕ ಹಾಗೂ ಹಿಂದೂಪರ ಸಂಘಟನೆಗಳು ಒತ್ತಾಯಿಸುತ್ತವೆ ಎಂದು ಮನವಿ ಸಲ್ಲಿಸಿದರು.

ಮಾಜಿ ಶಾಸಕ ಬಸವರಾಜು, ಸಂಘದ ಪ್ರಧಾನ ಕಾರ್ಯದರ್ಶಿ ಎಚ್‌.ಸಿ.ವೀರಭದ್ರ, ಯುವ ಮೋರ್ಚಾ ಘಟಕದ ಅಧ್ಯಕ್ಷ ಪಿ.ಟಿ.ಲಕ್ಷ್ಮೀನಾರಾಯಣ, ಸ್ಲಂ ಮೋರ್ಚಾದ ಅಧ್ಯಕ್ಷ ಷಣ್ಮುಖ, ಮಹಿಳಾ ಮೋರ್ಚಾ ಅಧ್ಯಕ್ಷೆ ನಳಿನಿ ಶಿವರಾಮೇಗೌಡ, ನಗರ ಘಟಕದ ಅಧ್ಯಕ್ಷ ಟಿ.ರಮೇಶ್‌, ಮುಖಂಡರಾದ ಮಾಗಳಿ ಸ್ವಾಮಿ, ರಾಜೇಗೌಡ, ಅನಿಲ…, ಕೊಪ್ಪ ಸೋಮಣ್ಣ, ಸುಂದರ, ಪ್ರಸಾದ್‌, ಯಾದವಚಾರ್‌, ಮೀಸೆ ರವಿ ಚೆನ್ನಬಸಪ್ಪ, ಬಿಜೆಪಿ ಹಾಗೂ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಇತರರು ಇದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.