ಮೈಸೂರು ಜಿಲ್ಲೆಯಲ್ಲಿ ಬಂದ್‌ ಸಂಪೂರ್ಣ ವಿಫ‌ಲ


Team Udayavani, Jun 13, 2017, 1:14 PM IST

mys4.jpg

ಮೈಸೂರು: ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ರೂಪಿಸುವುದು, ಕಳಸಾ-ಬಂಡೂರಿ ನೀರಾವರಿ ಯೋಜನೆ ಅನುಷ್ಠಾನ ಹಾಗೂ ರೈತರ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ಕನ್ನಡ ಒಕ್ಕೂಟ ಕರೆ ನೀಡಿದ್ದ ಬಂದ್‌ ಜಿಲ್ಲೆಯಲ್ಲಿ ವಿಫ‌ಲವಾಗಿದೆ. ನಗರ ಸೇರಿದಂತೆ ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು, ಕೆ.ಆರ್‌.ನಗರ, ಎಚ್‌.ಡಿ.ಕೋಟೆ, ನಂಜನಗೂಡು, ತಿ.ನರಸೀಪುರ ತಾಲೂಕುಗಳಲ್ಲೂ ಬಂದ್‌-ಪ್ರತಿಭಟನೆ ಯಾವುದೂ ಇಲ್ಲದೆ ಜನ ಜೀವನ ಎಂದಿನಂತಿತ್ತು.

ಕನ್ನಡ ಒಕ್ಕೂಟದ ಹೆಸರಿನಲ್ಲಿ ವಾಟಾಳ್‌ ನಾಗರಾಜ್‌ ಬಂದ್‌ಗೆ ಕರೆ ನೀಡುವಾಗ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯ ನಿರ್ಧಾರ ಕೈಗೊಂ ಡಿದ್ದಾರೆ. ಬಂದ್‌ ಕರೆಗೆ ಮುಂದಿಟ್ಟಿರುವ ಬೇಡಿಕೆಗಳು ಸರಿಯಿದ್ದರೂ ಅವರ ಏಕಪಕ್ಷೀಯ ಧೋರಣೆ ಸರಿಯಲ್ಲ. ಹೀಗಾಗಿ ಬಂದ್‌ ಬೆಂಬಲಿಸಲಿಲ್ಲ ಎಂದು ಸಾಹಿತಿಗಳು, ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು ಉದಯವಾಣಿಗೆ ತಿಳಿಸಿದ್ದಾರೆ.

ಬಂದ್‌ ಕರೆಗೆ ಬೆಂಬಲ ದೊರೆಯದ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿರಲಿಲ್ಲ. ಹೋಟೆಲ್‌ಗ‌ಳು, ಅಂಗಡಿ-ಮುಂಗಟ್ಟುಗಳು, ದೇವರಾಜ ಮಾರುಕಟ್ಟೆ, ಬಂಡೀಪಾಳ್ಯದ ಎಪಿಎಂಸಿ ಯಾರ್ಡ್‌ ಹಾಗೂ ನಗರದ ಬೀದಿ ಬದಿಗಳಲ್ಲಿನ ವ್ಯಾಪಾರ ಎಂದಿನಂತಿತ್ತು. ಸರ್ಕಾರಿ ಕಚೇರಿಗಳಲ್ಲೂ ನೌಕರರು ಎಂದಿನಂತೆ ಕಾರ್ಯನಿರ್ವಹಿಸಿದರು. ನಗರದ ಹೊರವಲಯದ ಕೈಗಾರಿಕಾ ಪ್ರದೇಶಗಳಲ್ಲಿರುವ ಯಾವುದೇ ಕೈಗಾರಿಕೆಗಳು ರಜೆ ಘೋಷಿಸಿರಲಿಲ್ಲ.

ನಗರ ಮತ್ತು ಗ್ರಾಮಾಂತರ ಸಾರಿಗೆ ಬಸ್‌ಗಳು ಎಂದಿನಂತೆ ಸಂಚರಿಸಿದವು. ರೈಲು ಸಂಚಾರ ಎಂದಿನಂತಿತ್ತು. ಆಟೋಗಳು, ಟಾಂಗಾ ಗಾಡಿಗಳು, ಖಾಸಗಿ ವಾಹನಗಳ ಸಂಚಾರ ಎಂದಿನಂತಿತ್ತು. ಚಿತ್ರಮಂದಿರಗಳಲ್ಲಿ ಎಂದಿನಂತೆ ಚಿತ್ರಪ್ರದರ್ಶನ ನಡೆದರೆ, ಪೆಟ್ರೋಲ್‌ ಬಂಕ್‌ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.

ಜಿಟಿ ಜಿಟಿ ಮಳೆ: ಮುಖ್ಯವಾಗಿ ಯಾವುದೇ ಸಂಘಟನೆಗಳೂ ಬಂದ್‌ ಕರೆಯನ್ನು ಬೆಂಬಲಿಸದಿದ್ದರಿಂದ ಬಲವಂತವಾಗಿ ಅಂಗಡಿ-ಮುಂಗಟ್ಟುಗಳ ಬಾಗಿಲು ಮುಚ್ಚಿಸುವ ದೃಶ್ಯ ಎಲ್ಲೂ ಕಂಡು ಬರಲಿಲ್ಲ. ಆದರೆ, ಮುಂಗಾರು ಹಂಗಾಮು ಆರಂಭವಾಗಿ ಮೋಡ ಮುಸುಕಿದ ವಾತಾವರಣದ ನಡುವೆ ಆಗಾಗ್ಗೆ ಜಿಟಿ ಜಿಟಿ ಮಳೆ ಸುರಿಯುತ್ತಿರುವುದರಿಂದ ಜನರು ರಸ್ತೆಗಳಿಯುವ ಸಾಹಸ ಮಾಡದಿರುವುದರಿಂದ ರಸ್ತೆಗಳಲ್ಲಿ ಜನ ಹಾಗೂ ವಾಹನ ಸಂಚಾರ ವಿರಳವಾಗಿತ್ತು.

ಇನ್ನು ಉತ್ತಮ ಮಳೆಯಾಗುತ್ತಿರುವುದರಿಂದ ಸತತ ಎರಡು ವರ್ಷಗಳಿಂದ ಬರದಿಂದ ಕಂಗೆಟ್ಟಿದ್ದ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿ ಜಮೀನಿನಲ್ಲಿರುವುದರಿಂದ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲೂ ಜನರ ಓಡಾಟ ಕಡಿಮೆ ಇತ್ತು. ಮದುವೆ ಮುಂತಾದ ಶುಭಕಾರ್ಯಗಳು, ಸಾರ್ವಜನಿಕ ಸಮಾರಂಭಗಳಲ್ಲೂ ಜನರ ಸಂಖ್ಯೆ ಕಡಿಮೆ ಇದ್ದದ್ದು ಕಂಡು ಬಂತು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.