ಫೆ.2ರಿಂದ 9ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ


Team Udayavani, Jan 19, 2017, 12:28 PM IST

mys1.jpg

ಮೈಸೂರು: 9ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಫೆಬ್ರವರಿ 2 ರಿಂದ 9ರವರೆಗೆ ಬೆಂಗಳೂರು ಮತ್ತು ಮೈಸೂರು ನಗರದಲ್ಲಿ ನಡೆಯಲಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್‌.ವಿ.ರಾಜೇಂದ್ರಸಿಂಗ್‌ ಬಾಬು ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಫೆ.2ರ ಸಂಜೆ ಸಿನಿಮೋತ್ಸವ ಉದ್ಘಾಟನೆಯಾಗಲಿದ್ದು, ಫೆ.9ರ ಸಂಜೆ ಮೈಸೂರು ಅರಮನೆ ಮುಂಭಾಗ ಸಿನಿಮೋತ್ಸವದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಎರಡೂ ಸಮಾರಂಭಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆವಹಿಸಲಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.

ಫೆ.3ರಿಂದ ಚಿತ್ರ ಪ್ರದರ್ಶನ ಆರಂಭವಾಗಲಿದ್ದು, ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಾಯನ್‌ ಮಾಲ್‌ನ ಪಿವಿಆರ್‌ ಸಿನಿಮಾಸ್‌ನ 11 ಪರದೆಗಳು ಮತ್ತು ಮೈಸೂರಿನ ಮಾಲ್‌ ಆಫ್ ಮೈಸೂರಿನ ಐನಾಕ್ಸ್‌ ಸಿನಿಮಾಸ್‌ನ 4 ಪರದೆಗಳಲ್ಲಿ ಪ್ರದರ್ಶನ ನಡೆಯಲಿದೆ. ಸುಮಾರು 55 ದೇಶಗಳ 200 ಚಿತ್ರಗಳು ಉತ್ಸವದ ಬೇರೆ ಬೇರೆ ವಿಭಾಗಗಳಲ್ಲಿ ಪ್ರದರ್ಶನ ಕಾಣಲಿವೆ. ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 125ನೇ ಜನ್ಮ ದಿನೋತ್ಸವದ ನೆನಪಿಗಾಗಿ ಡಾ.ಜಬ್ಟಾರ್‌ ಪಟೇಲ್‌ ನಿರ್ದೇಶನದ ಅಂಬೇಡ್ಕರ್‌ ಜೀವನಗಾಥೆಯ ಚಿತ್ರ ಪ್ರದರ್ಶಿಸುವ ಮೂಲಕ ಸಿನಿಮೋತ್ಸವದಲ್ಲಿ ಅಂಬೇಡ್ಕರ್‌ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗುವುದು ಎಂದರು. 

ಸಿನಿಮೋತ್ಸವ ಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ಏಷ್ಯನ್‌ ಚಿತ್ರಗಳ ಸ್ಪರ್ಧೆ, ಭಾರತೀಯ ಚಿತ್ರಗಳ ಸ್ಪರ್ಧೆ, ಕನ್ನಡ ಚಿತ್ರಗಳ ಸ್ಪರ್ಧೆ ಹಾಗೂ ಕನ್ನಡದ ಜನಪ್ರಿಯ ಮನರಂಜನಾ ಚಿತ್ರಗಳ ಸ್ಪರ್ಧೆ ನಡೆಯಲಿದೆ. ಅಲ್ಲದೆ, ಸಮಕಾಲೀನ ವಿಶ್ವ ಸಿನಿಮಾ, ದೇಶನೋಟ, ಪುನರವಲೋಕನ, ಗೌರವ, ಶತಮಾನೋತ್ಸವ ನೆನಪು, ವಿಶೇಷ ಗೌರವ ಹಾಗೂ ಕೊಂಡಾಡದ ಅದ್ಭುತ ಭಾರತ ಸೇರಿದಂತೆ 8 ವಿಭಾಗಗಳಲ್ಲಿ ಚಿತ್ರ ಪ್ರದರ್ಶನ ನಡೆಯಲಿದೆ. ಕೊಂಡಾಡದ ಅದ್ಭುತ ಭಾರತ ವಿಶೇಷ ವಿಭಾಗದಲ್ಲಿ ಭಾರತದ ಉಪ ಭಾಷೆಗಳಾದ ಕರ್ನಾಟಕದ ತುಳು, ಕೊಡವ, ಬಂಜಾರ, ಈಶಾನ್ಯ ರಾಜ್ಯಗಳ ಖಾಸಿ, ವಾಂಛೂ, ರಾಜ್‌ಭಾನ್‌ಸಿ ಮುಂತಾದ ಭಾಷೆಗಳ ಚಿತ್ರಗಳ ಪ್ರದರ್ಶನ ವಿರಲಿದೆ. ಏಷ್ಯನ್‌ ವಿಭಾಗ ಮತ್ತು ವಿಶ್ವ ಸಿನಿಮಾ ವಿಭಾಗದಲ್ಲಿ ಪ್ರದರ್ಶನವಾಗುವ ಸಾಕಷ್ಟು ಚಿತ್ರಗಳು ಬರ್ಲಿನ್‌, ಕಾನ್‌, ಟೊರೆಂಟೊ, ಗೋವಾ, ಮುಂಬೈ, ಕೇರಳ ಮುಂತಾದ ಕಡೆಗಳಲ್ಲಿ ನಡೆದ ಪ್ರತಿಷ್ಠಿತ ಚಿತ್ರೋತ್ಸವದಲ್ಲಿ ಪಾಲ್ಗೊಂಡ ಚಿತ್ರಗಳಾಗಿವೆ ಎಂದು ವಿವರಿಸಿದರು.

