ಭರವಸೆ ಟ್ರಸ್ಟ್ ನಿಂದ ಬುಡಕಟ್ಟು ಜನರ ಆರೋಗ್ಯ ತಪಾಸಣಾ ಶಿಬಿರ
Team Udayavani, Jan 23, 2023, 8:15 PM IST
ಚಾಮರಾಜನಗರ: ಬೆಂಗಳೂರಿನ ಭರವಸೆ ಟ್ರಸ್ಟ್ ವತಿಯಿಂದ ಸೂರ್ಯ ಫೌಂಡೇಶನ್ ಸಹಯೋಗದಲ್ಲಿ ತಾಲೂಕಿನ ಕೆ.ಗುಡಿಯಲ್ಲಿ ಸೋಲಿಗ ಬುಡಕಟ್ಟು ಜನರಿಗೆ ಖ್ಯಾತ ವೈದ್ಯ ಡಾ. ಆಂಜನಪ್ಪ ಅವರ ನೇತೃತ್ವದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ಎಚ್‌ಐವಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇದಲ್ಲದೇ ಬುಡಕಟ್ಟು ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಿ, ಉಚಿತವಾಗಿ ಸ್ಯಾನಿಟರಿ ಪ್ಯಾಡ್ ಮತ್ತು ಮೆನ್‌ಸ್ಟ್ರುಯಲ್ ಕಪ್‌ಗಳನ್ನು ವಿತರಿಸಲಾಯಿತು.
ಭರವಸೆ ಟ್ರಸ್ಟ್ ನ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಸೋಲಿಗರ ಆರೋಗ್ಯ ತಪಾಸಣೆ ನಡೆಸಲಾಯಿತು. ಡಾ. ಆಂಜನಪ್ಪ ನೇತೃತ್ವದಲ್ಲಿ ಐವರು ವೈದ್ಯರ ತಂಡವು 250ಕ್ಕೂ ಹೆಚ್ಚು ಸೋಲಿಗರ ಇಸಿಜಿ, ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ ನಡೆಸಿತು. ಉಚಿತವಾಗಿ ಔಷಧಿ ವಿತರಿಸಲಾಯಿತು. ಸೋಲಿಗರು ತಮ್ಮ ಪೋಡುಗಳಿಂದ ಬರಲು ವಾಹನ ವ್ಯವಸ್ಥೆ ಸಹ ಮಾಡಲಾಗಿತ್ತು.
ಉದ್ಘಾ ಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಆಂಜನಪ್ಪ , ಭರವಸೆ ಟ್ರಸ್ಟ್ ಮೂಲಕ ಉತ್ಸಾಹಿ ಯುವಕ ಯುವತಿಯರ ತಂಡ ಸಮಾಜಮುಖಿ ಕೆಲಸಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ. ನಿಮ್ಮ ಈ ಕಾರ್ಯಗಳಿಂದ ಅನೇಕ ಬಡ ಜನರಿಗೆ ಅನುಕೂಲವಾಗುತ್ತಿದೆ ಎಂದರು.
ಆರೋಗ್ಯವೇ ಭಾಗ್ಯ. ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಹೋಗಬೇಕು. ದುಶ್ಚಟಗಳನ್ನು ಬೆಳೆಸಿಕೊಳ್ಳಬಾರದು. ಪೌಷ್ಠಿಕ ಆಹಾರ ಸೇವನೆ ಮಾಡಬೇಕು ಎಂದು ಸಲಹೆ ನೀಡಿದರು. ಸೋಲಿಗ ಬುಡಕಟ್ಟು ಜನರಿಗೆ ತಾವು ಉಚಿತವಾಗಿ ಪೈಲ್‌ಸ್, ಹರ್ನಿಯಾ, ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆ ಮಾಡಿಕೊಡುವುದಾಗಿ, ಬೆಂಗಳೂರಿನ ಕಿಮ್‌ಸ್ ಆಸ್ಪತ್ರೆಯಲ್ಲಿ ರಿಯಾಯಿತಿ ದರದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಭರವಸೆ ತಂಡದ 25ಕ್ಕೂ ಹೆಚ್ಚು ಸ್ವಯಂ ಸೇವಕರು ಕನ್ನೇರಿ ಕಾಲೋನಿ, ಬೂತಾಣಿ ಪೋಡು ಮತ್ತಿತರ ಪೋಡುಗಳಿಗೆ ತೆರಳಿ ಆರೋಗ್ಯ ಜಾಗೃತಿ ಮೂಡಿಸಿದರು. ತಂಡದ ಸದಸ್ಯರಾದ ಪವಿತ್ರಾ ಕೃಷ್ಣ ಹಾಗೂ ಪವಿತ್ರಾ ರಮೇಶ್ ಅವರು, ಸೋಲಿಗ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯದ ಬಗ್ಗೆ ಹಾಗೂ ಪರಿಸರ ಸ್ನೇಹಿಯಾದ ಮೆನ್‌ಸ್ಟ್ರುಯಲ್ ಕಪ್‌ಗಳನ್ನು ಬಳಸುವ ಬಗ್ಗೆ ಅರಿವು ಮೂಡಿಸಿದರು. ಇದೇ ಸಂದರ್ಭದಲ್ಲಿ ಫೀಜಿ ನ್ಯಾಪ್ಕಿನ್ ಹಾಗೂ ಕಪ್‌ಗಳನ್ನು ಉಚಿತವಾಗಿ ವಿತರಿಸಲಾಯಿತು.
ಡಾ. ಅವಿಶೇಷ್ ಝಾ, ಡಾ. ವರುಣ್, ಡಾ. ಧೀರಜ್, ವೈದ್ಯಕೀಯ ಸಿಬ್ಬಂದಿಗಳಾದ ರೋಹನ್, ಸಬೀನಾ, ಭರವಸೆ ಟ್ರಸ್‌ಟ್ನ ಮೋಹನ್‌ಗೌಡ, ತಿಮ್ಮೇಗೌಡ, ರೂಪೇಶ್, ಪವನ್ ಧರೆಗುಂಡಿ, ಐಶ್ವರ್ಯಾ ರಾಜ್, ಸಹನಾ, ಸಿದ್ದುಗೌಡ, ಕವಿತಾ, ಹರೀಶ್ ಮತ್ತಿತರರು ಶಿಬಿರದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.