ಹಂಗೇರಿಯ ಜೋಲ್ಟನ್‌ ಫಾಬ್ರಿ, ಯು.ಕೆ.ಯ ಕೆನ್‌ಲೋಚ್‌, ಇರಾನ್‌ನ ಆಸರ್‌ ಫ‌ರ್ಹಾದಿ, ಕೊರಿಯಾದ ಕಿಂ ಕಿ ಡುಕ್‌, ರೊಮಾನಿಯಾದ ಕ್ರಿಸ್ತಿಯನ್‌ ಮುಂಗ್ಯು ಸೇರಿದಂತೆ ವಿಶ್ವಖ್ಯಾತಿಯ ಚಲನಚಿತ್ರ ನಿರ್ದೇಶಕರ ಚಿತ್ರಗಳು ಈ ಉತ್ಸವದಲ್ಲಿ ಪ್ರದರ್ಶನ ಕಾಣಲಿವೆ. ವಿಮರ್ಶಕರ ಪ್ರಶಸ್ತಿ ಪಡೆದ ಚಿತ್ರಗಳು ಮತ್ತು ನೆಟ್‌ಪ್ಯಾಕ್‌ ಪ್ರಶಸ್ತಿ ಪಡೆದ ಚಿತ್ರಗಳ ವಿಭಾಗ, ವಿಶೇಷ ವಿಷಯಾಧಾರಿತ ವಿಭಾಗ, ಸಾಕ್ಷÂಚಿತ್ರಗಳ ವಿಭಾಗ, ಬಯೋಪಿಕ್ಸ್‌ ವಿಭಾಗದಲ್ಲಿ ಚಿತ್ರ ಪ್ರದರ್ಶನ ನಡೆಯಲಿದೆ.

ಸಿನಿಮೋತ್ಸವದ ಭಾಗವಾಗಿ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಪುರಸ್ಕೃತ ವಿ.ಕೆ.ಮೂರ್ತಿ ಸ್ಮಾರಕ ಉಪನ್ಯಾಸ. ಧ್ವನಿ ವಿನ್ಯಾಸ, ಸಂಕಲ, ಚಿತ್ರಕಥಾ ರಚನೆ ಕುರಿತ ಕಮ್ಮಟ, ತಾಂತ್ರಿಕ ಆವಿಷ್ಕಾರಗಳ ಕುರಿತ ವಿಶೇಷ ಚರ್ಚೆ, ಲಿಂಗ ಸಂವೇದನೆ ಕುರಿತ ವಿಚಾರಗೋಷ್ಠಿ, ಚಿತ್ರಕಥಾ ರಚನೆ, ಸಾಕ್ಷ್ಯಾಚಿತ್ರ ತಯಾರಿಕೆ ಕುರಿತು ತಜ್ಞರಿಂದ ತರಗತಿ, ಚಿತ್ರ ವಿಮರ್ಶೆ, ಪುಸ್ತಕ ಬಿಡುಗಡೆ, ಚಲನಚಿತ್ರ ನಿರ್ದೇಶಕರು ಮತ್ತು ವಿಮರ್ಶಕರ ನಡುವೆ ವಿಚಾರ ವಿನಿಮಯ, ಕನ್ನಡ ರಾಜ್ಯೋದಯದ 60 ವರ್ಷಗಳ ಹಿನ್ನೆಲೆಯಲ್ಲಿ ಸಿಂಹಾವಲೋಕನ ಕಾರ್ಯಕ್ರಮಗಳನ್ನು ಒಳಗೊಂಡಿದ್ದು, ಇದೇ ಮೊದಲ ಬಾರಿಗೆ ವೆಬ್‌ಕಾಸ್ಟಿಂಗ್‌ ಮೂಲಕ ಬೆಂಗಳೂರಿನಲ್ಲಿ ನಡೆಯುವ ಚರ್ಚೆಗಳಲ್ಲಿ ಮೈಸೂರಿನ ಪ್ರತಿನಿಧಿಗಳೂ ಭಾಗವಹಿಸುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಡಿ.ರಂದೀಪ್‌, ವಾರ್ತಾ ಇಲಾಖೆ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌, ಅಕಾಡೆಮಿ ಕಾರ್ಯದರ್ಶಿ ಎಚ್‌.ಬಿ.ದಿನೇಶ್‌, ಸಿನಿಮೋತ್ಸವದ ಸಂಚಾಲಕ ವಿದ್ಯಾಶಂಕರ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನೋಂದಣಿ: ಸಿನಿಮೋತ್ಸವಕ್ಕೆ ಪ್ರತಿನಿಧಿಗಳ ನೋಂದಣಿ ಕಾರ್ಯ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಎನ್‌.ಆರ್‌.ವೃತ್ತದಲ್ಲಿರುವ ಚಲನಚಿತ್ರ ಅಕಾಡೆಮಿ ಕಾರ್ಯಾಲಯ, ಸುಚಿತ್ರಾ ಚಿತ್ರ ಸಮಾಜ ಮತ್ತು ಮೈಸೂರಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು. ಸಾರ್ವಜನಿಕರಿಗೆ 600 ರೂ., ವಿದ್ಯಾರ್ಥಿಗಳು, ಚಿತ್ರ ಸಮಾಜದ ಸದಸ್ಯರು, ಹಿರಿಯ ನಾಗರಿಕರು, ವಾಣಿಜ್ಯ ಮಂಡಳಿ ಮತ್ತು ಅಂಗಸಂಸ್ಥೆಗಳ ಸದಸ್ಯರಿಗೆ 300 ರೂ. ಪ್ರತಿನಿಧಿ ಶುಲ್ಕ ನಿಗದಿಪಡಿಸಲಾಗಿದೆ.

ಟಾಪ್ ನ್ಯೂಸ್

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

5(1

ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

4

Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.